Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ | ಕೋಡಿಯಲ್ಲಿ ‘ಬ್ಯಾರೀಸ್...

ಕುಂದಾಪುರ | ಕೋಡಿಯಲ್ಲಿ ‘ಬ್ಯಾರೀಸ್ ಉದ್ಘಮ್’ ಕ್ಯಾಂಪಸ್ ಕನೆಕ್ಟ್-2025 ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ15 Dec 2025 9:19 PM IST
share
ಕುಂದಾಪುರ | ಕೋಡಿಯಲ್ಲಿ ‘ಬ್ಯಾರೀಸ್ ಉದ್ಘಮ್’ ಕ್ಯಾಂಪಸ್ ಕನೆಕ್ಟ್-2025 ಕಾರ್ಯಕ್ರಮ

ಕುಂದಾಪುರ, ಡಿ.15: ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ 120ನೇ ವರ್ಷದ ಸಂಭ್ರಮಾಚರಣೆ ಪ್ರಯುಕ್ತ ‘ಬ್ಯಾರೀಸ್ ಉದ್ಘಮ್’ ಕ್ಯಾಂಪಸ್ ಕನೆಕ್ಟ್- 2025 ಕಾರ್ಯಕ್ರಮ ಕೋಡಿ ಬ್ಯಾರೀಸ್ ನಾಲೆಡ್ಜ್ ಕ್ಯಾಂಪಸ್ ನಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಉಡುಪಿ ಡಾ.ಎ.ವಿ.ಬಾಳಿಗಾ ಸ್ಮಾರಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಮತ್ತು ಮನೋವೈದ್ಯ ಡಾ.ಪಿ.ವಿ. ಭಂಡಾರಿ ಮಾತನಾಡಿ, ಹೆತ್ತವರು ಮೊದಲು ಮಕ್ಕಳನ್ನು ಅರ್ಥ ಮಾಡಿ ಕೊಳ್ಳಬೇಕು, ಆನಂತರ ನಿರ್ಣಯವನ್ನು ತೆಗೆದುಕೊಳ್ಳಬೇಕು. ಮಕ್ಕಳನ್ನು ಬೇರೆಯವರೊಂದಿಗೆ ಹೋಲಿಸಬಾರದು ಎಂದು ತಿಳಿಸಿದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಮ್ಯಾನೇಜಿಂಗ್ ಟ್ರಸ್ಟಿ ಮತ್ತು ಸಂಚಾಲಕ ಸೈಯದ್‌ ಮುಹಮ್ಮದ್ ಬ್ಯಾರಿ ಮಾತನಾಡಿ, ಸತ್ಯ, ನ್ಯಾಯ, ಸಮಾನತೆ ಎದುರು ಯಾವುದೂ ಇಲ್ಲ. ನಂಬಿಕೆ ಅತೀ ಮುಖ್ಯ. ಹಣದ ಬಗ್ಗೆ ಯೋಚಿಸದೆ ಗುಣದ ಬಗ್ಗೆ ಯೋಚಿಸಬೇಕು. ಹೃದಯವನ್ನು ಯಾವಾಗಲೂ ಶುದ್ಧವಾಗಿಟ್ಟುಕೊಳ್ಳಬೇಕು. ಜೀವನದ ಪರೀಕ್ಷೆಯಲ್ಲಿ ಯಾವಾಗಲೂ ಪಾಸಾಗುವಂತೆ ನೋಡಿಕೊಳ್ಳಬೇಕು ಎಂದರು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಎಂ.ಅಬ್ದುಲ್ ರೆಹಮಾನ್ ಬ್ಯಾರಿ ಮಾತನಾಡಿ, ಸೋಲು ಗೆಲುವು ಮುಖ್ಯವಲ್ಲ, ಭಾಗವಹಿಸುವಿಕೆ ಅತೀ ಮುಖ್ಯವಾದದು. ಸ್ಪರ್ಧೆಗಳಲ್ಲಿ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳ ಭವಿಷ್ಯ ಉಜ್ವಲವಾಗಲಿ ಎಂದು ಹಾರೈಸಿದರು

’ಬ್ಯಾರೀಸ್ ಉದ್ಘಮ್’ ಕ್ಯಾಂಪಸ್ ಕನೆಕ್ಟ್ -2025 ಕಾರ್ಯಕ್ರಮ ಅಡಿಯಲ್ಲಿ ಹೈಸ್ಕೂಲ್ ಮತ್ತು ಪಿಯುಸಿ ವಿಭಾಗದ ವಿದ್ಯಾರ್ಥಿಗಳಿಗಾಗಿ ಟ್ಯಾಲೆಂಟ್ ಹಂಟ್, ಕ್ವಿಜ್, ಮಾಡೆಲ್ ಮೇಕಿಂಗ್ ಸ್ಪರ್ಧೆಗಳನ್ನು ಮತ್ತು ಶಿಕ್ಷಕರಿಗಾಗಿ ಎಜುಕ್ರಿಯೇಟ್-ಇನೊವೇಟಿವ್ ಟೀಚಿಂಗ್ ಮಾಡೆಲ್ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ವಿಜೇತ ವಿದ್ಯಾರ್ಥಿಗಳಿಗೆ ನಗದು ಬಹುಮಾನ ನೀಡುವುದರೊಂದಿಗೆ ಗುರುತಿಸಲಾಯಿತು. ವಿದ್ಯಾರ್ಥಿ ಗಳಿಗಾಗಿ ವೃತ್ತಿ ಮಾರ್ಗದರ್ಶನ ಗ್ಯಾಲರಿ ಪ್ರದರ್ಶನ ಹಮ್ಮಿಕೊಳ್ಳಲಾಯಿತು.

ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ವಿಶ್ವಸ್ಥ ಮಂಡಳಿಯ ಸದಸ್ಯರಾದ ಡಾ.ಆಸೀಫ್ ಬ್ಯಾರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಸಂಸ್ಥೆಯ ಹಿತೈಷಿ ಸಲೀಂ ಅತ್ತರ್ ಶುಭ ಹಾರೈಸಿದರು. ಕ್ವಿಝ್ ಮಾಸ್ಟರ್ ಆಗಿ ಕನ್ನಡ ಪಾಡ್ ಕಾಸ್ಟ್ ನಿರ್ಮಾಪಕಿ ಮತ್ತು ನಿರೂಪಕಿ ಸ್ಪೂರ್ತಿ ತೇಜ್ ಹಾಗೂ ವಿವಿಧ ಸ್ಪರ್ಧೆಗಳ ತೀರ್ಪುಗಾರರಾಗಿ ಸಂತೋಷ್ ಕುಮಾರ್ ಶೆಟ್ಟಿ, ಶಂಕರ್ ಉಪಾಧ್ಯಾಯ, ನಾಗರಾಜ್ ಯು. ಮತ್ತು ಉದಯ ಶೆಟ್ಟಿ ಭಾಗವಹಿಸಿದ್ದರು.

ಕಾರ್ಯಕ್ರಮದಲ್ಲಿ ಕೆರಿಯರ್ ಎಕ್ಸ್‌ಪ್ರೆಸ್‌ನ ಸಂಸ್ಥಾಪಕ ಶೋಯಿಬ್ ವಲಾಯಿ, ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ನಿರ್ದೇಶಕಿ ಅಶ್ವಿನಿ ಶೆಟ್ಟಿ, ಶಾಲಾಭಿವೃದ್ಧಿ ಸಮಿತಿ ಮತ್ತು ಸಲಹಾ ಮಂಡಳಿಯ ಅಧ್ಯಕ್ಷರು ಮತ್ತು ಸದಸ್ಯರು, ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರು ಮತ್ತು ಸದಸ್ಯರು, ಪುರಸಭೆ ಸದಸ್ಯರು, ಪೋಷಕರು, ವಿವಿಧ ವಿಭಾಗಗಳ ಮುಖ್ಯಸ್ಥರು, ಬೋಧಕ ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು

ಉದ್ಘಾಟನಾ ಕಾರ್ಯಕ್ರಮವನ್ನು ಬ್ಯಾರೀಸ್ ಸೀಸೈಡ್ ಪಬ್ಲಿಕ್ ಸ್ಕೂಲ್ ನ ಶಿಕ್ಷಕಿ ಅಸ್ರಾ ಮತ್ತು ಬಿಎಡ್ ಪ್ರಶಿಕ್ಷಣಾರ್ಥಿ ಸ್ವಾತಿ ನಿರೂಪಿಸಿದರು. ಬ್ಯಾರಿಸ್ ಬಿ.ಎಡ್ ಕಾಲೇಜಿನ ಪ್ರಾಂಶುಪಾಲೆ ಡಾ.ಫಿರ್ದೋಸ್ ಸ್ವಾಗತಿಸಿದರು. ಅಕಾಡೆಮಿಕ್ ಡೀನ್ ಡಾ.ಪೂರ್ಣಿಮಾ ಟಿ. ಗಣ್ಯರನ್ನು ಪರಿಚಯಿಸಿದರು. ಬಿ.ಎಡ್ ಉಪನ್ಯಾಸಕಿ ಶಾಝಿಯಾ ವಂದಿಸಿದರು.

ಸಮಾರೋಪ ಸಮಾರಂಭವನ್ನು ಬ್ಯಾರಿಸ್ ಪಿಯು ಕಾಲೇಜಿನ ಉಪನ್ಯಾಸಕಿ ಲಮಿಸ್ ನಿರೂಪಿಸಿದರು. ಬ್ಯಾರೀಸ್ ಬಿ.ಎಡ್ ಕಾಲೇಜಿನ ಪ್ರಶಿಕ್ಷಣಾರ್ಥಿ ಆನಂ ಸ್ವಾಗತಿಸಿದರು. ಶೀತಲ್ ಮೆಂಡೋನ್ಸಾ ವಂದಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲೆಯ ಮತ್ತು ಹೊರಜಿಲ್ಲೆಯ 31 ಸರಕಾರಿ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಭಾಗವಹಿಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X