Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ : ರಸ್ತೆ ಗುಂಡಿಯಲ್ಲಿ ಗಿಡ...

ಕಾರ್ಕಳ : ರಸ್ತೆ ಗುಂಡಿಯಲ್ಲಿ ಗಿಡ ನೆಟ್ಟು ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ6 July 2026 2:36 PM IST
share
ಕಾರ್ಕಳ : ರಸ್ತೆ ಗುಂಡಿಯಲ್ಲಿ ಗಿಡ ನೆಟ್ಟು ಪ್ರತಿಭಟನೆ

ಕಾರ್ಕಳ: ರಸ್ತೆ ಹದಗೆಟ್ಟು ವಾಹನ ಸಂಚಾರವೇ ಅಸಾಧ್ಯವಾಗಿರುವ ಹಿನ್ನೆಲೆಯಲ್ಲಿ ಪುರಸಭೆ ಹಾಗೂ ಜನಪ್ರತಿನಿಧಿಗಳಿಗೆ ಸಾರ್ವಜನಿಕರು ಹಲವು ಬಾರಿ ಅಹವಾಲು ಸಲ್ಲಿಸಿದರೂ ಯಾವುದೇ ಪ್ರಯೋಜನವಾಗದ ಕಾರಣ, ಸಾರ್ವಜನಿಕರೇ ರಸ್ತೆ ಮಧ್ಯದ ಗುಂಡಿಗಳಲ್ಲಿ ಬಾಳೆ ಗಿಡ ನೆಟ್ಟು ಪ್ರತಿಭಟನೆ ನಡೆಸಿದ ಘಟನೆ ಕಾರ್ಕಳ ಪುರಸಭೆ ವ್ಯಾಪ್ತಿಯ ಕಲ್ಲೊಟ್ಟೆ-ಬಂಡಿಮಠ ರಸ್ತೆಯಲ್ಲಿ ನಡೆದಿದೆ.

ಕಾರ್ಕಳ ಮಾರ್ಕೆಟ್ ರಸ್ತೆಯಿಂದ ಪೆರ್ವಾಜೆ, ಕಲ್ಲೊಟ್ಟೆ ಮೂಲಕ ಬಂಡಿಮಠಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ತೀವ್ರ ಹದಗೆಟ್ಟಿದ್ದು, ವಾಹನ ಸಂಚಾರ ಮಾತ್ರವಲ್ಲದೆ ಜನಸಂಚಾರಕ್ಕೂ ತೊಂದರೆಯಾಗುವ ಸ್ಥಿತಿ ನಿರ್ಮಾಣವಾಗಿದೆ.

ಕಾರ್ಕಳದಿಂದ ಉಡುಪಿ ಹಾಗೂ ಹೆಬ್ರಿ ಕಡೆಗೆ ಸಂಚರಿಸುವ ಬಸ್‌ಗಳಿಗೆ ಈ ರಸ್ತೆ ಪ್ರಮುಖ ಸಂಪರ್ಕ ಮಾರ್ಗವಾಗಿದೆ. ಆದರೆ ರಸ್ತೆ ತುಂಬ ಗುಂಡಿಗಳು ಉಂಟಾಗಿರುವುದರಿಂದ ಭಾರೀ ವಾಹನಗಳು ಪ್ರಯಾಸಪಟ್ಟು ಸಂಚರಿಸುತ್ತಿದ್ದು, ಲಘು ವಾಹನಗಳು, ತ್ರಿಚಕ್ರ ವಾಹನಗಳು ಹಾಗೂ ದ್ವಿಚಕ್ರ ವಾಹನಗಳ ಸಂಚಾರ ಬಹುತೇಕ ಅಸಾಧ್ಯವಾಗಿದೆ ಎಂದು ಸಾರ್ವಜನಿಕರು ದೂರಿದ್ದಾರೆ.

ಸುಮಾರು ಒಂದು ವರ್ಷದಿಂದ ಅಮೃತ್ ಯೋಜನೆಯಡಿ ಈ ರಸ್ತೆಯಲ್ಲಿ ಪೈಪ್‌ಲೈನ್ ಕಾಮಗಾರಿ ನಡೆಯುತ್ತಿದ್ದು, ಮುಖ್ಯ ಕೊಳವೆ ಅಳವಡಿಸಲು ರಸ್ತೆ ಅಗೆದು ಬಳಿಕ ಮಣ್ಣು ಮುಚ್ಚಲಾಗಿದೆ. ಆದರೆ ಕಾಮಗಾರಿ ಸಮರ್ಪಕವಾಗಿ ಪೂರ್ಣಗೊಳಿಸದ ಕಾರಣ ರಸ್ತೆ ಅಲ್ಲಲ್ಲಿ ಕುಸಿದು ಗುಂಡಿಗಳು ನಿರ್ಮಾಣವಾಗಿವೆ. ಅಳವಡಿಸಿರುವ ಪೈಪ್‌ಲೈನ್‌ಗಳು ಪದೇ ಪದೇ ಸೋರಿಕೆಯಾಗುತ್ತಿದ್ದು, ಮರು ದುರಸ್ತಿ ಕಾಮಗಾರಿ ನಡೆಯುತ್ತಿರುವುದು ಸಾಮಾನ್ಯವಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ರಸ್ತೆ ಬದಿಯ ಚರಂಡಿಯ ಮೋರಿಯನ್ನೂ ಅಗೆದು ಹಾಕಲಾಗಿದ್ದು, ಕಾಮಗಾರಿ ನಿರ್ವಹಿಸುತ್ತಿರುವ ಗುತ್ತಿಗೆದಾರರು ಹಾಗೂ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳದ ಕಾರಣ ಮಳೆ ನೀರು ರಸ್ತೆಯಲ್ಲೇ ಹರಿದು ರಸ್ತೆ ಮತ್ತಷ್ಟು ಹದಗೆಟ್ಟಿದೆ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ಅಮೃತ್ ಯೋಜನೆ ಕಾಮಗಾರಿ ಸಮರ್ಪಕವಾಗಿ ನಡೆಯುತ್ತಿಲ್ಲ ಎಂಬ ದೂರುಗಳು ಹಲವು ಬಾರಿ ಬಂದಿದ್ದರೂ, ಪುರಸಭೆ ಹಾಗೂ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧಿಕಾರಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿ ಸಾರ್ವಜನಿಕರು ರಸ್ತೆಗಿಳಿದು ಪ್ರತಿಭಟನೆ ನಡೆಸಿದರು.

ಈ ರಸ್ತೆಯಲ್ಲಿ ಈಗಾಗಲೇ ಹಲವು ವಿದ್ಯಾರ್ಥಿಗಳು, ಮಹಿಳೆಯರು ಹಾಗೂ ದ್ವಿಚಕ್ರ ವಾಹನ ಸವಾರರು ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆಗಳು ನಡೆದಿವೆ. ಆದರೂ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಸಮಸ್ಯೆ ಪರಿಹರಿಸಲು ಮುಂದಾಗಿಲ್ಲ ಎಂದು ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಕ್ಷಣ ರಸ್ತೆ ದುರಸ್ತಿ ಕಾಮಗಾರಿ ಕೈಗೊಂಡು ಸಾರ್ವಜನಿಕರ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X