Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ ಸಂತೆ ಮಾರುಕಟ್ಟೆ: ಜನರಿಗೆ...

ಕುಂದಾಪುರ ಸಂತೆ ಮಾರುಕಟ್ಟೆ: ಜನರಿಗೆ ಕೊಳಚೆ ನೀರಿನ ಸ್ನಾನ !

ವಾರ್ತಾಭಾರತಿವಾರ್ತಾಭಾರತಿ27 July 2026 8:37 PM IST
share
ಕುಂದಾಪುರ ಸಂತೆ ಮಾರುಕಟ್ಟೆ: ಜನರಿಗೆ ಕೊಳಚೆ ನೀರಿನ ಸ್ನಾನ !

ಕುಂದಾಪುರ, ಜು.27: ಪ್ರತಿ ಶನಿವಾರ ನಡೆಯುವ ಕುಂದಾಪುರದ ಸಂತೆ ಜಿಲ್ಲೆಯ ಅತಿ ದೊಡ್ಡ ಸಂತೆಗಳಲ್ಲಿ ಒಂದಾಗಿದೆ. ಮಳೆಗಾಲದ ಸಂದರ್ಭದಲ್ಲಿ ಕುಂದಾಪುರದ ವಾರದ ಸಂತೆ ಮಾರುಕಟ್ಟೆಗೆ ಬರುವ ವ್ಯಾಪಾರಸ್ಥರು ಮತ್ತು ಖರೀದಿಗೆ ಬರುವ ಗ್ರಾಹಕರಿಗೆ ಕೊಳಚೆ ನೀರಿನ ಸ್ನಾನ ಮಾತ್ರ ತಪ್ಪಿದ್ದಲ್ಲ.

ಸಂತೆ ಮಾರುಕಟ್ಟೆ ಮುಂಭಾಗದ ಚರಂಡಿಯಲ್ಲಿ ಕೊಳಚೆ ನೀರು ಹರಿಯುತ್ತಿದೆ. ಇದು ಚರಂಡಿಯನ್ನು ಮೀರಿ ಕೆಲವೊಮ್ಮೆ ರಸ್ತೆ ಮೇಲೆ ಹರಿಯುತ್ತಿರುತ್ತದೆ. ಇದರಿಂದ ಸಂತೆಗೆ ಪ್ರತೀ ವಾರ ಬರುವ ವರ್ತಕರು ಹಾಗೂ ಗ್ರಾಹಕರಿಗೆ ಕೊಳಚೆ ನೀರು ಹಾಗೂ ಮಳೆ ನೀರಿನಿಂದ ಬಾರೀ ಸಮಸ್ಯೆಯಾಗುತ್ತಿದೆ.

ಪ್ರತೀ ಶನಿವಾರ ಕುಂದಾಪುರದ ಎಪಿಎಂಸಿ ಪ್ರಾಂಗಣದಲ್ಲಿ ನಡೆಯುವ ವಾರದ ಸಂತೆಯು ಅವಿಭಜಿತ ಕುಂದಾಪುರ ತಾಲೂಕಿನಲ್ಲೇ ನಡೆಯುವ ದೊಡ್ಡ ಸಂತೆಯಲ್ಲೊಂದಾಗಿದ್ದು ಇಲ್ಲಿ ಲಕ್ಷಾಂತರ ರೂ. ವ್ಯವಹಾರ ನಡೆಯುತ್ತದೆ. ಆದರೆ ಇತ್ತೀಚಿನ ದಿನಗಳಲ್ಲಿ ಇಲ್ಲಿ ಕಂಡುಬರುತ್ತಿರುವ ನಿರ್ವಹಣೆ ಸಮಸ್ಯೆಯಿಂದ ಇಲ್ಲಿಗೆ ಬರುವ ಜನರು, ಬೇರೆ ಬೇರೆ ಊರುಗಳಿಂದ ವ್ಯಾಪಾರಕ್ಕಾಗಿ ಬರುವ ವರ್ತಕರು ಕೂಡ ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ.

ಕೊಳಚೆ ಮೋರಿಯೇ ಸ್ವಾಗತ: ಸಂತೆಗೆ ಪ್ರವೇಶಿಸುವ ದ್ವಾರ ಇರುವ ಹೆದ್ದಾರಿ ಬಳಿಯ ಸರ್ವಿಸ್ ರಸ್ತೆಯ ಚರಂಡಿ ಯಲ್ಲಿ ಭಾರೀ ಪ್ರಮಾಣದ ಕೊಳಚೆ ನೀರು ತುಂಬಿಕೊಂಡಿದ್ದು, ಇದರಿಂದ ಜನರಿಗೆ ತೊಂದರೆಯಾಗುತ್ತಿದೆ. ಆಗಾಗ ಇದರ ನೀರು ಸಿಡಿದು ಜನರಿಗೆ ಕೊಳಚೆ ನೀರಿನ ಸ್ನಾನವೂ ನಡೆಯುತ್ತದೆ.

ಲಕ್ಷಾಂತರ ರೂ. ವಹಿವಾಟು ಇರುವ ಕುಂದಾಪುರದ ವಾರದ ಸಂತೆಗೆ ಸುಮಾರು 60-70 ವರ್ಷಗಲಸಿಗೂ ಹೆಚ್ಚು ಕಾಲದ ಇತಿಹಾಸವಿದೆ. ಉಡುಪಿ, ಮಂಗಳೂರು ಮಾತ್ರವಲ್ಲದೆ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಾವಣಗೆರೆ, ಬಳ್ಳಾರಿ ಸಹಿತ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ನೂರಾರು ಮಂದಿ ವ್ಯಾಪಾರಿಗಳು ಇಲ್ಲಿಗೆ ದಿನಸಿ, ಹಣ್ಣು, ತರಕಾರಿ, ಇನ್ನಿತರ ವಸ್ತುಗಳನ್ನು ಮಾರಾಟ ಮಾಡಲು ಪ್ರತೀ ವಾರ ಬರುತ್ತಾರೆ.

ನಗರ ಭಾಗದ ಜನರು ಮಾತ್ರವಲ್ಲದೆ, ಕುಂದಾಪುರ, ಬೈಂದೂರು ತಾಲೂಕಿನ ಗ್ರಾಮೀಣ ಭಾಗದ ಸಾವಿರಾರು ಜನರು ವಾರಕ್ಕೊಮ್ಮೆ ಅಗತ್ಯ ವಸ್ತುಗಳ ಖರೀದಿಗಾಗಿ ಸಂತೆಗೆ ಬರುತ್ತಾರೆ. ಗ್ರಾಮೀಣ ಭಾಗದ ಸೊಪ್ಪು, ತರಕಾರಿ, ನಾಟಿಕೋಳಿ, ಮೊಟ್ಟೆಗಳು, ಒಣಮೀನು, ಗೆಣಸು, ಮೊದಲಾದವು ಇಲ್ಲಿ ಸ್ಪಲ್ಪ ಅಗ್ಗದಲ್ಲಿ ದೊರೆಯುತ್ತವೆ.

ಹೆದ್ದಾರಿ ಇಲಾಖೆಗೆ ಮನವಿ: ಸಂತೆ ಮಾರುಕಟ್ಟೆಯ ಮುಂಭಾಗದ ಚರಂಡಿಯಲ್ಲಿ ಕೊಳಚೆ ನೀರು ಹರಿಯುವ ಸಂಬಂಧ ನಾವು ಅನೇಕ ಬಾರಿ ಪುರಸಭೆಯಿಂದ ಹೆದ್ದಾರಿ ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿದ್ದೇವೆ. ಈ ಹೆದ್ದಾರಿ ಕಾಮಗಾರಿ ನಿರ್ವಹಿಸುವ ಐಆರ್‌ಬಿಯವರ ಗಮನಕ್ಕೂ ತರಲಾಗಿದೆ. ಆದರೆ ಇದುವರೆಗೆ ಇದರಿಂದ ಯಾವುದೇ ಪ್ರಯೋಜನವಾಗಿಲ್ಲ ಎಂದು ಮಾಜಿ ಪುರಸಭಾ ಸದಸ್ಯ ಶ್ರೀಧರ್ ಶೇರೆಗಾರ್ ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X