ಕುಂದಾಪುರ | ಆನೆಗುಡ್ಡೆ ಬಳಿ ಟ್ಯಾಂಕರ್ - ಬಸ್ ಢಿಕ್ಕಿ: ಹಲವು ಮಂದಿಗೆ ಗಾಯ

ಕುಂದಾಪುರ: ಉಡುಪಿ ಕಡೆಯಿಂದ ಕುಂದಾಪುರದತ್ತ ಸಾಗುತ್ತಿದ್ದ ಪ್ರವಾಸಿ ಬಸ್ಸೊಂದು ಅಪಘಾತಕ್ಕೀಡಾಗಿ ಹಲವು ಮಂದಿ ಗಾಯಗೊಂಡ ಘಟನೆ ಮಂಗಳವಾರ ಮಧ್ಯಾಹ್ನ ಆನೆಗುಡ್ಡೆ ಗೋಪುರದ ಬಳಿ ಸಂಭವಿಸಿದೆ.
ದೇವಸ್ಥಾನದ ಕಡೆಯಿಂದ ತ್ರಾಸಿಯತ್ತ ತೆರಳಲು ಬಸ್ ತಿರುವು ಪಡೆಯುತ್ತಿದ್ದ ಸಂದರ್ಭ ಮಂಗಳೂರಿನಿಂದ ಕುಂದಾಪುರದ ಕಡೆಗೆ ವೇಗವಾಗಿ ಬರುತ್ತಿದ್ದ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿ ಬಸ್ ನಿಯಂತ್ರಣ ತಪ್ಪಿ ರಸ್ತೆ ವಿಭಜಕಕ್ಕೆ ಅಪ್ಪಳಿಸಿ ನಿಂತಿದೆ ಎಂದು ತಿಳಿದುಬಂದಿದೆ.
ಅಪಘಾತದಿಂದ ಬಸ್ಸಿನ ಮುಂಭಾಗ ಜಖಂಗೊಂಡಿದ್ದು, ಬಸ್ಸಿನಲ್ಲಿದ್ದ ಹಲವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಘಟನಾ ಸ್ಥಳಕ್ಕೆ ಕುಂದಾಪುರ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story






