Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜನರಿಗೆ ಏನೆಲ್ಲ ಮಾಡಬೇಡಿ ಅನ್ನೋದಾಯ್ತು,...

ಜನರಿಗೆ ಏನೆಲ್ಲ ಮಾಡಬೇಡಿ ಅನ್ನೋದಾಯ್ತು, ಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ ಹೇಳಲಿ: ಸಚಿವೆ ಹೆಬ್ಬಾಳ್ಕರ್

ವಾರ್ತಾಭಾರತಿವಾರ್ತಾಭಾರತಿ16 May 2026 12:48 PM IST
share
ಜನರಿಗೆ ಏನೆಲ್ಲ ಮಾಡಬೇಡಿ ಅನ್ನೋದಾಯ್ತು, ಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ಏನು ಮಾಡಿದ್ದಾರೆ ಹೇಳಲಿ: ಸಚಿವೆ ಹೆಬ್ಬಾಳ್ಕರ್

ಉಡುಪಿ: ಜನರಿಗೆ ಹೇಳೋದಾಯ್ತು, ಇವರೇನು ಮಾಡಿದ್ದಾರೆ ಅದನ್ನು ಮೊದಲು ಹೇಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ.

ಉಡುಪಿಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವೆ, ಪ್ರಧಾನಿ ಮೋದಿ ಗಂಟೆ ಬಾರಿಸಬೇಕು ಅಂದ್ರೆ ನಾವು ಗಂಟೆ ಬಾರಿಸುತ್ತೇವೆ. ಚಪ್ಪಾಳೆ ಹೊಡೀರಿ ಅಂದ್ರೆ ಹೊಡೀತೇವೆ. ಪೆಟ್ರೋಲ್ ಡೀಸೆಲ್ ಜಾಸ್ತಿ ಬಳಸಬೇಡಿ ಅಂದ್ರೆ ನಾವು ಪಾಲಿಸುತ್ತೇವೆ. ಬಂಗಾರ ಖರೀದಿಸಬೇಡಿ ಎಂದರೆ ಬಿಡುತ್ತೇವೆ. ದೇಶಕ್ಕಾಗಿ ಇತಿ ಮಿತಿಯನ್ನು ಪಾಲಿಸೋಣ. ಆದರೆ ಇಂತಹ ಪರಿಸ್ಥಿತಿ ಆಗೋದಕ್ಕೆ ಕಾರಣ ಯಾರು? ಅದು ಮಾಡಿ, ಇದು ಮಾಡಿ ಅನ್ನೋದೇ ಆಯ್ತು. ಆದರೆ ಇವರೇನು ಮಾಡ್ತಿದಾರೆ, ಏನೇನು ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುತ್ತಿದ್ದಾರೆ ಅನ್ನೋದು ಬೇಕಲ್ವಾ ಎಂದು ಪ್ರಶ್ನಿಸಿದರು.

ಈಗ ಮೋದಿ ಬಂಗಾರ ಖರೀದಿ ಮಾಡಬೇಡಿ ಎನ್ನುತ್ತಿದ್ದಾರೆ. ಏನೇನೋ ಹೇಳುತ್ತ ಬಂದಿದ್ದಾರೆ. ಆದರೆ ಅಮೆರಿಕ ಯಾವ ರೀತಿ ನಮ್ಮ ಪ್ರಧಾನ ಮಂತ್ರಿಯನ್ನು ಕಂಟ್ರೋಲ್ ಮಾಡುತ್ತಿದೆ ಅಂತ ಮಾಧ್ಯಮದಲ್ಲೇ ನೋಡುತ್ತಿದ್ದೇವೆ. ಭಾರತದ ಬಗ್ಗೆ ಟ್ರಂಪ್ ಏನು ಹೇಳುತ್ತಿದ್ದಾರೆ ಗೊತ್ತಲ್ಲ.. ಎಂದು ವ್ಯಂಗ್ಯವಾಡಿದರು.

ಚುನಾವಣೆ ಮುಗಿದ ಕೂಡಲೇ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಮಾಡಿದ್ದಾರೆ. ಇದು ಕಂಪ್ಲೀಟ್ ರಾಜಕಾರಣ. ಈಗೇನೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿಲ್ಲ. ಡಾ.ಮನಮೋಹನ್ ಸಿಂಗ್ ಸರಕಾರ ಇದ್ದಾಗ ಕಚ್ಚಾ ತೈಲ ಬೆಲೆ ಎಷ್ಟು ಏರಿತ್ತು ಗೊತ್ತಿದೆ. ಆದರೂ ಜನರಿಗೆ ಬರೆ ಹಾಕುವ ಕೆಲಸ ಮಾಡಿಲ್ಲ. ಈಗ ದಿಢೀರ್ ಆಗಿ 3 ರೂಪಾಯಿ ಬೆಲೆ ಏರಿಸಿ ಜನರ ಮೇಲೆ ಹೊರೆ ಹಾಕಿದ್ದಾರೆ ಎಂದು ಹೇಳಿದರು.

ಹಿಜಾಬ್ ವಿವಾದ ಕುರಿತ ಪ್ರಶ್ನೆಗೆ, "ಶಿಕ್ಷಣದಲ್ಲಿ ರಾಜಕಾರಣ ಯಾವತ್ತೂ ಮಾಡಬಾರದು. ಮಕ್ಕಳು ಮುಗ್ಧರಿದ್ದಾರೆ, ಪಾಲಕರು ಕಲಿಯುವುದಕ್ಕೆಂದು ಶಾಲೆಗೆ ಕಳಿಸುತ್ತಾರೆ. ಈ ವಿಚಾರದಲ್ಲಿ ಹೆಚ್ಚು ಚರ್ಚೆ ಮಾಡದೆ ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಒಳ್ಳೆಯ ವಾತಾವರಣ ಸೃಷ್ಟಿ ಮಾಡಬೇಕೆಂದು ಮಾತ್ರ ಹೇಳುತ್ತೇನೆ. ಅವರ ಭವಿಷ್ಯದ ಜೊತೆ ಚೆಲ್ಲಾಟ ಆಡಬಾರದು. ಹಿಜಾಬ್ ಅಥವಾ ಇನ್ನಾವುದೇ ವಿಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ಮಕ್ಕಳ ಭವಿಷ್ಯ ತಲೆಯಲ್ಲಿಟ್ಡು ರಾಜಕಾರಣ ಮಾಡಬೇಕು ಅಂತ ಹೇಳುತ್ತೇನೆ ಎಂದು ಪ್ರತಿಕ್ರಿಯಿಸಿದರು.

ಮುಖ್ಯಮಂತ್ರಿ ಬದಲಾವಣೆ, ಸಚಿವ ಸಂಪುಟದ ವಿಸ್ತರಣೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದು ಎಲ್ಲವೂ ಪಕ್ಷದ ಹೈಕಮಾಂಡ್ ತೀರ್ಮಾನ. ನಾವು ಪಕ್ಷದ ಶಿಸ್ತಿನ ಸಿಪಾಯಿಗಳು. ನಾವೇನೂ ಪ್ರತಿಕ್ರಿಯೆ ನೀಡಲ್ಲ ಎಂದರು.

ಬಾಗಲಕೋಟೆಯಲ್ಲಿ ಅಂಗನವಾಡಿಯಿಂದ ಹಣ ಕಲೆಕ್ಷನ್ ಮಾಡಲಾಗಿದೆ ಎಂಬ ಆರೋಪದ ಪ್ರಶ್ನೆಗೆ, ಯಾವುದೇ ಅಂಗನವಾಡಿಯಿಂದ ಹಣ ತಗೊಂಡಿದ್ದಿಲ್ಲ. ಯಾರೇ ಆಗಲಿ ಹಾಗೇನಾದರೂ ಹಣ ಕಲೆಕ್ಷನ್ ಮಾಡಿದ್ದಲ್ಲಿ ಅವರ ಮೇಲೆ ಮುಲಾಜಿಲ್ಲದೆ ಕ್ರಮ ಜರುಗಿಸ್ತೀನಿ. ತನಿಖೆಯನ್ನು ಕೈಗೊಳ್ತೀನಿ ಎಂದು ಹೇಳಿದರು.

Tags

Laxmi Hebbalkar
share
ವಾರ್ತಾಭಾರತಿ
ವಾರ್ತಾಭಾರತಿ
Next Story
X