Kundapura | ಬೈಕಿಗೆ ಪಿಕಪ್ ವಾಹನ ಢಿಕ್ಕಿ: ಬೈಕ್ ಸವಾರ ಮೃತ್ಯು

ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆ
ಕುಂದಾಪುರ, ಜೂ.3: ಪಿಕಪ್ ವಾಹನವೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರಮುಖ ಸರ್ಕಲ್ನಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ.
ಮೃತರನ್ನು ಮಣೂರು ಜಟ್ಟಿಗೇಶ್ವರ ದೈವಸ್ಥಾನದ ಸಮೀಪದ ನಿವಾಸಿ, ಕೋಟಿ ಪೂಜಾರಿ ಎಂಬವರ ಪುತ್ರ ಗಣೇಶ್ ಎಂದು ಗುರುತಿಸಲಾಗಿದೆ.
ಮಂಗಳವಾರ ರಾತ್ರಿ 9:47ರ ವೇಳೆಗೆ ಈ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆ.66ರ ಪ್ರಮುಖ ಭಾಗದಲ್ಲಿ ಅಳವಡಿಸಿದ ಸಿಸಿಟಿವಿ ಕ್ಯಾಮರಾದಲ್ಲಿ ಅಪಘಾತದ ದೃಶ್ಯಾವಳಿ ಸೆರೆಯಾಗಿದೆ.
ಕೋಟ ಪೊಲೀಸರು ಸ್ಥಳಕ್ಕೆ ಧಾವಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ.
Next Story




