Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಾರ್ಕಳ ತಾಲೂಕು 21ನೇ ಕನ್ನಡ ಸಾಹಿತ್ಯ...

ಕಾರ್ಕಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಿದ್ದಾಪುರ ವಾಸುದೇವ ಭಟ್ಟ ಆಯ್ಕೆ

ವಾರ್ತಾಭಾರತಿವಾರ್ತಾಭಾರತಿ7 Dec 2025 10:56 AM IST
share
ಕಾರ್ಕಳ ತಾಲೂಕು 21ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಿದ್ದಾಪುರ ವಾಸುದೇವ ಭಟ್ಟ ಆಯ್ಕೆ

ಕಾರ್ಕಳ : ಕಾರ್ಕಳ ತಾಲೂಕು ಇಪ್ಪತ್ತೊಂದನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷರಾಗಿ ಸಿದ್ಧಾಪುರ ವಾಸುದೇವ ಭಟ್ಟ ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲೂಕು ಘಟಕ ಪ್ರಕಟಣೆಯಲ್ಲಿ ತಿಳಿಸಿದೆ.

ಇವರು ಉಡುಪಿ ಜಿಲ್ಲೆ ಕುಂದಾಪುರ ತಾಲ್ಲೂಕು ಸಿದ್ದಾಪುರದ ಲಕ್ಷ್ಮಣ ಭಟ್ ಮತ್ತು ರಾಧಾಬಾಯಿ ದಂಪತಿ ಪುತ್ರರಾಗಿ 1960ರ ಅಕ್ಟೋಬರ್ 20ರಂದು ಜನಿಸಿದರು.

ವಾಸುದೇವ ಭಟ್ಟ ಅವರು ತಮ್ಮ ಪ್ರಾಥಮಿಕ ಶಾಲಾ ಶಿಕ್ಷಣ ಐದನೇ ತರಗತಿಯವರೆಗೆ ಸಿದ್ದಾಪುರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪಡೆದು ಮುಂದೆ ಸಂಸ್ಥಾನ ಕಾಶೀಮಠಾಧೀಶ ಶ್ರೀ ಸುಧೀಂದ್ರ ತೀರ್ಥರು ಸ್ಥಾಪಿಸಿದ ಕುಂದಾಪುರ ತಾಲ್ಲೂಕಿನ ಬಸ್ರೂರು ಶ್ರೀ ಭುವನೇಂದ್ರ ಬಾಲಕಾಶ್ರಮದ ಆಶ್ರಯ ಪಡೆದರು. ಎಸೆಸೆಲ್ಸಿವರೆಗೆ ಶಾಲಾ ಶಿಕ್ಷಣದ ಜೊತೆಗೆ ಶಿಸ್ತುಬದ್ಧ ಜೀವನವನ್ನು, ಆಶ್ರಮದಲ್ಲಿದ್ದುಕೊಂಡು ಆರು ಮತ್ತು ಏಳನೇ ತರಗತಿಯನ್ನು ಬಸ್ರೂರು ಹಿಂದೂ ಹಿರಿಯ ಪ್ರಾಥಮಿಕ ಶಾಲೆಯಲ್ಲೂ ಎಸೆಸೆಲ್ಸಿ ತನಕದ ಶಿಕ್ಷಣವನ್ನು ಬಸ್ರೂರು ಸರ್ಕಾರಿ ಪ್ರೌಢಶಾಲೆಯಲ್ಲಿಯೂ ಕಲಿತರು..

ಎಸೆಸೆಲ್ಸಿ ಪರೀಕ್ಷೆಯಲ್ಲಿ ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾಗಿ ತರುವಾಯ ಭಟ್ಟರು ಆಶ್ರಮದಲ್ಲೇ ಇದ್ದು ಅಲ್ಲಿಯ ಸಮೀಕ್ಷಕರಿಗೆ ಸಹಾಯಕರಾಗಿ ಬಸ್ರೂರು ಶ್ರೀ ಶಾರದಾ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮುಂದುವರಿಸಿದರು. ಕಾಲೇಜಿನ ಮೂಲಕ ಜಿಲ್ಲಾ, ರಾಜ್ಯ ಮಟ್ಟದ ಭಾಷಣ, ಚರ್ಚಾ ಸ್ಪರ್ಧೆಗಳಲ್ಲಿ ಬಹುಮಾನಗಳಿಸಿ ಕಾಲೇಜಿಗೆ ಖ್ಯಾತಿಯನ್ನು ತಂದುಕೊಟ್ಟರು.

ವಾಸುದೇವ ಭಟ್ಟರು ಬಿ.ಎ ಪದವಿಯನ್ನು ಪ್ರಥಮ ದರ್ಜೆಯಲ್ಲಿ ತೇರ್ಗಡೆಯಾದರು. ಕಾಲೇಜಿನ ಕನ್ನಡ ಉಪನ್ಯಾಸಕ ಕನರಾಡಿ ವಾದಿರಾಜ ಭಟ್ಟರ ಪ್ರೇರಣೆ ಮತ್ತು ಮಾರ್ಗದರ್ಶನದಿಂದ ಮಂಗಳೂರು ವಿಶ್ವವಿದ್ಯಾಲಯದ ಮಂಗಳ ಗಂಗೋತ್ರಿಯಲ್ಲಿ ಕನ್ನಡ ಸ್ನಾತಕೋತ್ತರ ಪದವಿಗೆ ಸೇರಿ ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿದರು.

ಕರ್ನಾಟಕ ಕರಾವಳಿಯ ಪ್ರಮುಖ ಆರಾಧನೆಯಾದ ನಾಗಾರಾಧನೆಯ ಕುರಿತು ವಿಶೇಷ ಅಧ್ಯಯನಗಳು ನಡೆದಿರದ ಸಂದರ್ಭದಲ್ಲಿ ವಾಸುದೇವ ಭಟ್ ಅವರು ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ.ಬಿ.ಎ.ವಿವೇಕ ರೈ ಅವರ ಮಾರ್ಗದರ್ಶನದಲ್ಲಿ 'ನಾಗ ಜಾನಪದ-ಒಂದು ಅಧ್ಯಯನ' ಎಂಬ ವಿಷಯದಲ್ಲಿ ಎಂ.ಫಿಲ್ ಪದವಿಯನ್ನು, ನಂತರ ಮೈಸೂರು ವಿಶ್ವವಿದ್ಯಾಲಯದ ಮೂಲಕ ಡಿಪ್ಲೊಮಾ ಇನ್ ಜರ್ನಲಿಸಂ ನ್ನು ಅಧ್ಯಯನ ಮಾಡಿದರು.

1987ರಲ್ಲಿ ಕಾರ್ಕಳ ತಾಲ್ಲೂಕಿನ ನಿಟ್ಟೆ ಡಾ. ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದ ಇವರು ಕಾಲೇಜಿನಲ್ಲಿ ವಿದ್ಯಾರ್ಥಿಗಳ ಅಚ್ಚುಮೆಚ್ಚಿನ ಶಿಕ್ಷಕರಾಗಿದ್ದರು. ಇವರ ಸೇವೆಯನ್ನು ಅನುಲಕ್ಷಿಸಿ ಕಾಲೇಜಿನ ಆಡಳಿತ ಮಂಡಳಿ ಇವರಿಗೆ 2019ರಲ್ಲಿ ಪ್ರಾಂಶುಪಾಲರಾಗಿ ಬಡ್ತಿ ನೀಡಿತು. 2020ರ ಅಕ್ಟೋಬರ್ ತಿಂಗಳಿನಲ್ಲಿ ಇವರು ವೃತ್ತಿಯಿಂದ ನಿವೃತ್ತರಾದರು

ವಾಸುದೇವ ಭಟ್ಟ ಅವರ ಕನ್ನಡದ ಕೃತಿಗಳಾದ 'ಪ್ರಬಂಧ ಕಲೆ' :

(1991), 'ಉಳ್ಳಾಲದ ರಾಣಿ ಅಬ್ಬಕ್ಕ' ( ಮಕ್ಕಳ ಪುಸ್ತಕ ಬಹುಮಾನಿತ), 'ಸರ್ಪರಾಜಾ ಮತ್ತು ಇತರ ಕತೆಗಳು' (1996), 'ನಮ್ಮೂರಿನ ಬಸ್ಸುಗಳು ಹಾಗೂ ಇತರ ಲಲಿತ ಪ್ರಬಂಧಗಳು'(2003), 'ಕಾಂತಾಬಾರೆ ಬೂದಾಬಾರೆ ಮತ್ತು ಅಗೋಳಿ ಮಂಜಣ್ಣ(2006) - ಇದು ಮೂಲ್ಕಿ ಬಪ್ಪನಾಡು ಕ್ಷೇತ್ರದ ಜೀರ್ಣೋದ್ಧಾರ ಸಂದರ್ಭದಲ್ಲಿ ಪುರಸ್ಕೃತ ಕೃತಿ ಪ್ರಕಟವಾಗಿವೆ.

ಕೊಂಕಣಿ ಭಾಷೆಯಲ್ಲಿ 'ಡಾ.ಟಿ.ಎಂ.ಎ. ಪೈ', 'ಪಂಜೆ ಮಂಗೇಶ್‌ರಾವ್', '20ವೆ ಶೆಕ್ಡ್ಯಾಚೆ ಮಾನ್ ಮನಿಸ್' ಎಂಬ ಕೃತಿ ಸಂಪಾದನೆ ಪ್ರಕಟವಾಗಿವೆ. ಅಪ್ರಕಟಿತ ಕೃತಿ 'ನಾಗ ಜಾನಪದ' ಎಂ.ಫಿಲ್ ಸಂಶೋಧನಾ ಪ್ರಬಂಧ. ತಮ್ಮ ಕಾಲೇಜು ದಿನಗಳಲ್ಲಿ 'ರೋಟರಿ ಯುವಜನ ಪ್ರಶಸ್ತಿ', ಕನ್ನಡ ಸಾಹಿತ್ಯ ಪರಿಷತ್ತು ಕಾರ್ಕಳ ತಾಲ್ಲೂಕು ಘಟಕದಿಂದ 'ಸಾಧಕ ಪ್ರಶಸ್ತಿ 2023' ಬಂದಿದೆ.

ಮಂಗಳೂರು ಆಕಾಶವಾಣಿಯ ಕಾರ್ಯಕ್ರಮಗಳಲ್ಲಿ ಅಲ್ಲಲ್ಲಿನ ಧಾರ್ಮಿಕ ಪ್ರವಚನಗಳಲ್ಲಿ ಇವರು ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ವಾಸುದೇವ ಭಟ್ಟರನ್ನು ಅನೇಕ ಸಂಘ ಸಂಸ್ಥೆಗಳು ಗೌರವ, ಸನ್ಮಾನಗಳನ್ನು ನೀಡಿ ಪುರಸ್ಕರಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X