Kundapur | ಕಮಲಶಿಲೆ-ಯಳಬೇರು ರಸ್ತೆ ಬದಿಯ ಧರೆೆ ಕುಸಿತ : ಕ್ರಮಕ್ಕೆ ಆಗ್ರಹ

ಕುಂದಾಪುರ : ಕಮಲಶಿಲೆಯಿಂದ ಯಳಬೇರಿಗೆ ಸಂಪರ್ಕ ರಸ್ತೆಯಲ್ಲಿ ಬರೆ ಕುಸಿದಿದ್ದು, ರಸ್ತೆ ಸಂಪರ್ಕ ಕಡಿತಗೊಳ್ಳುವ ಭೀತಿ ಎದುರಾಗಿದೆ. ರಸ್ತೆ ಬದಿಯ ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಭೂಕುಸಿತದಿಂದ ಮಣ್ಣು ಹಾಗೂ ಬಂಡೆಗಳು ರಸ್ತೆಗೆ ಜಾರಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಕುಸಿತ ಸಂಭವಿಸುವ ಸಾಧ್ಯತೆ ಇದೆ. ಈ ರಸ್ತೆ ಕಮಲಶಿಲೆ ಹಾಗೂ ಯಳಬೇರು ಭಾಗದ ಜನರಿಗೆ ಪ್ರಮುಖ ಸಂಪರ್ಕ ಮಾರ್ಗವಾಗಿದ್ದು, ಪ್ರತಿದಿನ ನೂರಾರು ಮಂದಿ, ಶಾಲಾ ವಾಹನಗಳು ಹಾಗೂ ವಿದ್ಯಾರ್ಥಿಗಳು ಇದೇ ರಸ್ತೆಯಲ್ಲಿ ಸಂಚರಿಸುತ್ತಾರೆ.
ಅನಾಹುತ ಸಂಭವಿಸುವ ಮುನ್ನ ಸಂಬಂಧಪಟ್ಟ ಇಲಾಖೆ ಹಾಗೂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಶಾಶ್ವತ ಪರಿಹಾರ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
Next Story




