ಕುಂದಾಪುರ: ಖಿದ್ಮಾ ಫೌಂಡೇಶನ್ ವತಿಯಿಂದ ಸೌಹಾರ್ದ ಇಫ್ತಾರ್ ಕೂಟ

ಕುಂದಾಪುರ: ಖಿದ್ಮಾ ಫೌಂಡೇಶನ್ ಕುಂದಾಪುರ ತಾಲೂಕು ವತಿಯಿಂದ ಆನಗಳ್ಳಿ ಬಸ್ರೂರಿನ ಆದಿತ್ಯ ರೆಸಾರ್ಟ್ ನಲ್ಲಿ ಮಾ.9 ರಂದು ಸೌಹಾರ್ದ ಇಫ್ತಾರ್ ಕೂಟ ನಡೆಯಿತು.
ಖಿದ್ಮಾ ಫೌಂಡೇಶನ್ ಕುಂದಾಪುರ ಮತ್ತು ಬೈಂದೂರು ತಾಲೂಕು ಅಧ್ಯಕ್ಷ ಶೇಖ್ ಅಬು ಮುಹಮ್ಮದ್ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಅಹ್ಮದ್ ಸವೋದ್ ಅವರ ಕುರ್ ಆನ್ ಪಠಣದೊಂದಿಗೆ ಕಾರ್ಯಕ್ರಮ ಆರಂಭವಾಯಿತು. ಮೌಲಾನಾ ಝಮೀರ್ ಅಹ್ಮದ್ ರಶಾದಿ ಅವರು ಸಂಸ್ಥೆಯ ಸೇವಾ ಕಾರ್ಯ ಚಟುವಟಿಕೆಗಳ ಮೇಲೆ ಬೆಳಕು ಚೆಲ್ಲುತ್ತಾ ಪ್ರಾಸ್ತಾವಿಕ ಭಾಷಣ ಮಾಡಿದರು. ಹೊಡೆಯ ಸಾಲಿಹಾತ್ ಸಮೂಹ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷರಾದ ಇದ್ರೀಸ್ ಹೂಡೆ ದಿಕ್ಸೂಚಿ ಭಾಷಣ ಮಾಡಿದರು.
ಮುಖ್ಯ ಅತಿಥಿಗಳಾದ ಸಹಬಾಳ್ವೆ ಕುಂದಾಪುರದ ಅಧ್ಯಕ್ಷರಾದ ರಾಮಕೃಷ್ಣ ಹೆರ್ಳೆ, ರಾಜಕೀಯ ನೇತಾರರಾದ ದೇವಾನಂದ ಶೆಟ್ಟಿ, ಕುಂದಾಪುರ ನಗರ ಯೋಜನೆ ಪ್ರಾಧಿಕಾರದ ಅಧ್ಯಕ್ಷರಾದ ವಿನೋದ್ ಕ್ರಾಸ್ತಾ, ಬಸ್ರೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಬೇಳೂರು ದಿನಕರ ಶೆಟ್ಟಿ, ನಿವೇದಿತಾ ಪ್ರೌಢ ಶಾಲೆ, ಬಸ್ರೂರಿನ ನಿವೃತ್ತ ಮುಖ್ಯೋಪಾಧ್ಯಾಯರಾದ ದಿನಕರ್ ಆರ್ ಶೆಟ್ಟಿ, ಕರ್ನಾಟಕ ದಲಿತ ಸಂಘರ್ಷ ಸಮಿತಿ, ಅಂಬೇಡ್ಕರ್ ವಾದ ಕುಂದಾಪುರ ತಾಲೂಕಿನ ಸಂಚಾಲಕರಾದ ಕೆ.ಸಿ. ರಾಜು ಬೆಟ್ಟಿನಮನೆ ಅವರು ರಂಝಾನ್ ನ ಶುಭಾಶಯಗಳನ್ನು ಕೋರಿದರು.
ಈ ಸಂದರ್ಭದಲ್ಲಿ ಕುಂದಾಪುರದ ಆದರ್ಶ್ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಆದರ್ಶ ಹೆಬ್ಬಾರ್, ಖಿದ್ಮಾ ರಿಯಾದ್ ನ ಪ್ರತಿನಿಧಿ ಶೇಖ್ ಹನೀಫ್, ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ರಫೀಕ್ ವಂಡ್ಸೆ, ವಿವಿಧ ಧರ್ಮದ ಅನುಯಾಯಿಗಳು ಮತ್ತು ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು. ಮಾಜಿ ಅಧ್ಯಕ್ಷರಾದ ಶೇಖ್ ಅಸ್ಗರ್ ಅಲಿ ವಂದಿಸಿದರು. ಮುನೀರ್ ಅಹ್ಮದ್ ಕಂಡ್ಲೂರು ನಿರೂಪಿಸಿದರು. ಇಫ್ತಾರ್ ನೊಂದಿಗ ಕಾರ್ಯಕ್ರಮ ಮುಕ್ತಾಯಗೊಂಡಿತು.