Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ: ಭಾಗವತ ಸುಬ್ರಹ್ಮಣ್ಯ...

ಕುಂದಾಪುರ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ವಾರ್ತಾಭಾರತಿವಾರ್ತಾಭಾರತಿ25 April 2024 9:14 AM IST
share
ಕುಂದಾಪುರ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ನಿಧನ

ಕುಂದಾಪುರ, ಎ.25: ಬಡಗುತಿಟ್ಟಿನ ಯಕ್ಷಗಾನದ ಪ್ರಸಿದ್ಧ ಹಾಗೂ ಜನಪ್ರಿಯ ಭಾಗವತರಾಗಿದ್ದ ಸುಬ್ರಹ್ಮಣ್ಯ ಧಾರೇಶ್ವರ (67) ಎ.25 ರ ಮುಂಜಾನೆ ಬೆಂಗಳೂರಿನ ಪುತ್ರನ ಮನೆಯಲ್ಲಿ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ.

ಧಾರೇಶ್ವರ ಅವರು ಯಕ್ಷಗಾನ ಕ್ಷೇತ್ರದಲ್ಲಿ ಸುಮಾರು 46 ವರ್ಷಗಳ ಸೇವೆ ಸಲ್ಲಿಸಿದ್ದರು. 1957 ರಲ್ಲಿ ಗೋಕರ್ಣದಲ್ಲಿ ಜನಿಸಿದ್ದ ಅವರು ಚಿಕ್ಕಂದಿನಿಂದಲೂ ಸಂಗೀತಾಭ್ಯಾಸ ‌ಮಾಡುತಿದ್ದರು. ಶಿರಸಿ ಮೇಳದಲ್ಲಿ ಭಾಗವತರಾಗಿ ಸೇವೆ ಸಲ್ಲಿಸಿದ ಬಳಿಕ ಪೆರ್ಡೂರು ಮೇಳ ಸೇರಿದ್ದ ಧಾರೇಶ್ವರ ಅವರು 28 ವರ್ಷ ಪ್ರಧಾನ ಭಾಗವತರಾಗಿ ಸೇವೆ ಸಲ್ಲಿಸಿದ್ದರು. ಅದಕ್ಕೂ ಮೊದಲು ಅಮೃತೇಶ್ವರಿ ಮೇಳದಲ್ಲಿ ತಮ್ಮ ತಿರುಗಾಟ ಆರಂಭಿಸಿದ್ದರು.

ಪ್ರಸಿದ್ಧ ಬಡಗುತಿಟ್ಟಿನ ಭಾಗವತ ನಾರಣಪ್ಪ ಉಪ್ಪೂರರಿಂದ ಭಾಗವತಿಕೆ ಕಲಿತು ರಂಗಸ್ಥಳದ ಮೇಲೇರಿದರು. ಹೊಸ ಹೊಸ ಪ್ರಸಂಗಗಳನ್ನು ನಿರ್ದೇಶಿಸುವ ಮೂಲಕ ಅವರು ಯಕ್ಷಗಾನ ಕ್ಷೇತ್ರದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದರು.

ಕೀರ್ತಿಯ ಉತ್ತುಂಗದಲ್ಲಿ ಇದ್ದಾಗಲೇ ಮೇಳ ತಿರುಗಾಟ ನಿಲ್ಲಿಸಿದ್ದರು. ಮೇಳ ಬಿಟ್ಟು 10 ವರ್ಷದ ಬಳಿಕ ಮತ್ತೆ ಅದೇ ಮೇಳಕ್ಕೆ ಸೇರಿ ಒಂದು ವರ್ಷದ ತಿರುಗಾಟ ಮಾಡಿದ್ದರು. ಧಾರೇಶ್ವರ ಯಕ್ಷ ಬಳಗ ಮೂಲಕ ಯಕ್ಷಗಾನ ಕಾರ್ಯಕ್ರಮ ಸಂಯೋಜಿಸುತ್ತಿದ್ದರು.

ಬಡಗುತಿಟ್ಟಿನಲ್ಲಿ ಪ್ರಯೋಗಶೀಲ ಭಾಗವತರೆನಿಸಿದ್ದ ಇವರು ಪತ್ನಿ, ಪುತ್ರ, ಪುತ್ರಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮೃತರ ಅಂತ್ಯಕ್ರಿಯೆ ಇಂದು ಸಂಜೆ ಕುಂದಾಪುರ ತಾಲೂಕಿನ ನಾಗೂರಿನ ಸ್ವಗೃಹದಲ್ಲಿ ನಡೆಯಲಿದೆ ಎಂದು ತಿಳಿದುಬಂದಿದೆ.

ಗಾನ ಮಾಂತ್ರಿಕ, ಕರಾವಳಿ ಭಾಗದ ಸುಪ್ರಸಿದ್ಧ ಯಕ್ಷಗಾನ ಭಾಗವತರಾದ ಸುಬ್ರಹ್ಮಣ್ಯ ಧಾರೇಶ್ವರರ ನಿಧನದ ಸುದ್ದಿ ನೋವುಂಟು ಮಾಡಿದೆ.
ಸುದೀರ್ಘ 45 ವರ್ಷಗಳ ಕಾಲ ತಮ್ಮ ಕಂಠಸಿರಿಯ ಮೂಲಕ ಕಲಾರಸಿಕರನ್ನು ರಂಜಿಸಿದ್ದ ಧಾರೇಶ್ವರರು ಪ್ರಯೋಗಶೀಲ ಭಾಗವತಿಕೆಗೆ ಹೆಸರುವಾಸಿಯಾದವರು.

ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ… pic.twitter.com/pNqoPMWsv2

— Siddaramaiah (@siddaramaiah) April 25, 2024

Tags

KundapurSubrahmanya Dhareshwar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X