Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಹೆಜಮಾಡಿಯಲ್ಲಿ ಕಾಪು ತಾಲೂಕು 7ನೇ ಕನ್ನಡ...

ಹೆಜಮಾಡಿಯಲ್ಲಿ ಕಾಪು ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ7 Nov 2025 8:54 PM IST
share
ಹೆಜಮಾಡಿಯಲ್ಲಿ ಕಾಪು ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನ
ಸರ್ವಾಧ್ಯಕ್ಷರಾದ ಫಕೀರ್ ಮುಹಮ್ಮದ್ ಕಟ್ಪಾಡಿಯವರಿಗೆ ಅಧಿಕೃತ ಆಮಂತ್ರಣ

ಪಡುಬಿದ್ರಿ: ದೊಡ್ಡ ಪ್ರಶಸ್ತಿ, ಸನ್ಮಾನಗಳು ಸಿಕ್ಕರೂ, ನನ್ನೂರಿನಲ್ಲಿ ನನಗೆ ಸಮ್ಮೇಳನಾಧ್ಯಕ್ಷರ ಗೌರವ ಸಿಗುವುದು ಹೃದಯ ತುಂಬಿ ಬಂದಿದೆ ಎಂದು ಕಾಪು ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಆಯ್ಕೆಯಾದ ಕನ್ನಡದ ಖ್ಯಾತ ಕಥೆಗಾರ, ಕಾದಂಬರಿಗಾರ, ಸಾಮಾಜಿಕ ಹೋರಾಟಗಾರರಾದ ಫಕೀರ್ ಮುಹಮ್ಮದ್ ಕಟ್ಪಾಡಿ ಹೇಳಿದರು.

ಅವರು ಗುರುವಾರ ಕಟಪಾಡಿಯ ಸ್ವಗೃಹದಲ್ಲಿ ಸಮ್ಮೇಳನ ಸರ್ವಾಧ್ಯಕ್ಷರಿಗೆ ಸಮ್ಮೇಳನದ ಸಮಿತಿಯ ವತಿಯಿಂದ ಅಧಿಕೃತವಾಗಿ ನೀಡಿದ ಆಮಂತ್ರಣವನ್ನು ಸ್ವೀಕರಿಸಿ ಮಾತನಾಡಿದರು.

ನಮ್ಮೂರಿನ ಸನ್ನಿವೇಶಗಳು ಹಲವು ಕತೆಗಳಲ್ಲಿ ಅಡಕವಾದರೂ, ಕೆಲಸದ ನಿಮಿತ್ತ ದೂರದೂರಿನಲ್ಲಿದ್ದಾಗ ನಮ್ಮೂರಿನ ಶ್ರೇಷ್ಠತೆ ಅರಿವಾಗುತ್ತದೆ. ಉಡುಪಿ, ದ.ಕ ಜಿಲ್ಲೆಯಲ್ಲಿ ಕನ್ನಡದ ಅಭಿಮಾನ ಹೊಸತಲ್ಲ. ಈಗಿನ ಮಕ್ಕಳಲ್ಲಿ ಕನ್ನಡದ ಬಗ್ಗೆ ಕೇಳಿದಾಗ "ಐ ಡೋಂಟ್ ನೋ ಕನ್ನಡ" ಹೇಳುವುದನ್ನು ಹೇಗೆ ಬದಲಾಯಿಸಬಹುದು ಅನ್ನುವ ಮಟ್ಟಿಗೆ ಕನ್ನಡದ ಕೆಲಸ ಮಾಡಬೇಕಾಗಿದೆ. ಕನ್ನಡದ ವೈಭವವನ್ನು ಮತ್ತೆ ಸ್ಥಾಪಿಸುವ ಬಗ್ಗೆ ಕಟಿಬದ್ಧರಾಗಬೇಕು ಎಂದೂ ಅವರು ಹೇಳಿದರು.

ಈ ಸಂದರ್ಭದಲ್ಲಿ ಕಾಪು ಕಸಾಪ ವತಿಯಿಂದ ಫಕೀರ್ ಮುಹಮ್ಮದ್ ದಂಪತಿಯನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಮಾತನಾಡಿ, ಹೊಸ ತಾಲೂಕು ಆಗಿ ರಚನೆಯಾದಂದಿನಿಂದ ಸತತ 6 ಸಮ್ಮೇಳನಗಳನ್ನು ಯಶಸ್ವಿಯಾಗಿ ನಡೆಸಿ 7ನೇ ಸಮ್ಮೇಳನ ನಡೆಸಲಿರುವ ಕಸಾಪ ಕಾಪು ಘಟಕವನ್ನು ಅಭಿನಂದಿಸಿದರು.

ಕೋಟೆ ಗ್ರಾ.ಪಂ.ಅಧ್ಯಕ್ಷೆ ಪ್ರಮೀಳಾ ಜತ್ತನ್ನ ಮಾತನಾಡಿ, ಕಟಪಾಡಿ ಗ್ರಾಮ ಪಂಚಾಯತ್ನ ಗ್ರಂಥಾಲಯವನ್ನು ಮಾದರಿ ಗ್ರಂಥಾಲಯವಾಗಿ ನಿರ್ಮಿಸುವಲ್ಲಿ ಫಕೀರ್ ಮುಹಮ್ಮದ್ರವರ ಕೊಡುಗೆ ಅನನ್ಯ,ಅವಿಸ್ಮರಣೀಯ ಎಂದರು.

ಕಾಪು ತಾಲೂಕು ಘಟಕದ ಅಧ್ಯಕ್ಷ ಬಂಟಕಲ್ ಪುಂಡಲೀಕ ಮರಾಠೆ ಇವರ ಅಧ್ಯಕ್ಷತೆಯಲ್ಲಿ ಆಮಂತ್ರಣ ಪತ್ರ ನೀಡಲಾಯಿತು. ಈ ಸಂದರ್ಭದಲ್ಲಿ ಸಮ್ಮೇಳನ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ಹೆಜಮಾಡಿ, ಸ್ವಾಗತ ಸಮಿತಿಯ ಉಪಾಧ್ಯಕ್ಷ ಮೋಹನ ಸುವರ್ಣ, ಕಸಾಪ ಜಿಲ್ಲಾ ಸಹ ಕಾರ್ಯದರ್ಶಿ ಡಾ. ರಘು ನಾಯ್ಕ್, ಕಾಪು ಕಸಾಪ ಜೊತೆ ಕಾರ್ಯದರ್ಶಿ ಕೃಷ್ಣಕುಮಾರ್ ರಾವ್ ಮಟ್ಟು, ಸಂಘಟನಾ ಕಾರ್ಯದರ್ಶಿಗಳಾದ ಕೆ.ಆರ್. ಪಾಟ್ಕರ್ ಬಂಟಕಲ್ಲು, ದೀಪಕ್ ಬೀರ ಪಡುಬಿದ್ರಿ, ಸಮಿತಿಯ ಸದಸ್ಯರುಗಳಾದ ಸತ್ಯಸಾಯಿ ಪ್ರಸಾದ್ ಬಂಟಕಲ್ಲು, ಭಾಸ್ಕರ ಕಾಮತ್ ಕಟಪಾಡಿ, ಫಕೀರ್ ಮುಹಮ್ಮದ್ ರವರ ಕುಟುಂಬಸ್ಥರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X