Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ: ಡಾ. ಟಿ.ಎಂ.ಎ ಪೈ ರೋಟರಿ...

ಕಾರ್ಕಳ: ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯಲ್ಲಿ ಐದು ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಸೇವೆಯ ಆಚರಣೆ

ವಾರ್ತಾಭಾರತಿವಾರ್ತಾಭಾರತಿ27 Aug 2026 8:12 AM IST
share
ಕಾರ್ಕಳ: ಡಾ. ಟಿ.ಎಂ.ಎ ಪೈ ರೋಟರಿ ಆಸ್ಪತ್ರೆಯಲ್ಲಿ ಐದು ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಸೇವೆಯ ಆಚರಣೆ

ಕಾರ್ಕಳ: ನಗರದ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನೆಫ್ರಾಲಜಿ ವಿಭಾಗದ ಸಹಯೋಗದಲ್ಲಿ ಐದು ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ ಸೇವೆ ಪೂರ್ಣಗೊಂಡ ಹಿನ್ನೆಲೆಯಲ್ಲಿ ‘5 ವರ್ಷಗಳ ಯಶಸ್ವಿ ಡಯಾಲಿಸಿಸ್ ಆರೈಕೆ: ಅಪ್‌ಡೇಟ್ ಮತ್ತು ಥ್ಯಾಂಕ್ಸ್ ಗಿವಿಂಗ್’ ಕಾರ್ಯಕ್ರಮ ನಡೆಯಿತು.

ಆಸ್ಪತ್ರೆಯ ಡಯಾಲಿಸಿಸ್ ಘಟಕದ ಬೆಳವಣಿಗೆ, ಗುಣಮಟ್ಟದ ಆರೈಕೆ ಹಾಗೂ ಆರ್ಥಿಕವಾಗಿ ಹಿಂದುಳಿದ ರೋಗಿಗಳಿಗೆ ಕೈಗೆಟುಕುವ ಮತ್ತು ಸಹಾನುಭೂತಿಯುತ ಡಯಾಲಿಸಿಸ್ ಸೇವೆ ಒದಗಿಸುವಲ್ಲಿ ಆಸ್ಪತ್ರೆಯ ಬದ್ಧತೆಯನ್ನು ಕಾರ್ಯಕ್ರಮದಲ್ಲಿ ಸ್ಮರಿಸಲಾಯಿತು.

ಡಯಾಲಿಸಿಸ್ ಘಟಕಕ್ಕೆ ರೋಟರಿ ಕ್ಲಬ್ ಮಣಿಪಾಲದ ‘ರೋಟರಿ ಗ್ಲೋಬಲ್ ಗ್ರಾಂಟ್’ ಮೂಲಕ ಮೂರು ಡಯಾಲಿಸಿಸ್ ಯಂತ್ರಗಳನ್ನು ಪ್ರಾಯೋಜಿಸಲಾಗಿದೆ. ಕಾರ್ಕಳದ ಜಮೀಯತುಲ್ ಫಲಾಹ್ ಹಾಗೂ ಹೆಬ್ರಿಯ ಬೆಳಂಜೆ ಸಂಜೀವ ಹೆಗ್ಡೆ ಟ್ರಸ್ಟ್ ಕೂಡ ಹೆಚ್ಚುವರಿ ಯಂತ್ರಗಳನ್ನು ದೇಣಿಗೆಯಾಗಿ ನೀಡಿವೆ. ಅಜೇಕಾರ್ ಪದ್ಮ ಗೋಪಾಲ್ ಎಜುಕೇಶನ್ ಟ್ರಸ್ಟ್, ಜಿ. ಶಂಕರ್ ಫ್ಯಾಮಿಲಿ ಟ್ರಸ್ಟ್ ಸೇರಿದಂತೆ ವಿವಿಧ ಕುಟುಂಬಗಳು ಹಾಗೂ ಹಿತೈಷಿಗಳ ಸಹಕಾರವನ್ನು ಈ ಸಂದರ್ಭದಲ್ಲಿ ಕೃತಜ್ಞತೆಯಿಂದ ಸ್ಮರಿಸಲಾಯಿತು.

ರೋಟರಿ ಕ್ಲಬ್ ಮಣಿಪಾಲದ ಅಧ್ಯಕ್ಷ ಆರ್‌ಟಿಎನ್. ಡಾ. ಪ್ರದೀಪ್ ಎಸ್. ಮಾತನಾಡಿ, ದೀರ್ಘಕಾಲ ಡಯಾಲಿಸಿಸ್ ಅಗತ್ಯವಿರುವ ರೋಗಿಗಳಿಗೆ ಉತ್ತಮ ಮೂತ್ರಪಿಂಡ ಆರೈಕೆ ಹಾಗೂ ಡಯಾಲಿಸಿಸ್ ಸೌಲಭ್ಯ ಕಲ್ಪಿಸುವಲ್ಲಿ ರೋಟರಿ ಗ್ಲೋಬಲ್ ಗ್ರಾಂಟ್‌ನ ಸಹಕಾರದ ಕುರಿತು ವಿವರಿಸಿದರು.

ಕಸ್ತೂರ್ಬಾ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಮಣಿಪಾಲದ ನೆಫ್ರಾಲಜಿ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ದರ್ಶನ್ ರಂಗಸ್ವಾಮಿ ಮಾತನಾಡಿ, ಡಯಾಲಿಸಿಸ್ ಚಿಕಿತ್ಸೆಯಲ್ಲಿ ಗುಣಮಟ್ಟ, ರೋಗಿಗಳ ಸುರಕ್ಷತೆ ಹಾಗೂ ನಿರಂತರ ಆರೈಕೆಯ ಮಹತ್ವವನ್ನು ವಿವರಿಸಿದರು. ಡಯಾಲಿಸಿಸ್ ಸೇವೆಗೆ ಸಹಕರಿಸಿದ ಆಸ್ಪತ್ರೆಯ ತಂಡ ಹಾಗೂ ದಾನಿಗಳಿಗೆ ಕೃತಜ್ಞತೆ ಸಲ್ಲಿಸಿದರು.

ಆಸ್ಪತ್ರೆಯ ಮುಖ್ಯ ಆಡಳಿತ ವೈದ್ಯಾಧಿಕಾರಿ ಡಾ. ಸಂಜಯ್ ಕುಮಾರ್ ಕೆ.ಆರ್. ಮಾತನಾಡಿ, ಕಳೆದ ಐದು ವರ್ಷಗಳಿಂದ ರೋಗಿಗಳು ದೂರದ ಪ್ರಯಾಣ ಮಾಡದೆ ಸುರಕ್ಷಿತ ಹಾಗೂ ನಿರಂತರ ಡಯಾಲಿಸಿಸ್ ಸೇವೆ ಪಡೆಯುವಂತೆ ಆಸ್ಪತ್ರೆ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದರು. ವಿವಿಧ ದಾನಿಗಳ ಸಹಕಾರದಿಂದ ಹಲವಾರು ರೋಗಿಗಳಿಗೆ ರಿಯಾಯಿತಿ ದರದಲ್ಲಿ ಡಯಾಲಿಸಿಸ್ ಸೌಲಭ್ಯ ಒದಗಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಕಳೆದ ಐದು ವರ್ಷಗಳ ಅವಧಿಯಲ್ಲಿ ಡಯಾಲಿಸಿಸ್ ಸೇವೆಯನ್ನು ಬಲಪಡಿಸಲು ಸಹಕರಿಸಿದ ವೈದ್ಯಕೀಯ ಸಿಬ್ಬಂದಿ, ಇತರ ಸಿಬ್ಬಂದಿ, ದಾನಿಗಳು, ಸಂಘ-ಸಂಸ್ಥೆಗಳು, ಕುಟುಂಬಗಳು ಹಾಗೂ ಹಿತೈಷಿಗಳ ಕೊಡುಗೆಯನ್ನು ಸ್ಮರಿಸಿ ಕೃತಜ್ಞತೆ ಸಲ್ಲಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X