Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ...

ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ26 Jan 2026 4:28 PM IST
share
ಕಾರ್ಕಳ ಬಾಹುಬಲಿ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಭೆ

ಕಾರ್ಕಳ: ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಮಹೋತ್ಸವದ ಪೂರ್ವಭಾವಿ ಸಭೆ ಕಾರ್ಕಳದ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಯಿತು.

ಸಭೆಯಲ್ಲಿ ಶ್ರೀ ಜೈನ ಧರ್ಮ ಜೀರ್ಣೋದ್ಧಾರಕ ಸಂಘ (ರಿ), ಕಾರ್ಕಳ ಅಧ್ಯಕ್ಷರು ಹಾಗೂ ಎಸ್‌ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು ಅಧ್ಯಕ್ಷತೆ ವಹಿಸಿದ್ದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಅವರು, ಮಸ್ತಕಾಭಿಷೇಕ ಮಹೋತ್ಸವದ ಹಿನ್ನೆಲೆಯಲ್ಲಿ ಕಾರ್ಕಳ ಮತ್ತು ಸುತ್ತಮುತ್ತಲಿನ ರಸ್ತೆ ಅಭಿವೃದ್ಧಿಗಾಗಿ 70 ಕೋಟಿ ರೂ. ಅನುದಾನವನ್ನು ಮಾಜಿ ಸಚಿವ ಅಭಯಚಂದ್ರ ಜೈನ್ ಅವರ ಮುಖಾಂತರ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಮಸ್ತಕಾಭಿಷೇಕದ ಯಶಸ್ವಿ ಆಯೋಜನೆಗಾಗಿ ಒಟ್ಟು 36 ಸಮಿತಿಗಳನ್ನು ರಚಿಸಲಾಗಿದ್ದು, ಮಹಿಳೆಯರು ಪೂರ್ಣ ಪ್ರಮಾಣದಲ್ಲಿ ಭಾಗವಹಿಸುವ ಉದ್ದೇಶದಿಂದ ಮಹಿಳಾ ಸಮಿತಿಯನ್ನೂ ರಚಿಸಲಾಗುವುದು. ಜೊತೆಗೆ, ಪ್ರತಿಭೆ ಮತ್ತು ಆಸಕ್ತಿಗೆ ಅನುಗುಣವಾಗಿ ಸಮಿತಿಗಳಿಗೆ ಸದಸ್ಯರನ್ನು ಸೇರ್ಪಡೆಗೊಳಿಸಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಕಾರ್ಕಳ ಗೊಮ್ಮಟಬೆಟ್ಟದಿಂದ ಆನೆಕೆರೆವರೆಗೆ, ಅನಂತಶಯನದಿಂದ ಗೊಮ್ಮಟಬೆಟ್ಟದವರೆಗೆ ಹಾಗೂ ಸುತ್ತಮುತ್ತಲಿನ ಪ್ರಮುಖ ರಸ್ತೆಗಳ ಅಗಲೀಕರಣ ಕುರಿತು ಚಿಂತನೆ ನಡೆಸಲಾಗಿದೆ. ಅಲ್ಲದೆ ಮಠದ ಗೆಸ್ಟ್‌ಹೌಸ್ ನವೀಕರಣ, ಯಾತ್ರಿ ನಿವಾಸದ ಅಭಿವೃದ್ಧಿ, ಹಾಗೂ ಯಾತ್ರಿ ನಿವಾಸದ ಕೋಣೆಗಳ ಸಂಖ್ಯೆ ಹೆಚ್ಚಿಸುವ ಕಾರ್ಯಗಳನ್ನು ಅಲ್ಪಸಂಖ್ಯಾತ ಇಲಾಖೆಯ ಅನುದಾನದಿಂದ ಕೈಗೊಳ್ಳಲಾಗುವುದು, ಇದರಿಂದ ಯಾತ್ರಾರ್ಥಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಹೇಳಿದರು.

ಸಭೆಯಲ್ಲಿ ವಿವಿಧ ಊರುಗಳಿಂದ ಆಗಮಿಸಿದ ಜೈನ ಶ್ರಾವಕ–ಶ್ರಾವಕಿಯರು ಮಸ್ತಕಾಭಿಷೇಕದ ಪೂರ್ವ ತಯಾರಿ ಕಾರ್ಯಕ್ರಮಗಳನ್ನು ಸುಸೂತ್ರವಾಗಿ ನಡೆಸಲು ಸಲಹೆ ಹಾಗೂ ಸೂಚನೆಗಳನ್ನು ನೀಡಿದರು.

ಮಾಜಿ ಸಚಿವ ಅಭಯಚಂದ್ರ ಜೈನ್, ಮೋಹನ್ ಪಾಡಿವಾಳ್, ಅಂಡಾರ್ ಮಹಾವೀರ್ ಜೈನ್, ಅನಂತ್ ರಾಜ್ ಪೂವಣಿ, ಸಂಪತ್ ಸಾಮ್ರಾಜ್ಯ ಶಿರ್ತಾಡಿ, ಪುಷ್ಪರಾಜ್ ಜೈನ್, ಸುಧೀರ್ ಪಾಡಿವಾಳ್, ರತ್ನಾಕರ್ ರಾಜ್, ಡಾ. ಜೀವಂದರ್ ಬಲ್ಲಾಳ್ ಕಾಂತಾವರ, ಕೆ.ಸಿ. ಧರಣೇಂದ್ರ ಕಳಸ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಅಜಿತ್ ಕೊಕ್ರಾಡಿ ಅವರು ನಿರೂಪಿಸಿದರು.

Tags

karkala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X