ಪ್ರಧಾನಿ ಮೋದಿ ಸಾಧನೆಗಳ ‘ಪ್ರದರ್ಶಿನಿ’ಗೆ ಚಾಲನೆ

ಉಡುಪಿ, ಸೆ.20: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ’ಸೇವಾ ಪಾಕ್ಷಿಕ ಅಭಿಯಾನ’ದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿಯವರ 9 ವರ್ಷಗಳ ಸಾಧನೆಗಳ ಪ್ರದರ್ಶಿನಿಗೆ ಇಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಚಾಲನೆ ನೀಡಲಾಯಿತು.
ಪ್ರದರ್ಶಿನಿಯನ್ನು ಉದ್ಘಾಟಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ, ಪ್ರಧಾನಿ ಮೋದಿಯವರ 9 ವರ್ಷಗಳ ಆಡಳಿತಾ ವಧಿಯ ವಿಶಿಷ್ಟ ಸಾಧನೆಗಳ ಪ್ರದರ್ಶಿನಿ ಮೂಲಕ ಉತ್ತಮ ಕೆಲಸ ಕಾರ್ಯ ಗಳನ್ನು ತಳ ಮಟ್ಟದಲ್ಲಿ ಗುರುತಿಸುವ ಕಾರ್ಯ ಆಗಬೇಕು. ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ವೈಖರಿ ಪಕ್ಷದ ಕಾರ್ಯಕರ್ತರಿಗೆ ಇನ್ನಷ್ಟು ಸ್ಪೂರ್ತಿ ನೀಡುವ ಜೊತೆಗೆ ಹೊಸ ಕಾರ್ಯಕರ್ತರಿಗೆ ಪ್ರೇರಣೆ ತುಂಬಲಿ ಎಂದು ಹಾರೈಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಪಾಧ್ಯಕ್ಷರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಿಶೋರ್ ಕುಮಾರ್ ಕುಂದಾಪುರ, ಸೇವಾ ಪಾಕ್ಷಿಕ ಅಭಿಯಾನದ ಜಿಲ್ಲಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಪ್ರದರ್ಶಿನಿಯ ಸಂಯೋಜಕ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಪ್ರಮುಖರಾದ ರಾಘವೇಂದ್ರ ಉಪ್ಪೂರು, ಪಾಂಡುರಂಗ ಲಾಗ್ವಾಂಕರ್, ನವೀನ್ ಎಸ್.ಕೆ., ಮಂಜುನಾಥ್ ಮಣಿಪಾಲ್, ಗೋಪಾಲಕೃಷ್ಣ ರಾವ್ ಮಟ್ಟು, ನಿತಿನ್ ಕುಮಾರ್ ಉಪಸ್ಥಿತರಿದ್ದರು.