ಕುಂದಾಪುರ : ಕೋಡಿ ಬ್ಯಾರೀಸ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

ಕುಂದಾಪುರ: ಜ.26: ಕೋಡಿಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ 77ನೇ ಗಣರಾಜ್ಯೋತ್ಸವ ಆಚರಣೆಯು 44ನೇ ಸ್ವಚ್ಛ ಕಡಲ ತೀರ- ಹಸಿರು ಕೋಡಿ’ ಅಭಿಯಾನದೊಂದಿಗೆ ನಡೆಯಿತು.
ಮುಖ್ಯ ಅತಿಥಿಯಾಗಿ ಧ್ವಜಾರೋಹಣ ನೆರವೇರಿಸಿದ ಗಡಿ ಭದ್ರತಾ ಪಡೆ (ಬಿಎಸ್‌ಎಫ್)ಯ ಸುನೀತಾ ಪೂಜಾರಿ ಮಾತನಾಡಿ, ಆತ್ಮವಿಶ್ವಾಸ ಒಂದಿದ್ದರೆ ಎಲ್ಲವನ್ನು ಸಾಧಿಸಲು ಸಾಧ್ಯ. ಗಣರಾಜ್ಯ ಎಂಬುದು ಒಬ್ಬ ಸೈನಿಕನಿಂದ ನಿರ್ಧರಿತವಾದುದಲ್ಲ, ಅದು ದೇಶದ ಎಲ್ಲಾ ಪ್ರಜೆಗಳ ಒಗ್ಗೂಡುವಿಕೆಯಿಂದ ಸಾಧ್ಯ ಎಂದರು.
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿಯ ಸದಸ್ಯ ಡಾ. ಆಸೀಫ್ ಬ್ಯಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಾಜಿ ಕೆ.ಮೊಹಿದ್ದೀನ್ ಬ್ಯಾರಿ ಸ್ಮಾರಕ ಪ್ರೌಢಶಾಲೆಯ ಮುಖ್ಯೋ ಪಾಧ್ಯಾಯ ಡಾ.ಜಯಶೀಲ ಶೆಟ್ಟಿ ವಿದ್ಯಾರ್ಥಿಗಳಿಗೆ ಸಂವಿಧಾನದ ಪ್ರತಿಜ್ಞೆಯನ್ನು ಬೋಧಿಸಿದರು.
ಕಾರ್ಯಕ್ರಮದಲ್ಲಿ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕ ಅಶ್ವಿನಿ ಶೆಟ್ಟಿ, ಡೀನ್ ಅಕಾಡೆಮಿಕ್ಸ್ ಡಾ.ಪೂರ್ಣಿಮಾ ಟಿ., ಬ್ಯಾರೀಸ್ ಡಿ.ಎಡ್. ಮತ್ತು ಬಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಡಾ.ಫಿರ್ದೋಸ್, ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಶಬೀನಾ ಎಚ್., ಕುಂದಾಪುರ ಪುರಸಭೆಯ ಸದಸ್ಯೆ ಕಮಲ, ಕೋಡಿ ಚಕ್ರೇಶ್ವರಿ ದೇವಸ್ಥಾನದ ಧರ್ಮದರ್ಶಿ ಗೋಪಾಲ ಪೂಜಾರಿ, ಸಮೂಹ ಶಿಕ್ಷಣ ಸಂಸ್ಥೆಗಳ ವಿವಿಧ ವಿಭಾಗಗಳ ಸಲಹಾ ಮಂಡಳಿ ಮತ್ತು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ವಿವಿಧ ವಿಭಾಗಳ ಮುಖ್ಯಸ್ಥರು, ಬೋಧಕ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಬ್ಯಾರೀಸ್ ಸೀಸೈಡ್ ಪಬ್ಲಿಕ್ ಸ್ಕೂಲ್‌ನ ಎಚ್‌ಓಡಿ ಶ್ವೇತಾ ಎನ್.ಕೆ ಸ್ವಾಗತಿಸಿದರು. ಬ್ಯಾರೀಸ್ ಬಿ.ಎಡ್ ಕಾಲೇಜಿನ ಪ್ರಶಿಕ್ಷಣಾರ್ಥಿ ಸ್ವಾತಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಸಮೂಹ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿಗಳಿಂದ ಧ್ವಜದೊಂದಿಗೆ ಸಾಮೂಹಿಕ ಕವಾಯತು ಮತ್ತು ದೇಶಭಕ್ತಿ ಗೀತೆ ಗಾಯನದೊಂದಿಗೆ ಗಣರಾಜ್ಯೋತ್ಸವ ಆಚರಿಸಲಾಯಿತು. ತದನಂತರ ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳು ನಡೆಸಿಕೊಂಡು ಬರುತ್ತಿರುವ ಸ್ವಚ್ಛ ಕಡಲ ತೀರ- ಹಸಿರು ಕೋಡಿ’ಇದರ 44ನೇ ಅಭಿಯಾನ ನಡೆಯಿತು.







