ಕಾರ್ಕಳ | ಮಂಗಳೂರು ಮೂಲದ ವ್ಯಕ್ತಿಯ ಕೊಲೆ

ಕಾರ್ಕಳ: ಇಲ್ಲಿನ ಕುಂಟಲಪಾಡಿ ರಸ್ತೆಯ ಅಪಾರ್ಟ್ಟ್ ವೊಂದರಲ್ಲಿ ಒಂಟಿಯಾಗಿ ವಾಸವಾಗಿದ್ದ ವ್ಯಕ್ತಿಯೊಬ್ಬರನ್ನು ರಸ್ತೆ ಬದಿಯಲ್ಲಿ ಬರ್ಬರವಾಗಿ ಕೊಲೆಗೈದಿರುವ ಘಟನೆ ಇಂದು ಬೆಳಗ್ಗೆ ಬೆಳಕಿಗೆ ಬಂದಿದೆ.
ಕೊಲೆಯಾದ ವ್ಯಕ್ತಿಯನ್ನು ಮಂಗಳೂರು ಮೂಲದ ನವೀನ್ ಪೂಜಾರಿ (50) ಎಂದು ಗುರುತಿಸಲಾಗಿದೆ.
ಕುಂಟಲ್ಪಾಡಿ ಕೋಳಿ ಫಾರಂ ಹತ್ತಿರದ ಮೂರು ಮಾರ್ಗ ಸೇರುವಲ್ಲಿ (ಹೆದ್ದಾರಿ ಸೇರುವ ರಸ್ತೆ) ನವೀನ್ ರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಮೃತರ ದ್ವಿಚಕ್ರ ವಾಹನ ಪತ್ತೆಯಾಗಿದೆ.
ನವೀನ್ ಪೂಜಾರಿ ಹಣಕಾಸು ವ್ಯವಹಾರ ನಡೆಸುತ್ತಿದ್ದರು ಎನ್ನಲಾಗಿದೆ. ಪೊಲೀಸರು ತನಿಖೆ ಆರಂಭಿಸಿದ್ದು, ಕೊಲೆಯ ನಿಖರ ಕಾರಣ ಮತ್ತು ಆರೋಪಿಗಳ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ.
ಘಟನಾ ಸ್ಥಳಕ್ಕೆ ಉಡುಪಿ ಎಸ್ಪಿ ಹರಿರಾಮ್ ಶಂಕರ್, ಕಾರ್ಕಳ ಎಎಸ್ಪಿ ಡಾ.ಹರ್ಷಪ್ರಿಯಂವದ ಮೊದಲಾದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story







