ಕಾರ್ಕಳ : ಕುಸಿದು ಬಿದ್ದು ವಿದ್ಯಾರ್ಥಿನಿ ಮೃತ್ಯು

ಕಾರ್ಕಳ : ಕಾರ್ಕಳ ತಾಲೂಕಿನ ಮಿಯ್ಯಾರು ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಕುಸಿದು ಬಿದ್ದು ಮೃತಪಟ್ಟ ಘಟನೆ ಅ.28ರಂದು ನಡೆದಿದೆ.
ಬಾಗಲಕೋಟೆ ಮೂಲದ ಮೇಘನಾ (13) ಮೃತಪಟ್ಟ ಬಾಲಕಿ. ಬುಧವಾರ ಬೆಳಗ್ಗೆ ಬಾಲಕಿ ಮೂರ್ಛೆ ತಪ್ಪಿ ಕುಸಿದು ಬಿದ್ದಿದ್ದಾಳೆ ಎನ್ನಲಾಗಿದ್ದು, ತಕ್ಷಣ ಶಾಲಾ ಸಿಬ್ಬಂದಿ ಆಕೆಯನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದು, ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದನ್ನು ದೃಢಪಡಿಸಿದ್ದಾರೆ.
ಬಾಲಕಿಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲಕ್ಕೆ ರವಾನಿಸಲಾಗುವುದು ಎಂದು ತಿಳಿದುಬಂದಿದೆ. ಕಾರ್ಕಳ ನಗರ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
Next Story




