ಕಾರ್ಕಳ | ಕೆ.ಎಂ.ಇ.ಎಸ್. ವಿದ್ಯಾಸಂಸ್ಥೆಯಲ್ಲಿ ಅಂತರ್ ಕಾಲೇಜು ಕ್ರಿಕೆಟ್ ಪಂದ್ಯಾವಳಿ: ಬ್ಯಾನರ್ ಅನಾವರಣ

ಕಾರ್ಕಳ: ಕೆ.ಎಂ.ಇ.ಎಸ್. ವಿದ್ಯಾಸಂಸ್ಥೆಯಲ್ಲಿ ಅ.25ರಂದು ನಡೆಯಲಿರುವ ಅಂತರ್ ಕಾಲೇಜು ಕ್ರಿಕೆಟ್ ಪಂದ್ಯಾವಳಿಯ 'ಬ್ಯಾನರ್ ರಿಲೀಸ್' ಕಾರ್ಯಕ್ರಮ ನಡೆಯಿತು.
ಬ್ಯಾನರ್ ಅನಾವರಣಗೊಳಿಸಿದ ಖ್ಯಾತ ನಟ, ನಿರ್ದೇಶಕ, ನಾಟಕಕಾರ ಪ್ರಸನ್ನ ಶೆಟ್ಟಿ ಬೈಲೂರು ಮಾತನಾಡಿ, "ಇಂದಿನ ವಿದ್ಯಾರ್ಥಿಗಳು ಅತ್ಯಂತ ಹೆಚ್ಚು ಕ್ರಿಯಾಶೀಲರಾಗಿರುತ್ತಾರೆ. ಅವರ ಪ್ರತಿಭೆಗಳನ್ನು ಅನಾವರಣಗೊಳಿಸಬೇಕಾದರೆ ಸಾಹಿತ್ಯ, ನಾಟಕ, ಸಾಂಸ್ಕೃತಿಕ ಕ್ರೀಡೆಗಳು ಮಹತ್ತರ ಪಾತ್ರವನ್ನು ವಹಿಸುತ್ತದೆ. ಕೆ.ಎಂ.ಇ.ಎಸ್. ವಿದ್ಯಾಸಂಸ್ಥೆಯ ಬೆಳ್ಳಿಹಬ್ಬದ ಪೂರ್ವಭಾವಿಯಾಗಿ ನಡೆಯುವ ಕ್ರಿಕೆಟ್ ಟೂರ್ನಮೆಂಟಿನ "ಬ್ಯಾನರ್ ರಿಲೀಸ್" ಕಾರ್ಯಕ್ರಮ ಮುಂದಿನ ಕಾರ್ಯಕ್ರಮಗಳಿಗೆ ಉತ್ತಮ ತಳಹದಿಯಾಗುತ್ತದೆ. ಈ ಅಂತರ್ ಕಾಲೇಜು ಕ್ರಿಕೆಟ್ ಪಂದ್ಯಾಟ ಉತ್ತಮ ರೀತಿಯಲ್ಲಿ ನಡೆದು ಯಶಸ್ವಿಯಾಗಲಿ ಎಂದು ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲ ಕೆ. ಬಾಲಕೃಷ್ಣರಾವ್ ರಿಬ್ಬನ್ ಕತ್ತರಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ವಿದ್ಯಾರ್ಥಿಗಳು ಇಂತಹ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ತಮ್ಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಹಾಗೂ ಲಭಿಸಿದ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಕರೆ ನೀಡಿದರು.
ಪಾಟ್ಕರ್ ಕ್ರಿಕೆಟ್ ಟ್ರೋಫಿಗಳನ್ನು ಅನಾವರಣಗೊಳಿಸಿ ಮಾತನಾಡಿದ ಪ್ರೌಢಶಾಲಾ ವಿಭಾಗದ ಮುಖ್ಯಶಿಕ್ಷಕಿ, ಸಂಸ್ಥೆಯ ಅಧ್ಯಕ್ಷ ಕೆ.ಎಸ್.ಇಮ್ತಿಯಾಝ್ ಅಹ್ಮದ್ ರವರ ನಿರಂತರ ಪ್ರೋತ್ಸಾಹ, ದೂರದೃಷ್ಟಿತ್ವ ಇಂದಿನ ಕಾರ್ಯಕ್ರಮದ ಯಶಸ್ಸಿಗೆ ಪ್ರೇರಕ" ಎಂದು ನುಡಿದರು.
ಕ್ರಿಕೆಟ್ ಜೆರ್ಸಿಯನ್ನು ಅನಾವರಣಗೊಳಿಸಿದ ಪ್ರಾಥಮಿಕ ಶಾಲಾ ವಿಭಾಗದ ಮುಖ್ಯಸ್ಥೆ ಲೊಲಿಟಾ ಡಿಸಿಲ್ವ ಮಾತನಾಡಿ ಶುಭ ಹಾರೈಸಿದರು.
ವಿದ್ಯಾರ್ಥಿಗಳಾದ ಪ್ರಿನ್ ಸ್ಟನ್, ಅಝ್ಮಿಯಾ ಕಾರ್ಯಕ್ರಮ ನಿರ್ವಹಿಸಿದರು. ವಿದ್ಯಾರ್ಥಿಗಳಾದ ಅಫ್ಸಿಯಾನ್, ಹಿತೇಶ್ ಸಹಕರಿಸಿದರು. ಕೊನೆಯಲ್ಲಿ ಪ್ರತೀಕ್ಷ್ ಮತ್ತು ತಂಡದವರಿಂದ ನೃತ್ಯ ಪ್ರದರ್ಶನ ನಡೆಯಿತು.
ಕಾರ್ಯಕ್ರಮದಲ್ಲಿ ಭಾಗವಹಿಸಿರುವ ಅತಿಥಿಗಳನ್ನು, ಕ್ರೀಡಾಪಟುಗಳನ್ನು ಸಂಸ್ಥೆಯ ಅಧ್ಯಕ್ಷ ಕೆ.ಎಸ್.ಇಮ್ತಿಯಾಝ್ ಅಹ್ಮದ್ ಅಭಿನಂದಿಸಿದ್ದಾರೆ.






