Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕುಂದಾಪುರ | ಗುಲ್ವಾಡಿ ಮಸೀದಿಯ ಆಸ್ತಿ...

ಕುಂದಾಪುರ | ಗುಲ್ವಾಡಿ ಮಸೀದಿಯ ಆಸ್ತಿ ವಕ್ಫ್‌ಗೆ ಹಸ್ತಾಂತರಿಸಿರುವುದಕ್ಕೆ ವಿರೋಧ: ಜಮಾತಿನವರಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ30 Oct 2026 10:08 PM IST
share
ಕುಂದಾಪುರ | ಗುಲ್ವಾಡಿ ಮಸೀದಿಯ ಆಸ್ತಿ ವಕ್ಫ್‌ಗೆ ಹಸ್ತಾಂತರಿಸಿರುವುದಕ್ಕೆ ವಿರೋಧ: ಜಮಾತಿನವರಿಂದ ಪ್ರತಿಭಟನೆ

ಕುಂದಾಪುರ: ಗುಲ್ವಾಡಿ ಮೆಹರಾಜ್ ಜುಮಾ ಮಸೀದಿಗೆ ಸೇರಿದ 2.68 ಎಕರೆ ಜಾಗವನ್ನು ಅಕ್ರಮ ದಾಖಲೆಗಳ ಮೂಲಕ ಕಬಳಿಸಿ ಜಮಾತಿನವರ ಗಮನಕ್ಕೆ ತಾರದೇ ವಕ್ಫ್ ಮಂಡಳಿಗೆ ನೀಡಿದ್ದಾರೆಂದು ಆರೋಪಿಸಿ ಜಮಾತಿನವರು ಶುಕ್ರವಾರ ಮಸೀದಿ ಬಳಿ ಪ್ರತಿಭಟನೆ ನಡೆಸಿದರು.

ಎರಡು ವರ್ಷಗಳ ಹಿಂದೆ ಕೇವಲ 11 ಜನರ ಆಡಳಿತ ಸಮಿತಿ ಸಭೆ ನಡೆಸಿ, 240 ಮನೆಗಳ ಜಮಾತಿಗೆ ತಿಳಿಸದೆ, ಜಾಗವನ್ನು ಮಹಿಳಾ ಕಾಲೇಜಿಗೆ ಕೊಡುವ ನಿರ್ಣಯ ಮಾಡಲಾಗಿದೆ ಎಂದು ಪ್ರತಿಭಟನಕಾರರು ಆರೋಪಿಸಿದ್ದಾರೆ.

ಈ ಜಾಗ ಕಾಲೇಜು ನಿರ್ಮಿಸಲು ಸೂಕ್ತವೇ ಎಂದು ಪರಿಶೀಲಿಸಲು ಉಡುಪಿ ಜಿಲ್ಲಾ ಅಲ್ಪಸಂಖ್ಯಾತ ಇಲಾಖೆಯು ನೇಮಿಸಿದ್ದ ಇಬ್ಬರು ಅಧಿಕಾರಿಗಳು ಸ್ಥಳಕ್ಕೆ ಬಂದು ಈ ಜಾಗ, ಜಿಲ್ಲಾ ಕೇಂದ್ರ ಹಾಗೂ ತಾಲೂಕಿನಿಂದ ತುಂಬಾ ದೂರ ಇದ್ದು ಸರಿಯಾದ ರಸ್ತೆಯೇ ಇಲ್ಲ ಎಂದು ಲಿಖಿತ ವರದಿ ನೀಡಿದ್ದು ಆ ವರದಿಯನ್ನು ಜಿಲ್ಲಾ ವಕ್ಫ್ ಮಂಡಳಿ ಈವರೆಗೆ ನೀಡದೆ ಮುಚ್ಚಿಟ್ಟಿದೆ ಎಂದು ಹೋರಾಟದ ಪ್ರಮುಖರಾದ ಯಾಕೂಬ್ ಖಾದರ್ ಗುಲ್ವಾಡಿ ಆರೋಪಿಸಿದ್ದಾರೆ.

ಬೆವರಿನ ಹಣ ಕೊಟ್ಟು ಈ ಜಾಗ ಖರೀದಿ ಮಾಡಿದ್ದು ವರ್ಷಕ್ಕೆ 25-30 ಲಕ್ಷ ರೂ. ಜಮಾತ್‌ನಿಂದ ಮಸೀದಿಗೆ ಖರ್ಚು ಮಾಡುತ್ತೇವೆ. ಯಾರ ಗಮನಕ್ಕೂ ತಾರದೇ ಜಾಗ ಹಸ್ತಾಂತರಿಸಿದ್ದು ಸರಿಯಲ್ಲ. ನಾವು ವಿದ್ಯಾಲಯ ನಿರ್ಮಾಣದ ವಿರೋಧಿಗಳಲ್ಲ ಎಂದು ಯಾಕೂಬ್ ಸ್ಪಷ್ಟಪಡಿಸಿದರು.

ಜಮಾತ್ ಮಾಜಿ ಕಾರ್ಯದರ್ಶಿ ಜಿ. ಮಹಮ್ಮದ್ ಮಾತನಾಡಿ, ಕನ್ವರ್ಷನ್, 9 &11 ಇಲ್ಲದೆ ಗುಲ್ವಾಡಿ ಗ್ರಾಮ ಪಂಚಾಯಿತಿಯಿಂದ ನಿರಪೇಕ್ಷಣ ಪತ್ರ ಪಡೆದು, ಪೊಲೀಸ್ ರಕ್ಷಣೆಯಲ್ಲಿ ಕೆಲವು ದಿನಗಳಿಂದ ಕೆಲಸ ಮಾಡಲಾಗು ತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಪೊಲೀಸ್ ಮಹಾನಿರ್ದೇಶಕರು, ಸಚಿವ ಯು.ಟಿ. ಖಾದರ್ ಮತ್ತು ಲೋಕಾಯುಕ್ತರಿಗೆ ದೂರು ನೀಡಲಿದ್ದು ಸಂಬಂದಪಟ್ಟವರ ಮೇಲೆ ಕಾನೂನು ಕ್ರಮವಾಗಬೇಕು. ಶೀಘ್ರ ಕಾಮಗಾರಿ ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಮಾತ್ ಕಮಿಟಿ ಸದಸ್ಯ ಜಿ.ಇಸ್ಮಾಯಿಲ್, ಅಲಿ ಅಕ್ಬರ್, ಮಾಜಿ ಅಧ್ಯಕ್ಷ ಹಂಜಾ, ಸ್ಥಳೀಯ ಹೋರಾಟಗಾರರಾದ ರಫೀಕ್, ಆರೀಫ್, ಉಸ್ತಾದ್ ಮಹಮ್ಮದ್ ಹನೀಫ್, ಅಮೀರ್ ಹಂಝಾ ಮಾತನಾಡಿದರು. ಜಮಾತ್‌ನ ಸುಲೈಮಾನ್ ತೋಟ, ಇಕ್ಬಾಲ್, ಅಲ್ ಫಾಝ್, ಕಲಂದರ್ ಉಸ್ಮಾನ್, ಅಮಾನುಲ್ಲಾ, ಸಮದ್, ಪಕೀರ್ ಸಲಾಂ, ಜಿ.ಎಂ.ಮುನೀರ್ ಹಾಗೂ ಜಮಾತಿನವರು ಉಪಸ್ಥಿತರಿದ್ದರು.




Tags

KundapuraOppositiontransferGulvadi MosquepropertyWaqf
share
ವಾರ್ತಾಭಾರತಿ
ವಾರ್ತಾಭಾರತಿ
Next Story
X