Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ : ಅಮ್ಮನ ನೆರವು ಚಾರಿಟೇಬಲ್...

ಕಾರ್ಕಳ : ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

ವಾರ್ತಾಭಾರತಿವಾರ್ತಾಭಾರತಿ23 Jun 2026 1:57 PM IST
share
ಕಾರ್ಕಳ : ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ವತಿಯಿಂದ ವಿದ್ಯಾರ್ಥಿವೇತನ ವಿತರಣೆ

ಕಾರ್ಕಳ : ಕಾರ್ಕಳದ ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ (ರಿ), ಜೆಸಿಐ ಕಾರ್ಕಳ ಮತ್ತು ಇತರ ದಾನಿಗಳ ನೆರವಿನಿಂದ ಕಾರ್ಕಳ ತಾಲೂಕಿನ ಸರಕಾರಿ ಶಾಲೆಗಳಲ್ಲಿ ಓದುತ್ತಿರುವ 90% ಅಂಕಗಳನ್ನು ಪಡೆದ ಎಸೆಸೆಲ್ಸಿ ಮತ್ತು ಪಿಯುಸಿ ವಿದ್ಯಾರ್ಥಿಗಳಿಗೆ ಈ ವರ್ಷ 25 ಲಕ್ಷ ರೂಪಾಯಿ ಮೊತ್ತದ ವಿದ್ಯಾರ್ಥಿವೇತನಗಳನ್ನು ವಿತರಿಸುವ ಯೋಜನೆ ಇದ್ದು, ಅದರ ಉದ್ಘಾಟನಾ ಕಾರ್ಯಕ್ರಮವು ಬೈಲೂರು ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಂಗಣದಲ್ಲಿ ಸೋಮವಾರ ಜರಗಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮೂಡಬಿದ್ರೆ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಮೋಹನ್ ಆಳ್ವ ಅವರು, ಶಿಕ್ಷಣವು ಮಾನವನ ಮೂಲಭೂತ ಅವಶ್ಯಕತೆ ಆಗಿದೆ. ಇಂದಿನ ದಿನಗಳಲ್ಲಿ ಶಿಕ್ಷಣರಂಗವು ಸ್ಪರ್ಧಾತ್ಮಕವಾಗಿ ಬೆಳೆಯುತ್ತಿದೆ. ಸಿಇಟಿ ಮೊದಲಾದ ಪರೀಕ್ಷೆಗಳಲ್ಲಿ ಇಂದು ಗ್ರಾಮೀಣ ವಿದ್ಯಾರ್ಥಿಗಳು ಉತ್ತಮ ಫಲಿತಾಂಶವನ್ನು ಪಡೆಯುತ್ತಿದ್ದು, ಅವರಿಗೆ ಸಮಾಜದ ನೆರವು ಅಗತ್ಯ ಇದೆ. ಅಮ್ಮನ ನೆರವು ಸಂಸ್ಥೆಯ ಮೂಲಕ ಅವಿನಾಶ್ ಜಿ. ಶೆಟ್ಟಿ ಅವರು ಈ ಸಮಾಜಕ್ಕೆ ಉತ್ತಮ ಮೇಲ್ಪಂಕ್ತಿಯನ್ನು ಹಾಕಿಕೊಡುತ್ತಿದ್ದಾರೆ. ಅವರಿಗೆ ಮತ್ತು ಅವರ ನೆರವಿಗೆ ನಿಂತ ಎಲ್ಲಾ ದಾನಿಗಳನ್ನೂ ನಾನು ಅಭಿನಂದಿಸುತ್ತೇನೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಕಾರ್ಕಳದ ಶಾಸಕರಾದ ವಿ. ಸುನೀಲ್ ಕುಮಾರ್ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ನೆರವು ಆರೋಗ್ಯಪೂರ್ಣ ಸಮಾಜದ ನಿರ್ಮಾಣವನ್ನು ಮಾಡುತ್ತದೆ ಎಂದರು.

ಈ ಕಾರ್ಯಕ್ರಮದಲ್ಲಿ ಆರೂವರೆ ಲಕ್ಷ ರೂಪಾಯಿ ಮೊತ್ತದ ವಿದ್ಯಾರ್ಥಿವೇತನಗಳನ್ನು ಅತಿಥಿಗಳು ಹಸ್ತಾಂತರ ಮಾಡಿದರು.

ತುಳು ಸಿನಿಮಾದ ಪ್ರಸಿದ್ಧ ನಟರಾದ ಅರ್ಜುನ್ ಕಾಪಿಕಾಡ್ ಅವರು ಶುಭಾಶಂಸನೆ ಮಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಬ್ಬ ಕಲಾವಿದ ಇರುತ್ತಾನೆ. ಕಲೆಯನ್ನು ನಂಬಿ ಬದುಕುವವರನ್ನು ಕಲೆಯು ಎಂದಿಗೂ ಕೈಬಿಡುವುದಿಲ್ಲ ಎಂದರು.

ಇದೇ ಸಂದರ್ಭದಲ್ಲಿ ಬೈಲೂರು ಸರಕಾರಿ ಕಾಲೇಜಿನ ಟಾಪರ್ ವಿದ್ಯಾರ್ಥಿಗಳಿಗೆ ನೀಡಲಾಗುವ ದೇಶಾ ಫೌಂಡೇಶನ್ ಸಂಸ್ಥೆಯ 1,05,000 ರೂ. ಮೊತ್ತದ ಆರು ವಿದ್ಯಾರ್ಥಿ ವೇತನಗಳನ್ನು ಡಾ. ಮೋಹನ್ ಆಳ್ವ ಮತ್ತು ವಿ. ಸುನೀಲ್ ಕುಮಾರ್ ಅವರು ಹಸ್ತಾಂತರ ಮಾಡಿ ಅಭಿನಂದಿಸಿದರು. ಪ್ರಾಂಶುಪಾಲರು ದೇಶಾ ಟ್ರಸ್ಟ್‌ನ ನೆರವನ್ನು ಸ್ಮರಿಸಿದರು.

ಕಾರ್ಕಳ ಕ್ರಿಯೇಟಿವ್ ಕಾಲೇಜಿನ ಸ್ಥಾಪಕರಲ್ಲಿ ಒಬ್ಬರಾದ ಡಾ. ಗಣನಾಥ ಶೆಟ್ಟಿ, ತುಳು ಸಿನೆಮಾ ವಿತರಕರಾದ ಸಚಿನ್, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಸಂತೋಷ್ ವಾಗ್ಲೆ, ಸಮಾಜ ಸೇವಕರಾದ ಸುಮಿತ್ ಬೈಲೂರು, ಕಾಲೇಜಿನ ಪ್ರಾಚಾರ್ಯರಾದ ಸೀತಾರಾಮ, ಉಪಪ್ರಾಚಾರ್ಯರಾದ ನಾಗರಾಜ್, ಎಸ್‌ಡಿಎಂಸಿ ಅಧ್ಯಕ್ಷರಾದ ಸ್ಟೀವನ್ ಡಿಸೋಜಾ ಕಾರ್ಯಕ್ರಮದ ಅತಿಥಿಗಳಾಗಿ ವಿದ್ಯಾರ್ಥಿಗಳಿಗೆ ಶುಭವನ್ನು ಹಾರೈಸಿದರು.

ಅಮ್ಮನ ನೆರವು ಫೌಂಡೇಶನ್ ಇದರ ಪ್ರವರ್ತಕರಾದ ಅವಿನಾಶ್ ಜಿ. ಶೆಟ್ಟಿ ಅವರು ಎಲ್ಲರ ನೆರವನ್ನು ಸ್ಮರಿಸಿದರು. ಫೌಂಡೇಶನ್ ಮಾರ್ಗದರ್ಶಕರಾದ ವಸಂತ್ ಎಂ. ಅವರು ಸ್ವಾಗತಿಸಿದರು. ಶಿಕ್ಷಕ ರಾಜೇಂದ್ರ ಭಟ್ ಕೆ. ಅವರು ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X