Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಎರಡನೇ ಬಾರಿಗೆ ಕುಕ್ಕುಜೆ ಸರಕಾರಿ...

ಎರಡನೇ ಬಾರಿಗೆ ಕುಕ್ಕುಜೆ ಸರಕಾರಿ ಪ್ರೌಢಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ!

ಆದಿತ್ಯನ ‘ಕಟ್-ಇಟ್-ಈಸಿ’ ಯಂತ್ರಕ್ಕೆ ಮಾನ್ಯತೆ

ವಾರ್ತಾಭಾರತಿವಾರ್ತಾಭಾರತಿ23 Sept 2026 8:18 PM IST
share
ಎರಡನೇ ಬಾರಿಗೆ ಕುಕ್ಕುಜೆ ಸರಕಾರಿ ಪ್ರೌಢಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ!

ಉಡುಪಿ, ಸೆ.23: ಕೇಂದ್ರ ಸರಕಾರದ ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವಾಲಯವು ನಡೆಸುವ ರಾಷ್ಟ್ರಮಟ್ಟದ ಇನ್‌ಸ್ಪಾಯರ್ ಮಾನಕ್ ಮಾದರಿ ರಚನಾ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜು ಕುಕ್ಕುಜೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿ ಆದಿತ್ಯ ನಿರ್ಮಿಸಿದ ಯಂತ್ರವೊಂದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗುವ ಮೂಲಕ ಸಂಸ್ಥೆಯ ಇತಿಹಾಸದಲ್ಲಿ ಎರಡನೇ ಬಾರಿಗೆ ಇನ್‌ಸ್ಪಾಯರ್ ಮಾನಕ್ ಸ್ಪರ್ಧೆಗೆ ಆಯ್ಕೆಯಾದಂತಾಗಿದೆ.

ಶಾಲೆಯ ರಾಷ್ಟ್ರಪ್ರಶಸ್ತಿ ಪುರಸ್ಕೃತ ಸಮಾಜ ವಿಜ್ಞಾನ ಅಧ್ಯಾಪಕರಾದ ಸುರೇಶ್ ಮರಕಾಲ ಇವರ ಮಾರ್ಗದರ್ಶನ ದಲ್ಲಿ ರಚಿಸಿದ ‘ಕಟ್- ಇಟ್ - ಈಸಿ’ ಎಂಬ ಯಂತ್ರವು ರಾಷ್ಟ್ರಮಟ್ಟಕ್ಕೆ ತಲುಪಿದ ನೂತನ ಅನ್ವೇಷಣೆಯಾಗಿದೆ.

ಗ್ರಾಮೀಣ ಪ್ರದೇಶದಲ್ಲಿ ಇಂದಿಗೂ ಸ್ನಾನಕ್ಕೆ, ಅಡುಗೆಗೆ ಸೌದೆಯನ್ನು ಬಳಸುತ್ತಾರೆ. ಹಾಗೆಂದು ದಪ್ಪದಪ್ಪದ ಸೌದೆಗಳನ್ನು ಒಡೆಯುವುದೇ ಬಹಳ ಕಷ್ಟದ ಕೆಲಸ. ಆದರೆ ಕಟ್-ಇಟ್-ಈಸಿ ಯಂತ್ರವು ಅತ್ಯಂತ ಸುಲಭವಾಗಿ ಈ ಕೆಲಸವನ್ನು ಮಾಡಿ ಮುಗಿಸುತ್ತದೆ. ವಿಶೇಷವೆಂದರೆ ಈ ಯಂತ್ರದಲ್ಲಿ ಯಾವುದೇ ಇಲೆಕ್ಟ್ರಿಕ್ ಅಥವಾ ಇಲೆಕ್ಟ್ರಾನಿಕ್ ಉಪಕರಣವಿಲ್ಲ. ಕೇವಲ ಕಬ್ಬಿಣದಿಂದ ರಚಿಸಿದ ಈ ಯಂತ್ರವನ್ನು ಬಳಸಿ ಚಿಕ್ಕ ಮಕ್ಕಳು ಕೂಡಾ ದೊಡ್ಡ ದೊಡ್ಡ ಕಟ್ಟಿಗೆಗಳನ್ನು ಒಡೆದು ಚಿಕ್ಕ ಚಿಕ್ಕ ಗಾತ್ರದ ಸೌದೆಯನ್ನಾಗಿ ಮಾಡಬಹುದು.

ಆದಿತ್ಯ ರೂಪಿಸಿದ ಸರಳ ಯಂತ್ರದ ಮತ್ತೊಂದು ವಿಶೇಷವೆಂದರೆ ಕಟ್ಟಿಗೆಯ ದಪ್ಪಕ್ಕೆ ಅನುಗುಣವಾಗಿ ಸಣ್ಣ, ಮಧ್ಯಮ ಹಾಗೂ ದಪ್ಪ ಎಂಬ ಮೂರು ಪ್ರಕಾರದ ಸೌದೆಗಳನ್ನು ಮಾಡುವ ಅನುಕೂಲವೂ ಈ ಯಂತ್ರದಲ್ಲಿದೆ! ಮಾದರಿಯ ಕಾರ್ಯವಿಧಾನ, ವಿನ್ಯಾಸವನ್ನು ವಿದ್ಯಾರ್ಥಿ ಆದಿತ್ಯ ರಚಿಸಿದ್ದರೆ, ಕಬ್ಬಿಣದ ಚೌಕಟ್ಟು ರಚನೆ, ವೆಲ್ಡಿಂಗ್ ಕೆಲಸ, ಪೈಂಟಿಂಗ್ ಇತ್ಯಾದಿ ಕಾರ್ಯ ಗಳನ್ನು ಶಿಕ್ಷಕ ಸುರೇಶ್ ಮರಕಾಲ ಹಾಗೂ ಪ್ರವೀಣ್ ಹೆಬ್ರಿ ಮಾಡಿದ್ದಾರೆ. ಶಾಲೆಯ ವಿಜ್ಞಾನ ಶಿಕ್ಷಕಿ ಪ್ರತಿಮಾ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಬಾಬುರಾಯ ಕಾಮತ್ ಅವರು ಇವರಿಗೆ ಸಂಪೂರ್ಣ ಬೆಂಬಲವನ್ನು ನೀಡಿ ಸಹಕರಿಸಿದ್ದರು.

ಎರಡು ವರ್ಷಗಳ ಹಿಂದೆ ಅಧ್ಯಾಪಕರಾದ ಸುರೇಶ್ ಮರಕಾಲ ಇವರ ಮಾರ್ಗದರ್ಶನದಲ್ಲಿ ಇದೇ ಶಾಲೆಯಲ್ಲಿ ಕಲಿಯುತ್ತಿದ್ದ ಇಬ್ಬರು ವಿದ್ಯಾರ್ಥಿನಿ ಯರಾದ ಅಮೂಲ್ಯ ಹಾಗೂ ನಿಕಿತಾ ರಚಿಸಿದ ಮಾದರಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿ ಮುಂದೆ ಜಪಾನ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಮಟ್ಟದ ಸ್ಪರ್ಧೆಗೂ ಆಯ್ಕೆಯಾಗಿದ್ದವು.

ಇದೀಗ ಎರಡನೇ ಬಾರಿಗೆ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಹಾಗೂ ಶಿಕ್ಷಕರ ಸಾಧನೆ ಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು, ಡಯಟ್ ಪ್ರಾಂಶುಪಾಲರು, ಕ್ಷೇತ್ರಶಿಕ್ಷಣಾಧಿಕಾರಿಗಳು, ಇನ್‌ಸ್ಪಾಯರ್ ನೋಡಲ್ ಅಧಿಕಾರಿಗಳು, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ಎಸ್.ಬಿ.ಸಿ, ಎಸ್.ಡಿ.ಎಂ.ಸಿ, ಪೋಷಕರು, ಹಳೆ ವಿದ್ಯಾರ್ಥಿಗಳು ಶ್ಲಾಘಿಸಿದ್ದಾರೆ.

‘ನಮ್ಮ ಸುತ್ತಮುತ್ತಲೂ ಸೌದೆ ಒಡೆಯಲು ಎದುರಾಗುತ್ತಿದ್ದ ಸಮಸ್ಯೆಯನ್ನು ನೋಡಿ, ಗುರುಗಳ ಮಾರ್ಗದರ್ಶನದಲ್ಲಿ ಅದಕ್ಕೊಂದು ಯಂತ್ರದ ರೂಪ ನೀಡಿದೆವು. ಇದೀಗ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವುದು ಕೇಳಿ ಬಹಳ ಸಂತೋಷವಾಗಿದೆ. ನನಗೆ ಪ್ರೇರಣೆ ನೀಡಿ ನನ್ನ ಕಲ್ಪನೆಯು ಯಂತ್ರದ ರೂಪಕ್ಕೆ ಬರಲು ಕಾರಣೀಕರ್ತರಾದ ಸುರೇಶ್ ಮರಕಾಲ ಸರ್ ಅವರಿಗೆ ಧನ್ಯವಾದಗಳು.

- ಆದಿತ್ಯ, ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆಯಾದ ವಿದ್ಯಾರ್ಥಿ.

‘ಸಮಾಜ ವಿಜ್ಞಾನ ಶಿಕ್ಷಕನಾಗಿ ರಾಷ್ಟ್ರಮಟ್ಟದ ವಿಜ್ಞಾನ ಮಾದರಿ ಸ್ಪರ್ಧೆಗೆ ವಿದ್ಯಾರ್ಥಿಗಳನ್ನು ಅಣಿಗೊಳಿಸಲು ನನಗೆ ಶಾಲೆಯಲ್ಲಿ ಅವಕಾಶ ನೀಡಿದ್ದು ಬಹು ದೊಡ್ಡ ವಿಚಾರ. ಹೀಗಾಗಿ ಎರಡನೇ ಬಾರಿಗೆ ನಮ್ಮ ಶಾಲೆಯು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿರುವ ಈ ಗೌರವವನ್ನು ನನ್ನೆಲ್ಲಾ ಆತ್ಮೀಯ ಸಹದ್ಯೋಗಿಗಳಿಗೆ, ಇಲಾಖಾ ಅಧಿಕಾರಿಗಳಿಗೆ, ಎಸ್.ಬಿ.ಸಿ, ಎಸ್.ಡಿ.ಎಂ.ಸಿಗೆ ಅರ್ಪಿಸುತ್ತೇನೆ.

-ಸುರೇಶ್ ಮರಕಾಲ, ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕಕ್ಷಕರು, ಕುಕ್ಕುಜೆ.

Tags

KukkujeGovernmentHigh Schoolselectnational levelsecond time
share
ವಾರ್ತಾಭಾರತಿ
ವಾರ್ತಾಭಾರತಿ
Next Story
X