ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಬಜಗೋಳಿ ಆಯ್ಕೆ

ಕಾರ್ಕಳ :ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ನ ನೂತನ ಅಧ್ಯಕ್ಷರಾಗಿ ಕೃಷ್ಣ ಶೆಟ್ಟಿ ಬಜಗೋಳಿ ರವರು ಆಯ್ಕೆ ಆಗಿದ್ದಾರೆ.
ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತ ಆಗಿರುವ ಇವರು ಕಾರ್ಕಳ ತಾಲೂಕಿನ ನಲ್ಲೂರು ಗ್ರಾಮದವರಾಗಿದ್ದು,ಇತ್ತೀಚೆಗೆ ನಡೆದ ರಾಜ್ಯ ಯುವ ಕಾಂಗ್ರೆಸ್ ಚುನಾವಣೆಯಲ್ಲಿ ಉಡುಪಿ ಜಿಲ್ಲಾ ಅಧ್ಯಕ್ಷ ಸ್ಥಾನದ ಪೈಪೊಟಿಯಲ್ಲಿ ಅತ್ಯಧಿಕ ಮತ ಪಡೆದು ಜಿಲ್ಲಾಧ್ಯಕ್ಷರಾಗಿ ಅಯ್ಕೆಯಾಗಿದ್ದಾರೆ.
ಕಾರ್ಕಳ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಕಾರ್ಕಳ ಯುವ ಕಾಂಗ್ರೆಸ್ ಉಪಾಧ್ಯಕ್ಷರಾಗಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿದ್ದ ಇವರು ಹಲವಾರು ಹೋರಾಟಗಳಲ್ಲಿ, ಧಾರ್ಮಿಕ ಕಾರ್ಯಗಳಲ್ಲಿ ಮುಂಚೂಣಿಯಲ್ಲಿದ್ದಾರೆ.
Next Story





