ಕಾಪು | ಗೂಡ್ಸ್ ಟೆಂಪೋ ಪಲ್ಟಿ : ಮೃತರ ಸಂಖ್ಯೆ 5ಕ್ಕೆ ಏರಿಕೆ

ಕಾಪು, ನ.30: ಗೂಡ್ಸ್ ಟೆಂಪೋವೊಂದು ಪಲ್ಟಿಯಾದ ಪರಿಣಾಮ ನಾಲ್ವರು ಮೃತಪಟ್ಟ ಘಟನೆ ಕಾಪು ಸಮೀಪದ ಕೋತಲ್‌ಕಟ್ಟೆ ರಾಷ್ಟ್ರೀಯ ಹೆದ್ದಾರಿಯ 66ರಲ್ಲಿ ನ.30ರ ಮಧ್ಯಾಹ್ನ ವೇಳೆ ನಡೆದಿದ್ದು, ಇದೀಗ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಇನ್ನೊಬ್ಬರು ಹೈಟೆಕ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕಾಪು ಮಜೂರಿನಿಂದ ಮಲ್ಪೆಗೆ ಡೆಕರೋಷನ್ ಸಂಬಂಧಿಸಿದ ಸಲಕರಣೆಗಳನ್ನು ಸಾಗಿಸುತ್ತಿದ್ದ ಟೆಂಪೋ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ಗೆ ಹತ್ತಿ ರಸ್ತೆಯಲ್ಲಿ ಪಲ್ಟಿಯಾಗಿ ಬಿದ್ದಿದೆ ಎನ್ನಲಾಗಿದೆ.
ಇದರಲ್ಲಿ ಒಟ್ಟು ಒಂಭತ್ತು ಮಂದಿ ಕೆಲಸಗಾರರು ಸಾಗುತ್ತಿದ್ದು, ಹಲವು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆನ್ನಲಾಗಿದೆ. ಇವರ ಪೈಕಿ ನಾಲ್ವರು ಉಡುಪಿ ಖಾಸಗಿ ಆಸ್ಪತ್ರೆಗೆ ಸಾಗಿಸುವ ದಾರಿ ವೇಳೆ ಮೃತಪಟ್ಟಿದ್ದು, ಇನ್ನೊಬ್ಬರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
Next Story





