Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ | ಕ್ರೀಡೆ ಎಂಬುದು...

ಕುಂದಾಪುರ | ಕ್ರೀಡೆ ಎಂಬುದು ಸ್ಪರ್ಧೆಯಲ್ಲ, ಭಾಗವಹಿಸುವಿಕೆ : ಅಕ್ಷತಾ ಪೂಜಾರಿ

ವಾರ್ತಾಭಾರತಿವಾರ್ತಾಭಾರತಿ14 Nov 2025 7:11 PM IST
share
ಕುಂದಾಪುರ | ಕ್ರೀಡೆ ಎಂಬುದು ಸ್ಪರ್ಧೆಯಲ್ಲ, ಭಾಗವಹಿಸುವಿಕೆ : ಅಕ್ಷತಾ ಪೂಜಾರಿ
ಕೋಡಿ ಬ್ಯಾರೀಸ್ ಸಮೂಹ ಸಂಸ್ಥೆಯ ವಾರ್ಷಿಕ ಕ್ರೀಡೋತ್ಸವ ಉದ್ಘಾಟನೆ

ಕುಂದಾಪುರ, ನ:14: ಕೋಡಿ ಬ್ಯಾರೀಸ್ ಸಮೂಹ ಸಂಸ್ಥೆಯ ವಾರ್ಷಿಕ ಕ್ರೀಡೋತ್ಸವ ಕಾರ್ಯಕ್ರಮವನ್ನು ಶುಕ್ರವಾರ ಅಂತರರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟು ಅಕ್ಷತಾ ಪೂಜಾರಿ ಕ್ರೀಡಾ ಜ್ಯೋತಿಯನ್ನು ಬೆಳಗಿಸುವ ಮೂಲಕ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಕ್ರೀಡೆಯೊಂದಿಗೆ ಓದಿನ ಕಡೆಗೂ ಗಮನ ನೀಡಬೇಕು. ಕ್ರೀಡೆ ಎಂಬುದು ಸ್ಪರ್ಧೆಯಲ್ಲ, ಭಾಗವಹಿಸುವಿಕೆ ಮುಖ್ಯ. ಸೋಲು- ಗೆಲುವು ಆಟದ ಒಂದು ಭಾಗ. ಗೆಲುವು ನಿಮ್ಮ ಮುಂದಿನ ಹೆಜ್ಜೆ, ಹಾಗೆಯೇ ಸೋಲು ಜೀವನದ ಪಾಠ ಎಂದು ತಿಳಿಸಿದರು.

ಕುಂದಾಪುರ ಉಪ ವಿಭಾಗದ ಉಪಾಧೀಕ್ಷ ಎಚ್.ಡಿ.ಕುಲಕರ್ಣಿ ಮಾತನಾಡಿ, ವಿದ್ಯಾರ್ಥಿಗಳಲ್ಲಿರುವ ಶಿಸ್ತು ಬದ್ಧತೆ ಮಾದರಿಯಾಗಿದೆ. ಬ್ಯಾರೀಸ್ ಸಂಸ್ಥೆಯಲ್ಲಿ ಮಕ್ಕಳಿಗೆ ಗ್ರಾಮೀಣ ಕ್ರೀಡೆಯನ್ನು ಹೇಳಿಕೊಡುವ ಮೂಲಕ ಗ್ರಾಮೀಣತೆಯನ್ನು ಜೀವಂತಗೊಳಿಸುವ ಪ್ರಯತ್ನವನ್ನು ಮಾಡಿರುವುದು ನಿಜಕ್ಕೂ ಶ್ಲಾಘನೀಯ ಎಂದು ಹೇಳಿದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಸ್ವಸ್ಥ ಮಂಡಳಿಯ ಸದಸ್ಯ ಡಾ.ಆಸೀಫ್ ಬ್ಯಾರಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಾಧನೆಯ ದಾರಿ ಸುಲಭವಲ್ಲ, ಅದರ ಕಾರ್ಯ ಕಠಿಣ. ಆದರೂ ಸಾಧಿಸಬೇಕೆಂಬ ಛಲ, ಧೃಡನಿರ್ಧಾರ, ಗುರಿ, ತಾಳ್ಮೆ ಅತಿಮುಖ್ಯ ಎಂದು ತಿಳಿಸಿದರು.

ಅಧ್ಯಕ್ಷತೆಯನ್ನು ಬ್ಯಾರೀಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಹಾಜಿ ಅಬ್ದುಲ್ ರೆಹಮಾನ್ ಬ್ಯಾರಿ ವಹಿಸಿದ್ದರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಯ ಡೀನ್ ಅಕಾಡೆಮಿ ಡಾ.ಪೂರ್ಣಿಮಾ ಟಿ., ಬ್ಯಾರೀಸ್ ಡಿ.ಎಡ್ ಮತ್ತು ಬಿ.ಎಡ್ನ ಪ್ರಾಂಶುಪಾಲೆ ಡಾ.ಫಿರ್ದೋಸ್, ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಶಬೀನಾ ಎಚ್., ಸಂಸ್ಥೆಯ ಎಲ್ಲ ಉಪ ಪ್ರಾಂಶುಪಾಲರು, ಎಸ್ಡಿಎಂಸಿ ಹಾಗೂ ಪಿಟಿಎಯ ಎಲ್ಲಾ ಸದಸ್ಯರು, ಉಪನ್ಯಾಸಕರು, ಉಪನ್ಯಾಸಕೇತರರ ವೃಂದ, ವಿದ್ಯಾರ್ಥಿ ಸಮೂಹ ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಅಂತರರಾಷ್ಟ್ರೀಯ ಪವರ್ ಲಿಫ್ಟಿಂಗ್ ಕ್ರೀಡಾಪಟು ಅಕ್ಷತ ಪೂಜಾರಿ ಅವರನ್ನು ಸನ್ಮಾನಿಸಲಾಯಿತು. 2025-26ನೇ ಸಾಲಿನ 14 ವರ್ಷದೊಳಗಿನ ಎಐಸಿಎಸ್ ಅಂತರ್ ಕಾಲೇಜು ಫುಟ್ಬಾಲ್ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡ ಬ್ಯಾರೀಸ್ ಸೀ ಸೈಡ್ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿಗಳಿಗೆ ಟ್ರೋಫಿಯನ್ನು ಹಸ್ತಾಂತರಿಸಲಾಯಿತು.

ಬ್ಯಾರೀಸ್ ಸಮೂಹ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳು ವಿಶಿಷ್ಟ ರೀತಿಯಲ್ಲಿ ಪಥಸಂಚಲನವನ್ನು ಪ್ರದರ್ಶಿಸಿ, ವೈಭವ ಪೂರ್ಣವಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ನೆರವೇರಿಸಿಕೊಟ್ಟರು. ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕಿ ಅಶ್ವಿನಿ ಶೆಟ್ಟಿ ಸ್ವಾಗತಿಸಿದರು. ಬ್ಯಾರೀಸ್ ಸೀಸೈಡ್ ಪಬ್ಲಿಕ್ ಸ್ಕೂಲ್ ನ ದೈಹಿಕ ಶಿಕ್ಷಣ ಶಿಕ್ಷಕಿ ವೀಣಾ ಅಗೇರಿ ಅತಿಥಿಗಳನ್ನು ಪರಿಚಯಿಸಿದರು. ಹಾಜಿ ಕೆ.ಮೋಹಿದೀನ್ ಬ್ಯಾರಿ ಅನುದಾನಿತ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಮುಹಮ್ಮದ್ ಇಲಿಯಾಸ್ ವಂದಿಸಿದರು. ಬಿ.ಎಡ್ ನ ಪ್ರಶಿಕ್ಷಣಾರ್ಥಿ ಸ್ವಾತಿ ಹಾಗೂ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಲಮೀಸ್ ಕಾರ್ಯಕ್ರಮ ನಿರೂಪಿಸಿದರು.

Tags

Kundapur
share
ವಾರ್ತಾಭಾರತಿ
ವಾರ್ತಾಭಾರತಿ
Next Story
X