Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ ಪುರಸಭೆಯಲ್ಲಿ ಕಚೇರಿ ಅವಧಿ ಮೀರಿ...

ಕಾರ್ಕಳ ಪುರಸಭೆಯಲ್ಲಿ ಕಚೇರಿ ಅವಧಿ ಮೀರಿ ಸಭೆ; ಮಹಿಳಾ ಸಿಬ್ಬಂದಿಗೆ ಅವಮಾನ, ಬೆದರಿಕೆ ಆರೋಪ

ವಾರ್ತಾಭಾರತಿವಾರ್ತಾಭಾರತಿ25 Jun 2026 12:07 PM IST
share
ಕಾರ್ಕಳ ಪುರಸಭೆಯಲ್ಲಿ ಕಚೇರಿ ಅವಧಿ ಮೀರಿ ಸಭೆ; ಮಹಿಳಾ ಸಿಬ್ಬಂದಿಗೆ ಅವಮಾನ, ಬೆದರಿಕೆ ಆರೋಪ

ಕಾರ್ಕಳ: ಕಾರ್ಕಳ ಪುರಸಭೆ ಸಿಬ್ಬಂದಿಗಳಿಗೆ ಕಚೇರಿ ಅವಧಿ ಮೀರಿ ಸಭೆ ನಡೆಸಿದ ಉಡುಪಿ ಜಿಲ್ಲಾ ಯೋಜನಾ ನಿರ್ದೇಶಕರು ಮಹಿಳಾ ಸಿಬ್ಬಂದಿಗಳನ್ನು ಗದರಿಸಿ, ಬೆದರಿಸಿ, ಏಕವಚನದಲ್ಲಿ ನಿಂದಿಸಿ ಅವಮಾನ ಮಾಡಿದ್ದಾರೆ ಹಾಗೂ ಕೆಲಸದಿಂದಲೇ ಕಿತ್ತು ಹಾಕುವುದಾಗಿ ಬೆದರಿಕೆ ಹಾಕಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಬುಧವಾರ ಸಂಜೆ 5.15ಕ್ಕೆ ಕಾರ್ಕಳ ಪುರಸಭೆ ಕಚೇರಿಗೆ ಬಂದ ಯೋಜನಾ ನಿರ್ದೇಶಕ ಸುಬ್ರಮಣ್ಯ ಶೆಟ್ಟಿ ನೇತೃತ್ವದ ತಂಡ, ಕಚೇರಿ ಸಮಯ ಮುಗಿದ ಬಳಿಕವೂ ಸಿಬ್ಬಂದಿಗಳು ತೆರಳದಂತೆ ಸೂಚಿಸಿ ಪುರಸಭಾ ಮುಖ್ಯಾಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿದೆ ಎನ್ನಲಾಗಿದೆ.

ಸಭೆಯಲ್ಲಿ ಪೌರ ಕಾರ್ಮಿಕರ ಕೊರತೆ ಇದ್ದರೂ, ಲಭ್ಯವಿರುವ ಸಿಬ್ಬಂದಿಯನ್ನು ಬಳಸಿಕೊಂಡು ಸ್ವಚ್ಛತೆ, ಮನೆ-ಮನೆ ಕಸ ಸಂಗ್ರಹಣೆ, ನಗರ ಸುಂದರೀಕರಣ ಹಾಗೂ ಚರಂಡಿ ಸ್ವಚ್ಛತೆ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದು ಸಿಬ್ಬಂದಿ ವಿವರಣೆ ನೀಡುತ್ತಿದ್ದ ವೇಳೆ, ಮಹಿಳಾ ಸಿಬ್ಬಂದಿಯೊಬ್ಬರನ್ನು ಏಕವಚನದಲ್ಲಿ ನಿಂದಿಸಿ, ಅವಮಾನಿಸಿ, ಇಲ್ಲಿಂದ ಓಡಿಸುವುದಾಗಿ ಬೆದರಿಕೆ ಹಾಕಿದ್ದಾರೆ ಎಂದು ತಿಳಿದುಬಂದಿದೆ.

ಇದೇ ವೇಳೆ, ತಮ್ಮ ಕಂಪ್ಯೂಟರ್ನಲ್ಲಿದ್ದ ಇಂಜಿನಿಯರಿಂಗ್ ವಿಭಾಗದ ಕಡತಗಳನ್ನು ಉದ್ದೇಶಪೂರ್ವಕವಾಗಿ ಅಳಿಸಲಾಗಿದೆ ಎಂದು ಕಿರಿಯ ಅಭಿಯಂತರರು (ಮಹಿಳಾ ಸಿಬ್ಬಂದಿ) ಮುಖ್ಯಾಧಿಕಾರಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ ಎಂದು ಹೇಳಲಾಗಿದೆ. ಸಭೆಯ ಸಂದರ್ಭ ದೂರು ನೀಡಿದ್ದ ಮಹಿಳಾ ಕಿರಿಯ ಅಭಿಯಂತರರನ್ನೇ ತರಾಟೆಗೆ ತೆಗೆದುಕೊಂಡ ಯೋಜನಾ ನಿರ್ದೇಶಕರು ಏಕವಚನದಲ್ಲಿ ನಿಂದಿಸಿ ಅವಮಾನಿಸಿದ್ದಾರೆ ಎನ್ನಲಾಗಿದೆ.

ರಾತ್ರಿ 8.30 ಆದರೂ ಮಹಿಳಾ ಸಿಬ್ಬಂದಿ ಮನೆಗೆ ತಲುಪದ ಹಿನ್ನೆಲೆಯಲ್ಲಿ ಅವರ ಕುಟುಂಬಸ್ಥರು ಪುರಸಭೆ ಕಚೇರಿಗೆ ಬಂದಾಗ ಸಭೆ ನಡೆಯುತ್ತಿರುವುದು ಕಂಡುಬಂದಿದೆ. ರಾತ್ರಿ ವೇಳೆಯಲ್ಲಿಯೂ ಕಚೇರಿ ತೆರೆದಿರುವುದು ಹಾಗೂ ವಿದ್ಯುತ್ ದೀಪಗಳು ಉರಿಯುತ್ತಿರುವುದನ್ನು ಕಂಡ ಸಾರ್ವಜನಿಕರು ಮತ್ತು ಪತ್ರಕರ್ತರೊಬ್ಬರು ಕಚೇರಿಗೆ ತೆರಳಿದ ವೇಳೆ ಸಭೆ ಕೂಡಲೇ ಸಭೆ ಮುಗಿಸಿ ಅಧಿಕಾರಿಗಳು ತಮ್ಮ ಸರಕಾರಿ ವಾಹನಗಳಲ್ಲಿ ತೆರಳಿದ್ದಾರೆ ಎಂದು ಹೇಳಲಾಗಿದೆ.

ದೂರದ ಊರು ಹಾಗೂ ಹಳ್ಳಿಗಳಿಗೆ ತೆರಳಬೇಕಿದ್ದ ಸಿಬ್ಬಂದಿ, ವಿಶೇಷವಾಗಿ ಮಹಿಳಾ ಸಿಬ್ಬಂದಿ, ಬಸ್ ಸೌಲಭ್ಯ ಇಲ್ಲದೆ ಪರದಾಡಿದ್ದು, ಸಾರ್ವಜನಿಕರ ನೆರವಿನಿಂದ ಮನೆ ತಲುಪುವಂತಾಯಿತು ಎಂದು ತಿಳಿದುಬಂದಿದೆ.

ಈ ಹಿಂದೆಯೂ ಪುರಸಭೆಯ ಕೆಲ ಅಧಿಕಾರಿಗಳು ಮಹಿಳಾ ಸಿಬ್ಬಂದಿಯನ್ನು ಕಚೇರಿಗೆ ಕರೆಸಿ ನಿಂದಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಿಬ್ಬಂದಿ ಹಾಗೂ ಅವರ ಕುಟುಂಬಸ್ಥರು ಆಗ್ರಹಿಸಿದ್ದಾರೆ.

Tags

KarkalaMunicipalityMeetingOfficeHumiliationThreatsWomen Staff
share
ವಾರ್ತಾಭಾರತಿ
ವಾರ್ತಾಭಾರತಿ
Next Story
X