ಕಾರ್ಕಳ: ಹೊಟೇಲ್ ಉದ್ಯಮಿ ವಿಷ ಸೇವಿಸಿ ಆತ್ಮಹತ್ಯೆ

ಉಡುಪಿ, ಆ.19: ಹೊಟೇಲ್ ಉದ್ಯಮಿ ಮೂಲತಃ ಕಾರ್ಕಳ ಬೈಲೂರಿನ ಕೃಷ್ಣರಾಜ್ ಹೆಗ್ಡೆ(45) ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಿರಿಯಡ್ಕ ಪೊಲೀಸ್ ಠಾಣಾ ವ್ಯಾಪ್ತಿಯ ಆತ್ರಾಡಿ ಎಂಬಲ್ಲಿ ನಡೆದಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇವರ ಮಾನಸಿಕವಾಗಿ ನೊಂದು ಜೀವನದಲ್ಲಿ ಜಿಗುಪ್ಸೆಗೊಂಡು ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.
ಉಡುಪಿ ಹಾಗೂ ಮಣಿಪಾಲದಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಇವರು ಪತ್ನಿ, ಪುತ್ರನನ್ನು ಅಗಲಿದ್ದಾರೆ.
Next Story





