Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುದುರೆಮುಖ ರಾ. ಉದ್ಯಾನವನ | ಪುನರ್ವಸತಿ...

ಕುದುರೆಮುಖ ರಾ. ಉದ್ಯಾನವನ | ಪುನರ್ವಸತಿ ಪರಿಹಾರ ವಿಳಂಬ: 9 ಕುಟುಂಬಗಳಿಂದ ಕಾರ್ಕಳ ಡಿಸಿಎಫ್ ಕಚೇರಿಗೆ ಆಗಮಿಸಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ14 Aug 2026 10:58 AM IST
share
ಕುದುರೆಮುಖ ರಾ. ಉದ್ಯಾನವನ | ಪುನರ್ವಸತಿ ಪರಿಹಾರ ವಿಳಂಬ: 9 ಕುಟುಂಬಗಳಿಂದ ಕಾರ್ಕಳ  ಡಿಸಿಎಫ್ ಕಚೇರಿಗೆ ಆಗಮಿಸಿ ಆಕ್ರೋಶ

ಕಾರ್ಕಳ: ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಜನವಸತಿ ಪ್ರದೇಶಗಳಿಂದ ಸ್ವಯಂಪ್ರೇರಿತವಾಗಿ ಸ್ಥಳಾಂತರಗೊಳ್ಳಲು ಅರ್ಜಿ ಸಲ್ಲಿಸಿದ್ದರೂ ವರ್ಷಗಳಾದರೂ ಪರಿಹಾರ ಹಣ ಪಾವತಿಯಾಗಿಲ್ಲ ಎಂದು ಆರೋಪಿಸಿ ಬೆಳ್ತಂಗಡಿ ತಾಲೂಕಿನ ಎಳನೀರು ಸುತ್ತುಗಟ್ಟು ಮಲವಂತಿಗೆ ಗ್ರಾಮದ 9 ಕುಟುಂಬಗಳ ಸದಸ್ಯರು ಕಾರ್ಕಳದ ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಆಕ್ರೋಶ ವ್ಯಕ್ತಪಡಿಸಿದರು.

ಮಲವಂತಿಗೆ ಹಾಗೂ ನಾವೂರ ಗ್ರಾಮದ 9 ಕುಟುಂಬಗಳು 2018ರಿಂದ 2020ರ ಅವಧಿಯಲ್ಲಿ ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಲು ಸ್ವಯಂಪ್ರೇರಿತವಾಗಿ ಅರ್ಜಿ ಸಲ್ಲಿಸಿದ್ದವು. ಅರ್ಜಿಗಳ ಪರಿಶೀಲನೆ ಹಾಗೂ ಮೌಲ್ಯಮಾಪನದ ಬಳಿಕ ಒಟ್ಟು 6.28 ಕೋಟಿ ರೂ. ಪರಿಹಾರ ನೀಡಲು ಪ್ರಸ್ತಾವಿಸಲಾಗಿತ್ತು. 2025ರ ಡಿಸೆಂಬರ್ 17ರಂದು ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿಯೂ ಪುನರ್ವಸತಿ ಪರಿಹಾರ ಪಾವತಿಗೆ ಅನುಮೋದನೆ ದೊರೆತಿದ್ದರೂ, ಇದುವರೆಗೆ ಹಣ ಬಿಡುಗಡೆಯಾಗಿಲ್ಲ ಎಂದು ಕುಟುಂಬಗಳು ದೂರಿವೆ.

ಈ ಕುರಿತು ಮಾತನಾಡಿದ ಸಿದ್ಧಾಪುರ ವನ್ಯಜೀವಿ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ಡಿ. ದಿನೇಶ್, ಕುಟುಂಬಗಳು ಸಲ್ಲಿಸಿದ್ದ ಅರ್ಜಿಗಳನ್ನು ಪರಿಶೀಲಿಸಿ, ಮೌಲ್ಯಮಾಪನ ನಡೆಸಿ ಜಿಲ್ಲಾಡಳಿತದ ಅನುಮೋದನೆಯೊಂದಿಗೆ ಪರಿಹಾರಕ್ಕಾಗಿ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಪುನರ್ವಸತಿ ಯೋಜನೆಗೆ ಸುಮಾರು 400 ಕೋಟಿ ರೂ. ಅಂದಾಜಿಸಲಾಗಿದ್ದು, ಈ ಹಿಂದೆ ಚಿಕ್ಕಮಗಳೂರು, ಉಡುಪಿ ಹಾಗೂ ಮಂಗಳೂರು ಜಿಲ್ಲೆಗಳ 356 ಕುಟುಂಬಗಳಿಗೆ 142 ಕೋಟಿ ರೂ. ಪರಿಹಾರ ನೀಡಿ ಸ್ಥಳಾಂತರಿಸಲಾಗಿದೆ. ಮುಂದಿನ ಹಂತದಲ್ಲಿ ಸರ್ಕಾರದಿಂದ ಅನುದಾನ ಬಿಡುಗಡೆಯಾದ ಬಳಿಕ ಜ್ಯೇಷ್ಠತೆಯ ಆಧಾರದ ಮೇಲೆ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.

ಇತ್ತೀಚೆಗೆ ಅರಣ್ಯ ಸಚಿವರು ಹೆಚ್ಚುವರಿಯಾಗಿ 20 ಕೋಟಿ ರೂ. ಅನುದಾನ ಮಂಜೂರು ಮಾಡಿರುವುದಾಗಿ ಹೇಳಿರುವ ಹಿನ್ನೆಲೆಯಲ್ಲಿ ತಮಗೂ ಪರಿಹಾರ ನೀಡುವಂತೆ ಗ್ರಾಮಸ್ಥರು ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ದಿನೇಶ್, ಮಂಗಳೂರು ಜಿಲ್ಲೆಗೆ ಮಾತ್ರ ಅನುದಾನ ನೀಡಲಾಗಿಲ್ಲ. ಸರ್ಕಾರದಿಂದ ಹಣ ಬಿಡುಗಡೆಯಾದ ಬಳಿಕ ಈಗಾಗಲೇ ಅನುಮೋದನೆಗೊಂಡ ಅರ್ಜಿದಾರರಿಗೆ ಜ್ಯೇಷ್ಠತೆಯ ಆಧಾರದ ಮೇಲೆ ಪರಿಹಾರ ನೀಡಲಾಗುವುದು ಎಂದರು.

ಇದೇ ವೇಳೆ ವನ್ಯಜೀವಿಗಳಿಂದ ಬೆಳೆ ಹಾನಿಯಾದರೆ ಅರಣ್ಯ ಇಲಾಖೆಯಿಂದ ಪರಿಹಾರ ನೀಡಲಾಗುವುದು. ಆದರೆ ಹವಾಮಾನ ವೈಪರೀತ್ಯದಿಂದ ಉಂಟಾಗುವ ಬೆಳೆ ನಷ್ಟಕ್ಕೆ ಇಲಾಖೆಯಿಂದ ಪರಿಹಾರ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಪರಿಹಾರ ಹಣ ಬಿಡುಗಡೆ ಕುರಿತು ಮತ್ತೊಮ್ಮೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು. ಇಲಾಖಾ ಮಟ್ಟದಲ್ಲಿ ಕೈಗೊಳ್ಳಬೇಕಾದ ಎಲ್ಲ ಕ್ರಮಗಳನ್ನು ಕೈಗೊಂಡಿದ್ದು, ಸರ್ಕಾರದಿಂದ ಅನುದಾನ ಬಿಡುಗಡೆಯಾದ ಬಳಿಕ ಪರಿಹಾರ ಪಾವತಿಸಲಾಗುವುದು ಎಂದು ದಿನೇಶ್ ಭರವಸೆ ನೀಡಿದರು.

ಈ ವೇಳೆ ಕುದುರೆಮುಖ ವನ್ಯಜೀವಿ ವಿಭಾಗ ಸಹಾಯಕ ಅರಣ್ಯ‌ ಸಂರಕ್ಷಣಾಧಿಕಾರಿ ಲತಾ ಭಟ್, ಕಾರ್ಕಳ ವಲಯ ಅರಣ್ಯ ಅಧಿಕಾರಿ ಪ್ರಭಾಕರ್ ಕುಲಾಲ್ ಉಪಸ್ಥಿತರಿದ್ದರು. ಮಲವಂತಿಗೆ ಗ್ರಾಮದ 9 ಕುಟುಂಬದ ಸುಮಾರು 20 ಮಂದಿ ಕಚೇರಿಗೆ ಆಗಮಿಸಿದ್ದರು.

Tags

karkalaprotestKudremukh National Park
share
ವಾರ್ತಾಭಾರತಿ
ವಾರ್ತಾಭಾರತಿ
Next Story
X