ಕೃಷಿ ಪಂಡಿತ ಪ್ರಶಸ್ತಿ: ಅರ್ಜಿ ಆಹ್ವಾನ

ಉಡುಪಿ, ಜು.17: ಪ್ರಸಕ್ತ ಸಾಲಿನಲ್ಲಿ ಕೃಷಿ ಇಲಾಖೆಯ ವತಿಯಿಂದ ಕೃಷಿವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಪಂಡಿತ ಪ್ರಶಸ್ತಿ ಬಹುಮಾನ ಯೋಜನೆಯಡಿ ರೈತರು ಹಾಗೂ ರೈತ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ಕೃಷಿ ಕ್ಷೇತ್ರದಲ್ಲಿ ನೂತನ / ಹೊಸ ಅನ್ವೇಷಣೆ ಮತ್ತು ಸೃಜನಾತ್ಮಕ ಕಾರ್ಯಗಳಿಂದ ಗಮನಾರ್ಹ ಸಾಧನೆ ಮಾಡಿರುವ ಮತ್ತು ರೈತ ಸಮುದಾಯದ ಅಭಿವೃದ್ಧಿಗೆ ಅಪಾರ ಕೊಡುಗೆ ನೀಡುತ್ತಿರುವ ಆಸಕ್ತ ರೈತರು ಹಾಗೂ ರೈತ ಮಹಿಳೆಯರು ಕೃಷಿ ಇಲಾಖೆಯ ಕೆ-ಕಿಸಾನ್ ಪೋರ್ಟಲ್‌ನಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ತಮ್ಮ ಎಫ್.ಐ.ಡಿ ಬಳಸಿಕೊಂಡು ಆಗಸ್ಟ್ 31ರ ಒಳಗೆ ಪ್ರಶಸ್ತಿಗೆ ಅರ್ಜಿ ಸಲ್ಲಿಸಬಹುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಮೀಪದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳನ್ನು ಸಂಪರ್ಕಿಸಬಹುದು ಎಂದು ಉಡುಪಿ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
Next Story




