Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Karkala | ವಿಶ್ವ ಹೃದಯ ದಿನ: ವಾಕಥಾನ್...

Karkala | ವಿಶ್ವ ಹೃದಯ ದಿನ: ವಾಕಥಾನ್ ನಲ್ಲಿ 500ಕ್ಕೂ ಹೆಚ್ಚು ಮಂದಿ ಭಾಗಿ

ವಾರ್ತಾಭಾರತಿವಾರ್ತಾಭಾರತಿ27 Sept 2026 7:13 PM IST
share
Karkala | ವಿಶ್ವ ಹೃದಯ ದಿನ: ವಾಕಥಾನ್ ನಲ್ಲಿ 500ಕ್ಕೂ ಹೆಚ್ಚು ಮಂದಿ ಭಾಗಿ

ಕಾರ್ಕಳ: ವಿಶ್ವ ಹೃದಯ ದಿನದ ಅಂಗವಾಗಿ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆ, ಕಾರ್ಕಳ ವತಿಯಿಂದ ರೋಟರಿ ಕ್ಲಬ್ ಕಾರ್ಕಳ ರಾಕ್‌ಸಿಟಿ, ರೋಟರ್ಯಾಕ್ಟ್ ಕ್ಲಬ್ ಶ್ರೀ ಭುವನೇಂದ್ರ ಕಾಲೇಜು ಹಾಗೂ ರೋಟರ್ಯಾಕ್ಟ್ ಕ್ಲಬ್ ಸರ್ಕಾರಿ ಪಾಲಿಟೆಕ್ನಿಕ್ ಸಹಯೋಗದಲ್ಲಿ ಹೃದಯದ ಆರೋಗ್ಯದ ಕುರಿತು ಜನಜಾಗೃತಿ ಮೂಡಿಸುವ ಉದ್ದೇಶದಿಂದ ಬೃಹತ್ ವಾಕ್‌ಥಾನ್ ಆಯೋಜಿಸಲಾಯಿತು. 500ಕ್ಕೂ ಹೆಚ್ಚು ಮಂದಿ ಭಾಗವಹಿಸಿ ಆರೋಗ್ಯಕರ ಜೀವನಶೈಲಿಯ ಮಹತ್ವದ ಸಂದೇಶ ಸಾರಿದರು.

ಕಾರ್ಕಳದ ಅನಂತಶಯನ ವೃತ್ತದಿಂದ ಆರಂಭವಾದ ವಾಕ್‌ಥಾನ್‌ಗೆ ಶಾಸಕ ವಿ. ಸುನಿಲ್ ಕುಮಾರ್ ಚಾಲನೆ ನೀಡಿದರು. ವಾಕ್‌ಥಾನ್ ತಾಲೂಕು ಪಂಚಾಯಿತಿ ಮಾರ್ಗವಾಗಿ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯವರೆಗೆ ನಡೆಯಿತು.

ವಿವಿಧ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳು, ಉಪನ್ಯಾಸಕರು, ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ, ರೋಟರಿ ಮತ್ತು ರೋಟರ್ಯಾಕ್ಟ್ ಸದಸ್ಯರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಉತ್ಸಾಹದಿಂದ ಪಾಲ್ಗೊಂಡರು. ಹೃದಯದ ಆರೋಗ್ಯದ ಕುರಿತು ಜಾಗೃತಿ ಮೂಡಿಸುವ ಬೀದಿನಾಟಕವೂ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು.

ನಂತರ ಆಸ್ಪತ್ರೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ವೈದ್ಯ ಡಾ. ಕಾರ್ತಿಕ್ ರಾವ್ ಮಾತನಾಡಿ, ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು ರಕ್ತದಲ್ಲಿನ ಸಕ್ಕರೆ ನಿಯಂತ್ರಣ, ಪೌಷ್ಟಿಕ ಆಹಾರ, ನಿಯಮಿತ ವ್ಯಾಯಾಮ, ಒತ್ತಡ ನಿರ್ವಹಣೆ ಹಾಗೂ ಉತ್ತಮ ನಿದ್ರೆ ಅತ್ಯಗತ್ಯ ಎಂದು ತಿಳಿಸಿದರು. “ನಮ್ಮ ಆರೋಗ್ಯ, ನಮ್ಮ ಹೊಣೆ” ಎಂಬ ಸಂದೇಶವನ್ನು ಅವರು ಒತ್ತಿ ಹೇಳಿದರು.

ರೋಟರಿ ಅಸಿಸ್ಟೆಂಟ್ ಗವರ್ನರ್ ಪಿಎಚ್‌ಎಫ್ ರೋಟೇರಿಯನ್ ಸುರೇಶ್ ನಾಯಕ್ ಮಾತನಾಡಿ, ಹೃದಯದ ಆರೋಗ್ಯದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದರ ಜೊತೆಗೆ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಳ್ಳುವುದು ವಾಕ್‌ಥಾನ್‌ನ ಪ್ರಮುಖ ಉದ್ದೇಶವಾಗಿದೆ ಎಂದು ಹೇಳಿದರು.

ವಾಕ್‌ಥಾನ್ ಅಂಗವಾಗಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕ್ರಿಯೇಟಿವ್ ಪಿಯು ಕಾಲೇಜು ಗರಿಷ್ಠ ಭಾಗವಹಿಸುವಿಕೆ ಹಾಗೂ ಘೋಷವಾಕ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದರೆ, ಎಂ.ಪಿ.ಎಂ. ಕಾಲೇಜು ಫಲಕ ತಯಾರಿಕೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ, ಸರ್ಕಾರಿ ಪಾಲಿಟೆಕ್ನಿಕ್ ಶಿಸ್ತುಬದ್ಧ ತಂಡ ವಿಭಾಗದಲ್ಲಿ ಪ್ರಥಮ ಸ್ಥಾನ ಹಾಗೂ ಸರ್ಕಾರಿ ನರ್ಸಿಂಗ್ ಕಾಲೇಜು ಬೀದಿನಾಟಕ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿತು.

ಕಾರ್ಯಕ್ರಮದಲ್ಲಿ ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸಂಜಯ್ ಕುಮಾರ್, ರೋಟರಿ ಕ್ಲಬ್ ಕಾರ್ಕಳ ರಾಕ್‌ಸಿಟಿಯ ಅಧ್ಯಕ್ಷ ರೋಟೇರಿಯನ್ ಮಂಜುನಾಥ್ ಹೆಗ್ಡೆ, ರೋಟರ್ಯಾಕ್ಟ್ ಕ್ಲಬ್‌ಗಳ ಅಧ್ಯಕ್ಷರಾದ ಸುಜನ್ ಮತ್ತು ಶ್ರೀನಿವಾಸ್ ಭಟ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ವಿಶ್ವ ಹೃದಯ ದಿನದ ಅಂಗವಾಗಿ ಆಯೋಜಿಸಲಾದ ಈ ವಾಕ್‌ಥಾನ್ ಸಾರ್ವಜನಿಕರಲ್ಲಿ ಹೃದಯದ ಆರೋಗ್ಯದ ಕುರಿತು ಜಾಗೃತಿ ಮೂಡಿಸುವುದರೊಂದಿಗೆ ಆರೋಗ್ಯಕರ ಜೀವನಶೈಲಿಯ ಮಹತ್ವದ ಸಂದೇಶ ಸಾರಿತು.

Tags

World Heart Daykarkala
share
ವಾರ್ತಾಭಾರತಿ
ವಾರ್ತಾಭಾರತಿ
Next Story
X