Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕಟಪಾಡಿ ಚರ್ಚ್ ಅಮೃತಮಹೋತ್ಸವ : ಹಸಿರು...

ಕಟಪಾಡಿ ಚರ್ಚ್ ಅಮೃತಮಹೋತ್ಸವ : ಹಸಿರು ಹೊರೆ ಕಾಣಿಕೆಗಳ ಸಮರ್ಪಣೆ

ವಾರ್ತಾಭಾರತಿವಾರ್ತಾಭಾರತಿ11 Nov 2023 9:33 PM IST
share
ಕಟಪಾಡಿ ಚರ್ಚ್ ಅಮೃತಮಹೋತ್ಸವ : ಹಸಿರು ಹೊರೆ ಕಾಣಿಕೆಗಳ ಸಮರ್ಪಣೆ

ಉಡುಪಿ, ನ.11: ಕಟಪಾಡಿ ಸೈಂಟ್ ವಿನ್ಸೆಂಟ್ ಡಿ ಪಾವ್ಲ್ ಚರ್ಚ್‌ನ ಅಮೃತಮಹೋತ್ಸವ ಆಚರಣೆಯ ಪ್ರಯುಕ್ತ ಪೂರ್ವ ಭಾವಿಯಾಗಿ ಶುಕ್ರವಾರ ಸಂಜೆ ಸರ್ವಧರ್ಮೀಯರ ಸಹಭಾಗಿತ್ವದಲ್ಲಿ ಹೊರೆಕಾಣಿಕೆ ಮೆರವಣಿಗೆ ಜರಗಿತು.

ಕಟಪಾಡಿ ರಾಷ್ಟ್ರೀಯ ಹೆದ್ದಾರಿ ಬಳಿಯಿಂದ ಹೊರಟು ಕಟಪಾಡಿ ಚರ್ಚ್ ವರೆಗೆ ನಡೆದ ಅದ್ದೂರಿ ಮೆರವಣಿಗೆಯಲ್ಲಿ ಹಸಿರು ಹೊರೆ ಕಾಣಿಕೆಯನ್ನು ಬ್ಯಾಂಡ್, ಚಂಡೆ ವಾದ್ಯಗಳೊಂದಿಗೆ ಶೋಭಾಯಾತ್ರೆಯಲ್ಲಿ ತರಲಾಯಿತು.

ಹಸಿರು ಹೊರೆಕಾಣಿಕೆ ಮೆರವಣಿಗೆಗೆ ಸಮಾಜಸೇವಕ ರವಿ ಕಟಪಾಡಿ ಚಾಲನೆ ನೀಡಿ ಮಾತನಾಡಿ, ಸಮಾಜ ಸೇವೆಯನ್ನು ಮಾಡಿಕೊಂಡು ಬಂದಿರುವ ತನಗೆ ನನ್ನ ಊರಿನಲ್ಲಿ ಈ ಅವಕಾಶ ನೀಡಿರುವುದು ನನ್ನ ಭಾಗ್ಯ. ಸಮಾಜದ ನೊಂದವರ ಕಣ್ಣೀರು ಒರೆಸುವ ಕೆಲಸ ಮಾಡುವಾಗ ಸಿಗುವ ಸಂತೃಪ್ತಿಗೆ ಬೆಲೆ ಕಟ್ಟಲಾಗದು. ನಾವೆಲ್ಲರೂ ಒಂದೇ ತಾಯಿಯ ಮಕ್ಕಳು ಎಂಬ ಭಾವನೆಯೊಂದಿಗೆ ಬದುಕಿದಾಗ ಜೀವನ ಸಾರ್ಥಕವಾಗುತ್ತದೆ ಎಂದರು.

ಹೊರೆಕಾಣಿಕೆ ಮೆರವಣಿಗೆಯಲ್ಲಿ ಉಡುಪಿ ವಲಯದ ವಿವಿಧ ಚರ್ಚು ಗಳು, ಕಟಪಾಡಿ ವಿಶ್ವನಾಥ ಕ್ಷೇತ್ರ, ಲಯನ್ಸ್ ಕ್ಲಬ್, ಮಣಿಪುರ ಸಿಎಸ್‌ಐ ಚರ್ಚು, ಕಟಪಾಡಿ ಚರ್ಚಿನ ವಿವಿಧ ವಾಳೆಗಳು, ನವೋದಯ ಸ್ವಸಹಾಯ ಸಂಘದ ಸದಸ್ಯರು ಹಸಿರು ಹೊರೆಕಾಣಿಕೆಯನ್ನು ಸಮರ್ಪಿಸಿದರು. ಹೊರೆಕಾಣಿಕೆ ಸಮರ್ಪಿಸಿದ ಚರ್ಚುಗಳು ಹಾಗೂ ಸಂಘಟನೆಯ ಸದಸ್ಯರನ್ನು ಚರ್ಚಿನಲ್ಲಿ ಗೌರವಿಸಲಾಯಿತು.

ಈ ವೇಳೆ ಉಡುಪಿ ವಲಯ ಪ್ರಧಾನ ಧರ್ಮಗುರು ವಂ. ಚಾರ್ಲ್ಸ್ ಮಿನೇಜಸ್, ಕಟಪಾಡಿ ಚರ್ಚಿನ ಧರ್ಮಗುರು ವಂ. ರಾಜೇಶ್ ಪಸನ್ನಾ, ಕಟಪಾಡಿ ಹೋಲಿಕ್ರಾಸ್ ಸ್ಟೂಡೆಂಟ್ ಹೋಮ್‌ನ ನಿರ್ದೇಶಕರಾದ ವಂ. ರೋನ್ಸನ್ ಡಿಸೋಜಾ, ಮೂಡುಬೆಳ್ಳೆ ಚರ್ಚಿನ ವಂ. ಜೋರ್ಜ್ ಡಿಸೋಜಾ, ಕುಂತಲನಗರ ಚರ್ಚಿನ ವಂ. ವಿಲ್ಸನ್, ಉಡುಪಿ ಚರ್ಚಿನ ವಂ. ರೋಯ್ ಲೋಬೊ, ಕಟಪಾಡಿ ಚರ್ಚಿನ ಪಾಲನಾ ಸಮಿತಿಯ ಉಪಾಧ್ಯಕ್ಷ ಬ್ರಾಯನ್ ಕೊರೆಯಾ, ಕಾರ್ಯದರ್ಶಿ ತೆರೆಸಾ ಲೋಬೊ, 20 ಆಯೋಗಗಳ ಸಂಚಾಲಕ ರಾದ ಲುವಿಸ್ ಡಿಸಿಲ್ವಾ ಹಾಗೂ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಕ್ಯಾಥರಿನ್ ರೊಡ್ರಿಗಸ್ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X