Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜು.29ಕ್ಕೆ ಕಿದಿಯೂರು ಕ್ರೆಡಿಟ್...

ಜು.29ಕ್ಕೆ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ27 July 2026 10:24 PM IST
share
ಜು.29ಕ್ಕೆ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಉದ್ಘಾಟನೆ

ಉಡುಪಿ, ಜು.27: ನಗರದ ನೂತನ ಸಹಕಾರಿ ಸಂಸ್ಥೆ ಕಿದಿಯೂರು ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಜು.29ರ ಬುಧವಾರ ಅಪರಾಹ್ನ 3:30ಕ್ಕೆ ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗಿನ ಎರಡನೇ ಮಹಡಿಯಲ್ಲಿ ಉದ್ಘಾಟನೆಗೊಳ್ಳಲಿದೆ ಎಂದು ಸೊಸೈಟಿ ಅಧ್ಯಕ್ಷ ಕೆ. ಉದಯ ಕುಮಾರ್ ಶೆಟ್ಟಿ ತಿಳಿಸಿದ್ದಾರೆ.

ಸೋಮವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಸೊಸೈಟಿಯನ್ನು ಉದ್ಘಾಟಿಸಲಿದ್ದಾರೆ ಎಂದರು. ಶ್ಯಾಮಿಲಿ ಸಮೂಹ ಸಂಸ್ಥೆ ಗಳ ಪ್ರವರ್ತಕ ನಾಡೋಜ ಡಾ. ಜಿ. ಶಂಕರ್, ಬೆಂಗಳೂರಿನ ಉದ್ಯಮಿ ಡಾ.ಕೆ. ಪ್ರಕಾಶ್ ಶೆಟ್ಟಿ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನ ಅಧ್ಯಕ್ಷ ಡಾ. ಎಂ. ಎನ್.ರಾಜೇಂದ್ರ ಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿ ದ್ದಾರೆ ಎಂದರು.

ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ಕ್ಯಾಪ್ಟನ್ ಬ್ರಿಜೇಶ್ ಚೌಟ, ಬಿಜೆಪಿ ರಾಜ್ಯ ಘಟಕದ ಮಾಜಿ ಅಧ್ಯಕ್ಷ ನಳಿನ್ ಕುಮಾರ ಕಟೀಲು, ಉಡುಪಿ ಜಿಲ್ಲೆಯ ಶಾಸಕರಾದ ಯಶಪಾಲ್ ಸುವರ್ಣ, ವಿ.ಸುನಿಲ್ ಕುಮಾರ್, ಸುರೇಶ್ ಶೆಟ್ಟಿ ಗುರ್ಮೆ, ಎ.ಕಿರಣ್ ಕುಮಾರ ಕೊಡ್ಲಿ, ಗುರುರಾಜ ಗಂಟಿಹೊಳೆ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಸಹಕಾರಿ ಕ್ಷೇತ್ರದ ಹಿರಿಯ ಧುರೀಣ ಟಿ. ಶಂಭು ಶೆಟ್ಟಿ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ವಿಶೇಷ ಆಹ್ವಾನಿತರಾಗಿ ಭಾಗವಹಿಸುವರು ಎಂದರು.

ಸಾಂಸ್ಕೃತಿಕ ಕಾರ್ಯಕ್ರಮದಂಗವಾಗಿ ಕರಾವಳಿಯ ಪ್ರಸಿದ್ಧ ಕಲಾವಿದರಿಂದ ಯಕ್ಷ-ಗಾನ- ನಾದ ವೈಕುಂಠ ಕಾರ್ಯಕ್ರಮ ನಡೆಯಲಿದೆ. ಸೊಸೈಟಿಯು ಶೀಘ್ರ ಸಾಲ ಮಂಜೂರಾತಿ, ದೀರ್ಘಾವಧಿ ಮರು ಪಾವತಿ, ಸರಳ ದಾಖಲೆಗಳು, ಕನಿಷ್ಠ ಸೇವಾ ಶುಲ್ಕದ ಸೇವೆ ನೀಡಲಿದೆ ಎಂದು ಉದಯಕುಮಾರ್ ಶೆಟ್ಟಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸೊಸೈಟಿಯ ಉಪಾಧ್ಯಕ್ಷೆ ಪ್ರಣೀತಾ ಶರದ್ ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಕಾರಿ ಹರ್ಷಿತಾ, ನಿರ್ದೇಶಕರಾದ ಸುಧಾಕರ ಹೆಗ್ಡೆ, ಉಮೇಶ್ ನಾಯರಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X