Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ : ಅತಿಶಯ ಕ್ಷೇತ್ರ ನಲ್ಲೂರು...

ಕಾರ್ಕಳ : ಅತಿಶಯ ಕ್ಷೇತ್ರ ನಲ್ಲೂರು ಬಸದಿಯಲ್ಲಿ ದೀಪೋತ್ಸವ

ವಾರ್ತಾಭಾರತಿವಾರ್ತಾಭಾರತಿ28 Nov 2023 3:46 PM IST
share
ಕಾರ್ಕಳ : ಅತಿಶಯ ಕ್ಷೇತ್ರ ನಲ್ಲೂರು ಬಸದಿಯಲ್ಲಿ ದೀಪೋತ್ಸವ

ಕಾರ್ಕಳ : ಅತಿಶಯ ಕ್ಷೇತ್ರ ನಲ್ಲೂರು ಬಸದಿಯಲ್ಲಿ ಮಂಗಳವಾರ ಕೂಷ್ಮಾಂಡಿನೀ ಆರಾಧನೆ, ಉಯ್ಯಾಲೆ ಸೇವೆ ಮತ್ತು ದೀಪೋತ್ಸವ ಬಹಳ ವಿಜೃಂಭಣೆಯಿಂದ ನಡೆಯಿತು.

ಶ್ರವಣಬೆಳಗೊಳದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮಿಗಳವರು ಪ್ರಥಮವಾಗಿ ಅತಿಶಯ ಕ್ಷೇತ್ರ ನಲ್ಲೂರು ಬಸದಿಗೆ ಪುರಪ್ರವೇಶ ಮಾಡಿದರು. ಆ ಪ್ರಯುಕ್ತ ಪೂಜ್ಯ ಸ್ವಾಮೀಜಿಯವರಿಗೆ ಗುರುವಂದನೆ ಭಕ್ತಿ ಗೌರವ ಸಮರ್ಪಣಾ ಕಾರ್ಯಕ್ರಮ ಜರುಗಿದವು

ಜೈನ ಮಠ ಮೂಡುಬಿದಿರೆಯ ಪರಮಪೂಜ್ಯ ಭಾರತಭೂಷಣ ಜಗದ್ಗರು ಸ್ವಸ್ತಿ ಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಮಹಾಸ್ವಾಮೀಜಿಯವರ ಪಾವನ ಸಾನಿಧ್ಯ ಮತ್ತು ನೇತೃತ್ವ ಹಾಗೂ ದಿವ್ಯ ಉಪಸ್ಥಿತಿಯಲ್ಲಿ ಶ್ರೀ ಜೈನ ಮಠ ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗರು ಸ್ವಸ್ತಿ ಶ್ರೀ ಅಭಿನವ ಚಾರುಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರಿಗೆ ಗುರುವಂದನೆ ಭಕ್ತಿ ಗೌರವ ಸಮರ್ಪಿಸಿದರು.

ಗೌರವ ಸ್ವೀಕರಿಸಿ ಮಾತನಾಡಿದ ಸ್ವಾಮೀಜಿಯವರು, ದೀಪ ಅನ್ನೋದು ಶಾಶ್ವತವಲ್ಲ ದೀಪದ ಎಣ್ಣೆ ಮುಗಿದ ಕೂಡಲೇ ಆರಿ ಹೋಗುತ್ತದೆ. ಶಾಶ್ವತವಾದದ್ದು ಜ್ಞಾನ ದೀಪ ಅದು ಆತ್ಮದಲ್ಲಿರುತ್ತದೆ ಅದು ಯಾವತ್ತೂ ಆರಿ ಹೋಗಲ್ಲ ಅದು ಶಾಶ್ವತವಾದ ದೀಪ. ದೀಪವನ್ನು ಬೆಳಗುವಾಗ ಜ್ಞಾನ ದೀಪವನ್ನು ಹೃದಯದಲ್ಲಿ ಬೆಳಗುತ್ತೇವೆ ಎಂಬ ಸಂಕಲ್ಪದೊಂದಿಗೆ ದೀಪ ಬೆಳಗಿಸಿ. ನಿಮ್ಮ ಜೀವನ ಖಂಡಿತವಾಗಿಯೂ ಬೆಳಗುತ್ತದೆ. ದಾನದಿಂದ ದಾರಿದ್ರ್ಯ ನಾಶವಾಗುತ್ತದೆ. ಅತಿ ಹೆಚ್ಚು ದಾನ ವ್ಯಕ್ತಿಯ ಶ್ರೇಷ್ಠತೆಯನ್ನು ವೃದ್ಧಿಸುತ್ತದೆ ಎಂದರು.

ಸಂಧರ್ಭದಲ್ಲಿ ಮಾಜಿ ಸಚಿವ ಕೆ ಅಭಯಚಂದ್ರ ಜೈನ್,ಮಾತನಾಡಿ ಶ್ರವಣಬೆಳಗೊಳ ಹಾಗೂ ಮೂಡುಬಿದಿರೆ ಜೈನ ಸಮಾಜದ ಎರಡು ಕಣ್ಣುಗಳಿದ್ದಂತೆ. ಇಂದು ಜೈನ ಸಮುದಾಯ ಎದ್ದು ನಿಂತಿದೆ. ಹಿಂದೆ ಕೆಲವೇ ಜನ ಹಿರಿಯರ ಕೈಯಲ್ಲಿದ್ದ ಸಮಾಜ ಇಂದು ಸ್ವಾಭಿಮಾನದಲ್ಲಿ ಬದುಕುವ ಕಾಲಘಟ್ಟದಲ್ಲಿದೆ. ಕಳೆದ ಬಾರಿಯ ಮಹಾಮಸ್ತಕಾಭೀಷೇಕದ ಸಂದರ್ಭದಲ್ಲಿ ಸರಕಾರ ನೀಡಿದ ಜವಾಬ್ದಾರಿಯನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಿದ್ದೆ. ಮುಂದೆಯೂ ಸರಕಾರದ ಸವಲತ್ತುಗಳನ್ನು ಶ್ರವಣಬೆಳಗೊಳಕ್ಕೆ ದೊರಕಿಸಿಕೊಳ್ಳುವಲ್ಲಿ ನಿಸ್ವಾರ್ಥ ಪ್ರಯತ್ನ ಮಾಡುತ್ತೇನೆ ಎಂದರು.

ನ್ಯಾಯವಾದಿ ಎಂ. ಕೆ. ವಿಜಯ ಕುಮಾರ್ ಮಾತನಾಡಿ ಜೈನ ಸಮುದಾಯವು ಒಂದಾಗಬೇಕು ಎಂಬ ಧ್ಯೇಯ ವಾಕ್ಯದೊಂದಿಗೆ ನೇಮಿಸಾಗರವರ್ಣಿಯವರ ಸೇವೆ ಕಾರ್ಯ ಇಂದಿಗೂ ಅನುಸ್ಮರಣೀಯ. ಇಂದು ಬಸದಿಗಳ ಜೀರ್ಣೋದ್ಧಾರವಲ್ಲ, ನಮ್ಮ ಸಮಾಜದ ಜೀರ್ಣೋದ್ಧಾರ ವಾಗಬೇಕಾಗಿದೆ ಎಂದರು

ಯೋಗರಾಜ್ ಶಾಸ್ತ್ರಿ ಸ್ವಾಗತಿಸಿ, ನಲ್ಲೂರು ಬಸದಿ ಅಧ್ಯಕ್ಷರಾದ ವಜ್ರನಾಥ ಚೌಟ ಪ್ರಸ್ತಾವನೆಗೈದರು. ನಂದಕುಮಾರ್ ಶಾಸ್ತ್ರಿ ಹಾಗೂ ಪುರೋಹಿತರು ಶ್ರವಣಬೆಳಗೊಳ ಸ್ವಾಮಿಜೀಯ ಪಾದ ಪೂಜೆಗೈದರು. ಸುನೀಲ್ ಕುಮಾರ್ ಬಜಗೋಳಿಯವರು ಧನ್ಯವಾದ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X