Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ...

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನ ಸಮಿತಿಯಲ್ಲಿ ಮಲೆ ಕುಡಿಯರ ಸೇರ್ಪಡೆಯಾಗಬೇಕು: ಶ್ರೀಧರ ಗೌಡ ಈದು

ವಾರ್ತಾಭಾರತಿವಾರ್ತಾಭಾರತಿ23 March 2025 12:15 PM IST
share
ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ವ್ಯವಸ್ಥಾಪನ ಸಮಿತಿಯಲ್ಲಿ ಮಲೆ ಕುಡಿಯರ ಸೇರ್ಪಡೆಯಾಗಬೇಕು: ಶ್ರೀಧರ ಗೌಡ ಈದು

ಕಾರ್ಕಳ: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನವು ಪ್ರಸಿದ್ಧ ಕ್ಷೇತ್ರವಾಗಿ ನಾಡಿನಲ್ಲೆಡೆ ಚಿರಪರಿಚಿತವಾಗಿದೆ. ನಾಗದೇವರ ಮೂಲ ಆರಾಧನಾ ಸ್ಥಳವಾಗಿದ್ದು ಇಲ್ಲಿನ ಮೂಲ ನಿವಾಸಿಗಳಾಗಿರುವ ಮಲೆಕುಡಿಯ ಸಮುದಾಯಕ್ಕೆ ಸೇರಿರುವ ದೇವಸ್ಥಾನವೆಂಬ ಹಿನ್ನೆಲೆಯನ್ನು ಹೊಂದಿದೆ ನಮ್ಮ ಮಲೆಕುಡಿಯ ವಂಶಸ್ಥರಾದ ಕುಕ್ಕೆ ಮತ್ತು ಲಿಂಗ ಅನ್ನುವ ಇಬ್ಬರು ದೈವೀ ಪುರುಷರು ಶ್ರೀ ಕ್ಷೇತ್ರದ ಸ್ಥಾಪನೆಗೆ ಕಾರಣಕರ್ತರಾಗಿದ್ದಾರೆ. ಕಾಲ ನಂತರದಲ್ಲಿ ದೇವಸ್ಥಾನವು ಸರಕಾರದ ಆಡಳಿತ ಕೊಳಪಟ್ಟು ಉತ್ತಮ ರೀತಿಯಲ್ಲಿ ನಿರ್ವಹಣೆಗೊಂಡು ಮುನ್ನಡೆಯುತ್ತಿದೆ.

ಕುಕ್ಕೆ ಶ್ರೀ ಸುಬ್ರಹ್ಮಣ್ಯ ಕ್ಷೇತ್ರಕ್ಕೂ ಮಲೆಕುಡಿಯ ಸಮುದಾಯಕ್ಕೂ ಅವಿನಾಭಾವ ನಂಟು ಇರುವುದನ್ನು ನಾವು ಕಾಣಬಹುದು. ಪೂಜಾ ಕೈಂಕರ್ಯಗಳು ನೆರವೇರುವಲ್ಲಿ ಮಲೆಕುಡಿಯರ ಪಾತ್ರ ಮಹತ್ವದ್ದಾಗಿದೆ. ಶ್ರೀ ಕ್ಷೇತ್ರದ ದೇವರ ಪರಿಚಾರಕ ವೃತ್ತಿಯಿಂದ (ಬುಟ್ಟಿಚಾಕರಿ) ಉತ್ಸವ ಕಾರ್ಯಗಳು, ಸಾಂಗೋಪವಾಗಿ ನೆರವೇರಲು ಮಲೆಕುಡಿಯರು ನಾನಾ ರೀತಿಯಲ್ಲಿ ಶ್ರಮಪಡುತ್ತಾರೆ. ದೈವದ ನೇಮೋತ್ಸವ ಕಾರ್ಯಕ್ರಮದಲ್ಲಿ ಮಲೆಕುಡಿಯರ ಪಾತ್ರ ಪ್ರಮುಖವಾಗಿದೆ. ಅಷ್ಟಮಿಯಂದು ಶ್ರೀ ದೇವಳದಲ್ಲಿ ನಡೆಯುವ ಪಲ್ಲಕ್ಕಿ ಉತ್ಸವವನ್ನು ನೆರವೇರಿಸುವುದೇ ನಮ್ಮ ಸಮುದಾಯದವರು.

ಮುಖ್ಯವಾಗಿ ಶ್ರೀ ಕ್ಷೇತ್ರದ ವಾರ್ಷಿಕ ಜಾತ್ರೋತ್ಸವದ ಸಂದರ್ಭದಲ್ಲಿ ದೇವರ ಬ್ರಹ್ಮ ರಥವನ್ನು ಕಟ್ಟುವ ಕಾರ್ಯವನ್ನು ಮಲೆ ಕುಡಿಯರೆ ನಿರ್ವಹಿಸುತ್ತಿದ್ದು ಈ ಕುರಿತಾದ ಕಟ್ಟು ಕಟ್ಟಲೆಗಳನ್ನು ಅನೂ ಚಾ ನವಾಗಿ ನಮ್ಮ ಸಮುದಾಯದವರು ಪಾಲಿಸಿಕೊಂಡು ಬಂದಿರುತ್ತಾರೆ. ಧಾರ್ಮಿಕ ವಿಧಿ ವಿಧಾನವಾದ ಅಷ್ಟಮಂಗಳದಲ್ಲಿಯೂ ಈ ಸಂಬಂಧವಾಗಿ ಅನೇಕ ವಿಚಾರಗಳು ಪ್ರಸ್ತಾಪವಾಗಿದ್ದು ಮೂಲ ನಿವಾಸಿಗಳಾದ ಮಲೆಕುಡಿಯರು ಮತ್ತು ದೇವಸ್ಥಾನಕ್ಕೆ ಪರಂಪರಾಗತವಾಗಿ ಇರುವ ಭಾಂದವ್ಯವನ್ನು ತಿಳಿಸುತ್ತದೆ. ಶ್ರೀದೇವರ ಸೇವೆ ಅಲ್ಲದೆ ಕ್ಷೇತ್ರದ ವಿವಿಧ ವಿಭಾಗಗಳಲ್ಲಿ ಮಲೆಕುಡಿಯರು ದುಡಿಯುತ್ತಿದ್ದಾರೆ.

ಈ ಎಲ್ಲಾ ಕಾರಣದ ಹಿನ್ನೆಲೆಯಿಂದಾಗಿ ಇದುವರೆಗಿನ ಕಾರ್ಯ ನಿರ್ವಹಿಸುತ್ತಿದ್ದ ಸಮಿತಿಗಳಲ್ಲಿ ಮಲೆ ಕುಡಿಯರಿಗೆ ಕನಿಷ್ಠ ಒಂದು ಸದಸ್ಯತ್ವ ಸ್ಥಾನವನ್ನು ಕಾಯ್ದಿರಿಸುವುದರ ಜೊತೆಗೆ ಮೀಸಲಾಗಿಡ ಲಾಗಿತ್ತು ಎಂಬುದು ಗಮನಿಸಬೇಕಾದ ಅಂಶ. ಆದರೆ ಈ ಸಾಲಿನ ಹೊಸ ಸಮಿತಿಯಲ್ಲಿ ಸಮುದಾಯದ ಮಂದಿಯ ಹೆಸರನ್ನು ಕೈ ಬಿಡಲಾಗಿದೆ ಎಂಬ ಮಾಹಿತಿ ಇದ್ದು. ಸರ್ಕಾರ ಮತ್ತೊಮ್ಮೆ ಮರು ಪರಿಶೀಲನೆ ಮಾಡಿ ಮಲೆಕುಡಿಯರ ಹೆಸರನ್ನು ಸೇರ್ಪಡೆ ಮಾಡಿ ಪಟ್ಟಿ ಅಂತಿಮಗೊಳಿಸಿ ವ್ಯವಸ್ಥಾಪನ ಸಮಿತಿಯನ್ನು ಘೋಷಣೆ ಮಾಡಬೇಕು.

ಸರಕಾರ ಪದೇ ಪದೇ ಅರಣ್ಯಾಧಾರಿತ ಬುಡಕಟ್ಟು ಜನರ, ಆದಿವಾಸಿಗಳ ಪರ ಎಂಬುದಾಗಿ ಹೇಳುತ್ತಿರುವಾಗ ಈ ವಿಚಾರದಲ್ಲಿ ಕೂಡ ಅರಣ್ಯ ಮೂಲ ಬುಡಕಟ್ಟು ಜನಾಂಗವಾದ ಮಲೆಕುಡಿಯರಿಗೆ ವ್ಯವಸ್ಥಾಪನ ಸಮಿತಿಯಲ್ಲಿ ಒಂದು ಸ್ಥಾನವನ್ನು ಕೊಟ್ಟು ನ್ಯಾಯವನ್ನು ಒದಗಿಸಿ ಕೊಡಬೇಕಾಗಿದೆ. ಪ್ರಮುಖವಾಗಿ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಸಂಬಂಧಪಟ್ಟಂತೆ ಮಲೆಕುಡಿಯರಿಲ್ಲದ ಸಮಿತಿಯು ಪೂರ್ಣ ಪ್ರಮಾಣದ ಸಮಿತಿಯಾಗಿರಲು ಸಾಧ್ಯವಿಲ್ಲ. ಹಾಗಾಗಿ ಕಾನೂನು ಹೋರಾಟಕ್ಕೆ ಅವಕಾಶ ಮಾಡಿಕೊಡದೆ ದೊಡ್ಡ ಮಟ್ಟದಲ್ಲಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ನಮ್ಮ ಜನಾಂಗದವರಿಗೆ ಅವಕಾಶ ಮಾಡಿಕೊಟ್ಟು ಗೊಂದಲಕ್ಕೆ ತೆರೆ ಎಳೆಯಬೇಕಾಗಿ ಸಮಸ್ತ ಮಲೆ ಕುಡಿಯರ ಪರವಾಗಿ ಸರಕಾರವನ್ನು ಒತ್ತಾಯಿಸುತ್ತೇನೆ ಎಂದು ಮಲೆಕುಡಿಯ ಸಂಘದ ರಾಜ್ಯಾಧ್ಯಕ್ಷ ಶ್ರೀಧರ ಗೌಡ ಈದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X