Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Kundapura : ಅರಾಟೆ ಸೇತುವೆ ಬಳಿ ಕಾರು...

Kundapura : ಅರಾಟೆ ಸೇತುವೆ ಬಳಿ ಕಾರು ಸ್ಕೂಟರ್‌ ಢಿಕ್ಕಿ; ಸವಾರ ಮೃತ್ಯು

ವಾರ್ತಾಭಾರತಿವಾರ್ತಾಭಾರತಿ12 Oct 2026 2:41 PM IST
share
Kundapura : ಅರಾಟೆ ಸೇತುವೆ ಬಳಿ ಕಾರು ಸ್ಕೂಟರ್‌ ಢಿಕ್ಕಿ; ಸವಾರ ಮೃತ್ಯು

ಕುಂದಾಪುರ: ಕಾರು ಮತ್ತು ದ್ವಿಚಕ್ರ ವಾಹನ ಮುಖಾಮುಖಿ ಢಿಕ್ಕಿಯಾಗಿ ಸ್ಕೂಟರ್ ಸವಾರ ಮೃತಪಟ್ಟ ಘಟನೆ ತಾಲೂಕಿನ ಮುಳ್ಳಿಕಟ್ಟೆ ಸಮೀಪದ ಅರಾಟೆ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಸೋಮವಾರ ಸಂಭವಿಸಿದೆ.

ಕುಂದಾಪುರ ನಗರದ ಭಂಡಾರ್‌ಕಾರ್ಸ್ ರಸ್ತೆ ನಿವಾಸಿ ಅಜಿತ್ ಪೌಲ್ ಲೂಯಿಸ್ (55) ಮೃತ ವ್ಯಕ್ತಿ. ಗಂಭೀರ ಗಾಯಗೊಂಡಿದ್ದ ಅವರನ್ನು ಎಂ.ಎಚ್.ಐ ತುರ್ತು ಆಪತ್ಪಾಂಧವ ಆಂಬುಲೆನ್ಸ್‌ ಚಾಲಕ ಇಬ್ರಾಹಿಂ ಗಂಗೊಳ್ಳಿ ಹಾಗೂ ಅಬ್ರಾರ್ ಗಂಗೊಳ್ಳಿಯವರು ಕುಂದಾಪುರದ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದರು. ಆದರೆ ಅಜಿತ್ ಅವರು ಮೃತಪಟ್ಟಿದ್ದಾಗಿ ವೈದ್ಯರು ದೃಢಪಡಿಸಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ದೆಹಲಿಯ ಖಾಸಗಿ ಕಂಪೆನಿಯಲ್ಲಿ ಜನರಲ್ ಮ್ಯಾನೇಜರ್ ಆಗಿದ್ದು, ವರ್ಷದಲ್ಲಿ ನಾಲ್ಕೈದು ಬಾರಿ ಊರಿಗೆ ಬರುತ್ತಿದ್ದರು. ಈ ಬಾರಿ ತಾಯಿಯ ಅನಾರೋಗ್ಯದ ಹಿನ್ನೆಲೆ ಕಳೆದ 8-10 ದಿನಗಳ ಹಿಂದಷ್ಟೆ ಊರಿಗೆ ಆಗಮಿಸಿದ್ದರು . ಮುಳ್ಳಿಕಟ್ಟೆ ಸಮೀಪದ ಶಿಕ್ಷಣ ಸಂಸ್ಥೆಯಲ್ಲಿ ಓದುತ್ತಿದ್ದ ಪುತ್ರಿಯ ಶೈಕ್ಷಣಿಕ ಪ್ರಗತಿ ತಿಳಿಯಲು ಶಾಲೆಗೆ ಭೇಟಿ ನೀಡಲು ತೆರಳುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

ಕುಂದಾಪುರ ಸಂಚಾರ ಪೊಲೀಸ್‌ ಠಾಣೆಯ ಉಪನಿರೀಕ್ಷಕರಾದ ಅನೂಪ್ ನಾಯಕ್, ಸುಧಾ ಪ್ರಭು ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆಮೆಗತಿ ಕಾಮಗಾರಿಯಿಂದ ಅವಘಡಗಳು!

ಅರಾಟೆ ಸೇತುವೆಯ ದುರಸ್ತಿ ಕಾಮಗಾರಿ ಹಲವು ವರ್ಷಗಳಿಂದ ನಡೆಯುತ್ತಿದ್ದು, ಕಾಮಗಾರಿ ವಿಳಂಬದಿಂದಾಗಿ ಸೇತುವೆಯ ಒಂದು ಬದಿಯಲ್ಲಿ ಸಂಚಾರ ಸ್ಥಗಿತಗೊಳಿಸಿ, ಇನ್ನೊಂದು ಬದಿಯಲ್ಲಿ ದ್ವಿಮುಖ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದರಿಂದಾಗಿ ಈ ಮಾರ್ಗದಲ್ಲಿ ಸಂಚಾರ ವ್ಯವಸ್ಥೆ ಸವಾಲಾಗಿ ಪರಿಣಮಿಸಿದ್ದು, ಆಗಾಗ ಸಣ್ಣಪುಟ್ಟ ಅಪಘಾತಗಳು ಸಂಭವಿಸುತ್ತಿವೆ.

ವಾಹನ ಸವಾರರ ಸುರಕ್ಷತೆಗಾಗಿ ಇಲಾಖೆಯು ರಿಫ್ಲೆಕ್ಟರ್ ಕೋನ್‌ಗಳನ್ನು ಅಳವಡಿಸಿದ್ದರೂ, ರಾತ್ರಿ ವೇಳೆ ಸಂಚರಿಸುವ ಭಾರೀ ವಾಹನಗಳಿಂದ ಅವು ಹಾನಿಗೊಳಗಾಗಿವೆ ಎನ್ನಲಾಗಿದೆ. ವಾಹನ ಸವಾರರು ಸಂಚಾರ ನಿಯಮಗಳನ್ನು ಪಾಲಿಸದಿರುವುದು, ಅಜಾಗರೂಕತೆ ಹಾಗೂ ಅತಿವೇಗದ ಚಾಲನೆಯೂ ಅಪಘಾತಗಳಿಗೆ ಕಾರಣವಾಗುತ್ತಿವೆ. ಈ ಮಾರ್ಗದಲ್ಲಿ ಸಂಭವಿಸುವ ಅಪಘಾತಗಳಿಂದ ಸಾವು-ನೋವುಗಳೂ ವರದಿಯಾಗಿವೆ.

ಅರಾಟೆ ಸೇತುವೆಯ ದುರಸ್ತಿ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಿ, ರಾಷ್ಟ್ರೀಯ ಹೆದ್ದಾರಿಯ ಎರಡೂ ಬದಿಗಳಲ್ಲಿ ಎಂದಿನಂತೆ ಏಕಮುಖ ಸಂಚಾರ ವ್ಯವಸ್ಥೆ ಮರುಸ್ಥಾಪಿಸಬೇಕೆಂಬ ಒತ್ತಾಯ ಸಾರ್ವಜನಿಕರಿಂದ ಕೇಳಿಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X