Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. Kundapura | ಕೊಲ್ಲೂರು ಠಾಣೆ...

Kundapura | ಕೊಲ್ಲೂರು ಠಾಣೆ ವ್ಯಾಪ್ತಿಯಲ್ಲಿ ಮನೆ ಕಳವು ಪ್ರಕರಣ : ಆರೋಪಿಗೆ ಶಿಕ್ಷೆ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ21 Nov 2025 9:35 PM IST
share
Kundapura | ಕೊಲ್ಲೂರು ಠಾಣೆ ವ್ಯಾಪ್ತಿಯಲ್ಲಿ ಮನೆ ಕಳವು ಪ್ರಕರಣ : ಆರೋಪಿಗೆ ಶಿಕ್ಷೆ ಪ್ರಕಟ

ಕುಂದಾಪುರ:, ನ.21: ಆರು ತಿಂಗಳ ಹಿಂದೆ ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಮನೆ ಕಳವು ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಮೇಲಿನ ದೋಷಾರೋಪಣೆಗಳು ಸಾಬೀತಾಗಿದ್ದು, ಆತ ಅಪರಾಧಿಯೆಂದು ಕುಂದಾಪುರದ 2ನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುಳಾ ಬಿ. ತೀರ್ಪು ಪ್ರಕಟಿಸಿದ್ದಾರೆ.

ಪ್ರಕರಣದಲ್ಲಿ ಕಾರ್ಕಳ ಮೂಲದ ಉಮಾನಾಥ ಪ್ರಭು (59) ಅಪರಾಧಿಯಾಗಿದ್ದು, ಪ್ರಸ್ತುತ ಆತ ನ್ಯಾಯಾಂಗ ಬಂಧನದಲ್ಲಿದ್ದಾನೆ. ಈ ಕಳವು ಪ್ರಕರಣದಲ್ಲಿ 1 ವರ್ಷ 6 ತಿಂಗಳು ಕಠಿಣ ಕಾರಾಗೃಹ ಶಿಕ್ಷೆ ಹಾಗೂ ದಂಡ ವಿಧಿಸಿ ಆದೇಶಿಸಲಾಗಿದೆ.

ಪ್ರಕರಣದ ವಿವರ :

2025ರ ಮೇ ತಿಂಗಳಿನಲ್ಲಿ ಕೊಲ್ಲೂರು ಠಾಣಾ ವ್ಯಾಪ್ತಿಯ ಇಡೂರು-ಕುಂಜ್ಞಾಡಿ ಗ್ರಾಮದ ಜನತಾ ಕಾಲನಿಯ ಮನೆಯೊಂದರಲ್ಲಿ ರಾತ್ರಿ ಯಾರೂ ಇಲ್ಲದ ವೇಳೆ ಎರಡು ಚಿನ್ನದ ಬಳೆಗಳ ಕಳ್ಳತನ ನಡೆದಿದ್ದು, ಬೆಳಿಗ್ಗೆ ಘಟನೆ ಬೆಳಕಿಗೆ ಬಂದು ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಜಾಡು ಹಿಡಿದ ಪೊಲೀಸರು ಜೂ.17ರಂದು ಅಜೆಕಾರು ಎಂಬಲ್ಲಿ ಆರೋಪಿಯನ್ನು ಬಂಧಿಸಿದ್ದರು.

ಅಭಿಯೋಜನೆ ಪರವಾಗಿ ಸಹಾಯಕ ಸರಕಾರಿ ಅಭಿಯೋಜಕ ಉದಯ್ ಕುಮಾರ್ ವಾದಿಸಿದ್ದರು. ಆರೋಪಿಯು ರೂಢಿಗತವಾಗಿ ಕಳ್ಳತನ ಪ್ರಕರಣದಲ್ಲಿ ತೊಡಗಿಸಿಕೊಂಡಿದ್ದು, ಆತನಿಗೆ ಬಿ.ಎನ್.ಎಸ್ ಕಾಯ್ದೆಯಡಿ ಗರಿಷ್ಠ ಶಿಕ್ಷೆ ವಿಧಿಸಬೇಕೆಂದು ಸಹಾಯಕ ಸರಕಾರಿ ಅಭಿಯೋಜಕರು ಮನವಿ ಮಾಡಿದ್ದರು.

ಪ್ರಕರಣ ಸಂಬಂಧ ನ್ಯಾಯಾಲಯದಲ್ಲಿ ಒಟ್ಟು 20 ಸಾಕ್ಷಿಗಳ ವಿಚಾರಣೆ ನಡೆಸಲಾಗಿತ್ತು. ಕಾನೂನು ಸುವ್ಯವಸ್ಥೆ ಪಿಎಸ್ಐ ವಿನಯ್ ಎಂ. ಕೊರ್ಲಹಳ್ಳಿ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.


ಬಿ.ಎನ್.ಎಸ್. ಕಾಯ್ದೆಯಡಿ ಪ್ರಕರಣ ತನಿಖೆ

ಕಳೆದ ವರ್ಷ ಜಾರಿಗೆ ಬಂದ ‘ಭಾರತೀಯ ನ್ಯಾಯ ಸಂಹಿತೆ’ (ಬಿಎನ್ಎಸ್) ಕಾಯ್ದೆಯಡಿ ಈ ಪ್ರಕರಣ ದಾಖಲಾಗಿದ್ದು, ಆರೋಪಿಗೆ ಜಾಮೀನು ಸಿಗದ ಹಿನ್ನೆಲೆಯಲ್ಲಿ ಆತ ನ್ಯಾಯಾಂಗ ಬಂಧನದಲ್ಲಿಯೇ ಇದ್ದ. ಹೀಗಾಗಿ ನ್ಯಾಯಾಲಯದಲ್ಲಿ ಶೀಘ್ರ ವಿಚಾರಣೆ ನಡೆಸಿದ್ದು, ಸಾಕ್ಷ್ಯಗಳನ್ನು ಸರಿಯಾದ ಸಮಯಕ್ಕೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ನ್ಯಾಯಾಲಯದಲ್ಲಿ 2025ರ ಆಗಸ್ಟ್ 1ರಿಂದ ಸಾಕ್ಷ್ಯಗಳ ವಿಚಾರಣೆ ನಡೆಸಲಾಗಿದ್ದು, ಸುಮಾರು ಎರಡೂವರೆ ತಿಂಗಳಿನಲ್ಲಿ ಪ್ರಕ್ರಿಯೆ ಮುಗಿದಿತ್ತು. ಕಳ್ಳತನ ಪ್ರಕರಣವೊಂದರಲ್ಲಿ ಅತೀ ಶೀಘ್ರವಾಗಿ ಬಿ.ಎನ್.ಎಸ್. ಕಾಯ್ದೆಯಡಿ ವಿಚಾರಣೆ ಮುಗಿಸಿ ಆರೋಪಿಗೆ ಶಿಕ್ಷೆ ವಿಧಿಸಿರುವುದು ವಿಶೇಷವಾಗಿದೆ. ಹೊಸ ಕಾಯ್ದೆಯಲ್ಲಿ ತಾಂತ್ರಿಕ ಸಾಕ್ಷಿಗಳ ವಿಚಾರಣೆಗೆ ಹೆಚ್ಚಿನ ಮಹತ್ವವಿರುವುದು ಇಲ್ಲಿ ಗಮನಾರ್ಹ.


share
ವಾರ್ತಾಭಾರತಿ
ವಾರ್ತಾಭಾರತಿ
Next Story
X