ಕೊರಗರ ಅಹೋರಾತ್ರಿ ಧರಣಿ: ಸಂಸದ ಕೋಟ, ಶಾಸಕ ಗುರ್ಮೆ ಭೇಟಿ

ಉಡುಪಿ, ಜ.1: ಕೊರಗ ಅಭಿವೃದ್ಧಿ ಸಂಘಗಳ ಒಕ್ಕೂಟ ವತಿಯಿಂದ ಕೊರಗ ಸಮುದಾಯದ ಯುವ ಜನತೆಗೆ ಸರಕಾರಿ ಉದ್ಯೋಗಗಳಲ್ಲಿ ನೇರ ನೇಮಕಾತಿ ಒದಗಿಸುವಂತೆ ಒತ್ತಾಯಿಸಿ ಕಳೆದ ಡಿಸೆಂಬರ್ 15ರಿಂದ ನಡೆಯುತ್ತಿರುವ ಅನಿರ್ಧಿಷ್ಟಾವಧಿಯ ಅಹೋರಾತ್ರಿ ಧರಣಿ ಸತ್ಯಾಗ್ರಹ 18ನೇ ದಿನವಾದ ಗುರುವಾರವೂ ಮುಂದುವರಿದಿದೆ.
ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಬಳಿ ಧರಣಿ ನಡೆಯುತ್ತಿರುವ ಸ್ಥಳಕ್ಕೆ ಇಂದು ಉಡುಪಿ ಚಿಕ್ಕಮಗಳೂರು ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭೇಟಿ ನೀಡಿ, ಧರಣಿನಿರತರ ಬೇಡಿಕೆಗಳ ಕುರಿತಂತೆ ಚರ್ಚಿಸಿ ಅವರಿಂದ ಮನವಿ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಕೊರಗ ಸಂಘಗಳ ಒಕ್ಕೂಟದ ಅಧ್ಯಕ್ಷೆ ಸುಶೀಲಾ ನಾಡ, ಮಾಜಿ ಉಪಾಧ್ಯಕ್ಷ ಶೇಖರ ಕೆಂಜೂರು, ಸಂಯೋಜಕ ಪುತ್ರನ್ ಹೆಬ್ರಿ, ಸುರೇಶ ಎಲ್ಲೂರು, ಭಾರತಿ ಎಲ್ಲೂರು, ಶೇಖರ ಕುಂದಾಪುರ, ಸಂಜೀವ ಬಾರ್ಕೂರು, ಶಕುಂತಲಾ ನೇಜಾರು, ಶೀನ ಬೆಳ್ಮಣ್, ನಾಗು ನಾಡ ಹಾಗೂ ಇತರ ಮುಖಂಡರು ಹಾಜರಿದ್ದರು.
Next Story





