ಜಿಲ್ಲಾಮಟ್ಟದ ಬೋಚಿ ಸ್ಪರ್ಧೆಯಲ್ಲಿ ಕಾರ್ಕಳ ಅರುಣೋದಯ ವಿಶೇಷ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

ಕಾರ್ಕಳ : ವಿಶ್ವ ಅಂಗವಿಕಲ ದಿನಾಚರಣೆ ಅಂಗವಾಗಿ ಮಾನಸ ಪುನರ್ವಸತಿ ಮತ್ತು ತರಬೇತಿ ಕೇಂದ್ರ ಪಾಂಬೂರು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಲಯನ್ಸ್ ಕ್ಲಬ್ ಬಂಟಕಲ್ಲು ಜಾಸ್ಮಿನ್, ಇವರ ಜಂಟಿ ಆಶ್ರಯದಲ್ಲಿ ಪಾಂಬೂರಿನಲ್ಲಿ ನಡೆದ ಉಡುಪಿ ಜಿಲ್ಲಾಮಟ್ಟದ ಬೋಚಿ ಸ್ಪರ್ಧೆಯಲ್ಲಿ ಕಾರ್ಕಳದ ಅರುಣೋದಯ ವಿಶೇಷ ಶಾಲೆಯ ವಿದ್ಯಾರ್ಥಿಗಳು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.
ವಿದ್ಯಾರ್ಥಿಗಳಿಗೆ ತರಬೇತಿ ಹಾಗೂ ಪ್ರೋತ್ಸಾಹ ನೀಡಿದ ಶಿಕ್ಷಕರಿಗೆ ಜೀವನ ವೆಲ್ಪರ್ ಟ್ರಸ್ಟ್ (ರಿ)ನ ಆಡಳಿತ ಮಂಡಳಿ ಶಿಕ್ಷಕ, ಶಿಕ್ಷಕರೇತರ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಶುಭ ಹಾರೈಸಿದ್ದಾರೆ.
Next Story





