ಕಾರ್ಕಳ | ʼಕರುನಾಡ ಸಿರಿʼ ಪ್ರಶಸ್ತಿಗೆ ಅರ್ಜಿ ಆಹ್ವಾನ

ಕಾರ್ಕಳ : ಕಾರ್ಕಳ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ಡಾ. ರವೀಂದ್ರ ಶೆಟ್ಟಿ ಬಜಗೋಳಿ ಇವರ ಪ್ರಾಯೋಜಕತ್ವದಲ್ಲಿ ಕಾರ್ಕಳ ತಾಲೂಕಿನ ಉತ್ತಮ ಕನ್ನಡ ಮಾಧ್ಯಮ ಶಾಲೆಯನ್ನು ಆಯ್ಕೆ ಮಾಡಿ "ಕರುನಾಡ ಸಿರಿ-2025" ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಹಾಗೂ ಶಾಶ್ವತ ಫಲಕವನ್ನು ಒಳಗೊಂಡಿದೆ. ಶಾಲೆಯಲ್ಲಿ ನಡೆಸಿದ ಕನ್ನಡ ಕಾರ್ಯಕ್ರಮಗಳ ಸಂಪೂರ್ಣ ಮಾಹಿತಿಯನ್ನು ಒಳಗೊಂಡ ಅರ್ಜಿಯನ್ನು ದೇವದಾಸ್ ಕೆರೆಮನೆ ಗೌರವ ಕಾರ್ಯದರ್ಶಿಗಳು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ C/o "ವಂದ್ಯುಕ್ತ " ನಿಸರ್ಗನಗರ, ಶ್ಯಾಮಲಾ ಕಾಂಪೌಂಡ್, ಮಿಯ್ಯಾರು, ಮುಡಾರು, ಬಜಗೋಳಿ ಅಂಚೆ, ಕಾರ್ಕಳ - 574122 ದೂರವಾಣಿ: 916360686393, ಈ ವಿಳಾಸಕ್ಕೆ ದಿನಾಂಕ ಡಿ.10ರ ಒಳಗೆ ತಲುಪುವಂತೆ ಕಳುಹಿಸಿಕೊಡಬೇಕೆಂದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.
Next Story





