ಕುಂದಾಪುರ | ಬೈಕ್ ಢಿಕ್ಕಿ: ಪಾದಾಚಾರಿ ಮೃತ್ಯು

ಸಾಂದರ್ಭಿಕ ಚಿತ್ರ
ಕುಂದಾಪುರ, ಡಿ.6: ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.5ರಂದು ರಾತ್ರಿ ವೇಳೆ ನಡೆದಿದೆ.
ಮೃತರನ್ನು ಗೋವಿಂದ ಪೂಜಾರಿ ಎಂದು ಗುರುತಿಸಲಾಗಿದೆ.
ಮೆಹಂದಿ ಕಾರ್ಯಕ್ರಮಕ್ಕೆ ಹೋಗಿ ಬಂದು, ಬಸ್ರೂರು ಮೂರಕೈ-ಕೋಣಿ ರಸ್ತೆಯಲ್ಲಿ ಮನೆ ಕಡೆ ನಡೆದುಕೊಂಡು ಹೋಗುತ್ತಿದ್ದ ಗೋವಿಂದ ಪೂಜಾರಿಗೆ ಬಸ್ರೂರು ಮೂರಕೈ ಕಡೆಯಿಂದ-ಕೋಣಿ ಕಡೆಗೆ ಬರುತ್ತಿದ್ದ ಬೈಕ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಅಪಘಾತದಿಂದ ಬೈಕ್ ಸವಾರ ರೋಶನ ಪೂಜಾರಿ ಹಾಗೂ ಸಹಸವಾರ ಅಖೀಲೇಶ ಎಂಬವರು ಗಾಯಗೊಂಡಿದ್ದಾರೆ. ಈ ಬಗ್ಗೆ ಕುಂದಾಪುರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





