Kundapura | ಪೊಲೀಸರಿಂದ ತಪ್ಪಿಸಲು ಯತ್ನಿಸಿ, ಬಿದ್ದು ಗಾಯಗೊಂಡ ಆರೋಪಿ

ಕುಂದಾಪುರ: ವಂಚನೆ ಪ್ರಕರಣದಲ್ಲಿ ಬಂಧಿಸಲ್ಪಟ್ಟ ಆರೋಪಿಯೊಬ್ಬ ಕೋಟ ಪೊಲೀಸರ ಕೈಯಿಂದ ತಪ್ಪಿಸಿಕೊಂಡು ಓಡಿ ಹೋಗಲು ಪ್ರಯತ್ನಿಸಿದ ಘಟನೆ ಎ.17ರಂದು ರಾತ್ರಿ ವೇಳೆ ಕೋಟದಲ್ಲಿ ನಡೆದಿದೆ.
ಸ್ವಪ್ನೀಲ್ ಸುಹಾಸ್ ಶೇಲಾರ್(37) ಬಂಧಿತ ಆರೋಪಿ. ಈತನನ್ನು ಕೋಟ ಪೊಲೀಸ್ ಠಾಣೆಯಲ್ಲಿ ದಾಖಲಾದ ಐಟಿ ಕಾಯ್ದೆ ಪ್ರಕರಣಕ್ಕೆ ಸಂಬಂಧಿಸಿ ಕೋಟ ಪೊಲೀಸರು ಎ.17ರಂದು ಸಂಜೆ ಮಂಗಳೂರು ಬಸ್ ನಿಲ್ದಾಣದ ಬಳಿ ವಶಕ್ಕೆ ಪಡೆದಿದ್ದರು. ಅಲ್ಲಿಂದ ಆತನನ್ನು ಖಾಸಗಿ ವಾಹನದಲ್ಲಿ ಕೋಟ ಪೊಲೀಸ್ ಠಾಣೆಗೆ ಕರೆದುಕೊಂಡು ಬರುತ್ತಿದ್ದರು. ಕೋಟ ಪೊಲೀಸ್ ಠಾಣೆಯ ಎದುರಿನ ಸರ್ವೀಸ್ ರಸ್ತೆಯ ಬಳಿ ಕಾರನ್ನು ನಿಲ್ಲಿಸಿದಾಗ ಆರೋಪಿ ತಪ್ಪಿಸಿಕೊಂಡು ಓಡಿ ಹೋಗಲು ಪ್ರಯತ್ನಿಸಿದ್ದಾನೆ. ಆಗ ಆತ ನಿಯಂತ್ರಣ ತಪ್ಪಿ ರಸ್ತೆಯ ಮೇಲೆ ಬಿದ್ದ ಪರಿಣಾಮ ಗಾಯಗೊಂಡಿದ್ದಾನೆ ಎನ್ನಲಾಗಿದೆ. ಆತನನ್ನು ಮತ್ತೆ ವಶಕ್ಕೆ ಪಡೆದುಕೊಂಡ ಪೊಲೀಸರು, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story




