ಕಾರ್ಕಳ | ಎದೆನೋವಿನಿಂದ ವ್ಯಕ್ತಿ ಮೃತ್ಯು

ಸಾಂದರ್ಭಿಕ ಚಿತ್ರ
ಕಾರ್ಕಳ, ನ.3: ತುಳಸಿ ಹಬ್ಬಕ್ಕೆ ಪಟಾಕಿ ಬಿಡುತ್ತಿರುವ ವೇಳೆ ಎದೆ ನೋವಿನಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನ.2ರಂದು ಸಂಜೆ 7.30ರ ಸುಮಾರಿಗೆ ನಡೆದಿದೆ.
ಮೃತರನ್ನು ನಿಟ್ಟೆ ಬಜಕಳ ಮನೆ ನಿವಾಸಿ ರಮೇಶ(35) ಎಂದು ಗುರುತಿಸಲಾಗಿದೆ.
ಇವರಿಗೆ ಒಂದು ವರ್ಷದ ಹಿಂದೆ ಮದುವೆ ಆಗಿದ್ದು, ಮೈಸೂರಿನಲ್ಲಿ ಹೊಟೇಲ್ ಕೆಲಸ ಮಾಡುತ್ತಿದ್ದರು. ಅ.23ರಂದು ದೀಪಾವಳಿ ಹಬ್ಬದ ನಿಮಿತ್ತ ಊರಿಗೆ ಬಂದಿದ್ದರು. ತುಳಸಿ ಹಬ್ಬದ ಪ್ರಯುಕ್ತ ಮನೆಯಲ್ಲಿ ಪಟಾಕಿ ಬಿಡುತ್ತಿರುವ ವೇಳೆ ಇವರಿಗೆ ಎದೆ ನೋವು ಕಾಣಿಸಿಕೊಂಡಿದ್ದು, ಇದರಿಂದ ತೀವ್ರವಾಗಿ ಅಸ್ವಸ್ಥಗೊಂಡ ಅವರು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟರು ಎಂದು ತಿಳಿದುಬಂದಿದೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





