ಲಾನ್ ಟೆನ್ನಿಸ್: ಉಡುಪಿಯ ಆಡನ್ ಕ್ಲಿಯೋನ್ ರಾಜ್ಯಮಟ್ಟಕ್ಕೆ ಆಯ್ಕೆ

ಉಡುಪಿ, ಆ.28: ಶಿಕ್ಷಣ ಇಲಾಖೆ ಹಾಗೂ ತೆಂಕನಿಡಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ಆಶ್ರಯದಲ್ಲಿ ನಡೆದ ಜಿಲ್ಲಾ ಮಟ್ಟದ ಲಾನ್ ಟೆನ್ನಿಸ್ ಸ್ಪರ್ಧೆಯಲ್ಲಿ ಉಡುಪಿ ಎಂಜಿಎಂ ಪದವಿ ಪೂರ್ವ ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಆಡನ್ ಕ್ಲಿಯೋನ್ ಅತ್ಯುತ್ತಮ ಪ್ರದರ್ಶನ ನೀಡಿ ಚಿಕ್ಕೋಡಿಯಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ವಿದ್ಯಾರ್ಥಿಯ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲೆ ಮಾಲತಿ ದೇವಿ ಹರ್ಷ ವ್ಯಕ್ತಪಡಿಸಿ, ಅಭಿನಂದನೆ ಸಲ್ಲಿಸಿದ್ದಾರೆ. ರಾಜ್ಯಮಟ್ಟದಲ್ಲಿಯೂ ಉತ್ತಮ ಪ್ರದರ್ಶನ ನೀಡಿ ಕಾಲೇಜಿಗೆ ಕೀರ್ತಿ ತರುವಂತಾಗಲಿ ಎಂದು ಶುಭ ಹಾರೈಸಿದ್ದಾರೆ.
Next Story




