Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಕೇಬಲ್ ಟಿವಿ ನೆಟ್‌ವರ್ಕ್ ಚಾನೆಲ್‌ಗಳಲ್ಲಿ...

ಕೇಬಲ್ ಟಿವಿ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಅನಪೇಕ್ಷಿತ ಸುದ್ದಿ ಪ್ರಸಾರ ಮಾಡಿದಲ್ಲಿ ಕಾನೂನು ಕ್ರಮ: ಉಡುಪಿ ಡಿಸಿ ಡಾ.ವಿದ್ಯಾಕುಮಾರಿ

ವಾರ್ತಾಭಾರತಿವಾರ್ತಾಭಾರತಿ19 Dec 2023 8:15 PM IST
share
ಕೇಬಲ್ ಟಿವಿ ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಅನಪೇಕ್ಷಿತ ಸುದ್ದಿ ಪ್ರಸಾರ ಮಾಡಿದಲ್ಲಿ ಕಾನೂನು ಕ್ರಮ: ಉಡುಪಿ ಡಿಸಿ ಡಾ.ವಿದ್ಯಾಕುಮಾರಿ

ಉಡುಪಿ: ಸ್ಥಳೀಯ ಕೇಬಲ್ ಟಿವಿ, ನೆಟ್‌ವರ್ಕ್ ಚಾನೆಲ್‌ಗಳಲ್ಲಿ ಅನಪೇಕ್ಷಿತ ಸುದ್ದಿಗಳನ್ನು ಪ್ರಸಾರ ಮಾಡಿದ್ದಲ್ಲಿ ಅಂತಹ ಕೇಬಲ್ ಟಿವಿ ಆಪರೇಟರ್‌ಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾಕುಮಾರಿ ಹೇಳಿದ್ದಾರೆ.

ಮಂಗಳವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಕೇಬಲ್ ಟೆಲಿವಿಷನ್ ನಿರ್ವಹಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಕೇಬಲ್ ಟಿವಿಯಲ್ಲಿ ಪ್ರಸಾರವಾಗುವ ಯಾವುದೇ ಕಾರ್ಯಕ್ರಮಗಳು ಸಮಾಜದಲ್ಲಿ ಶಾಂತಿ ಭಂಗ ತರುವ, ಯಾವುದೇ ಸಮುದಾಯಗಳ ಮಧ್ಯೆ ವೈರತ್ವ ತರುವ, ನೋವು ಉಂಟು ಮಾಡುವಂತಿರಬಾರದು. ಇಂಥ ಕಾರ್ಯಕ್ರಮಗಳನ್ನು ಪ್ರಸಾರ ಮಾಡುವಂತಿಲ್ಲ ಹಾಗೂ ಜಾಹೀರಾತುಗಳು ಸಂಹಿತೆಗೆ ಅನುಗುಣವಾಗಿಲ್ಲದೇ ಇದ್ದಲ್ಲಿ ಅಥವಾ ಯಾವುದೇ ಆಧಾರವಿಲ್ಲದೇ ವಿವಿಧ ಧರ್ಮ, ಜನಾಂಗ, ಭಾಷೆ ಅಥವಾ ಪ್ರಾದೇಶಿಕ ಗುಂಪುಗಳ ಅಥವಾ ಜಾತಿ ನಡುವೆ ವೈಷ್ಯಮ್ಯದ ಅಥವಾ ವೈರತ್ವದ ಭಾವನೆಗಳನ್ನು ಬೆಳೆಸುವಂತಿದ್ದಲ್ಲಿ ಅವುಗಳನ್ನು ಪ್ರಸಾರ ಮಾಡುವಂತಿಲ್ಲ ಎಂದರು.

ಕೇಬಲ್ ಆಪ್‌ರೇಟರ್‌ಗಳು ಗ್ರಾಹಕರುಗಳಿಗೆ ನಿಗದಿಪಡಿಸಿದ ದರವನ್ನು ವಸೂಲಿ ಮಾಡಬೇಕು. ಉತ್ತಮ ಗುಣಮಟ್ಟದ ನೆಟ್‌ವರ್ಕ್ ಸಿಗ್ನಲ್‌ಗಳನ್ನು ಒದಗಿಸಬೇಕು. ಈ ಬಗ್ಗೆ ದೂರುಗಳು ಬಂದಲ್ಲಿ ಕೇಬಲ್ ಆಪರೇಟರ್‌ಗಳನ್ನು ಹೊಣೆಗಾರರನ್ನಾಗಿ ಮಾಡಿ, ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಕೇಬಲ್ ಟೆಲಿಷನ್ ನೆಟ್‌ವರ್ಕ್ ಕಾರ್ಯಕ್ರಮ ಕಾಯಿದೆಗಳು ಹಾಗೂ ನಿಯಮಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. ಒಂದೊಮ್ಮೆ ನಿಯಮ ಉಲ್ಲಂಘಿಸಿದ್ದಲ್ಲಿ ಕಾನೂನಿನಡಿಯಲ್ಲಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಸಮಿತಿಯ ಕಾರ್ಯದರ್ಶಿ ಹಾಗೂ ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಮಾತನಾಡಿ, ಸ್ಥಳೀಯ ಟಿವಿ ಕಾರ್ಯಕ್ರಮ ಗಳ ಮೇಲೆ ಗಮನ ನೀಡಲಾಗುತ್ತಿದೆ. ಕೇಬಲ್ ಟಿವಿ ಆಪರೇಟರ್‌ಗಳು ಗ್ರಾಹಕರೊಂದಿಗೆ ಸಂಯಮದೊಂದಿಗೆ ವರ್ತಿಸಿ, ಗುಣಮಟ್ಟದ ಸೇವೆಗಳನ್ನು ಒದಗಿಸಬೇಕು ಎಂದರು.

ಕೇಬಲ್ ಟಿವಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಯಾವುದೇ ರೀತಿಯ ದೂರುಗಳಿದ್ದಲ್ಲಿ ಜಿಲ್ಲಾ ಮಟ್ಟದ ದೂರು ಕೋಶವನ್ನು, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ನಾಯರ್‌ಕೆರೆ, ಬ್ರಹ್ಮಗಿರಿ, ಉಡುಪಿ ಕಚೇರಿಯಲ್ಲಿ ತೆರೆಯಲಾಗಿದೆ. ಇಲ್ಲಿ ಯಾವುದೇ ದೂರುಗಳನ್ನು ನೀಡಬಹುದಾಗಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಪವರ್ ಸಂಸ್ಥೆಯ ಸಾಧನಾ ಕಿಣಿ, ಶಿಕ್ಷಣ ತಜ್ಞ ರಾಮಕೃಷ್ಣ ರಾವ್, ವಿಶ್ವಾಸದ ಮನೆಯ ಅಧ್ಯಕ್ಷ ಮ್ಯಾಕಿಮ್ ಕ್ಯಾಸ್ತಲೀನ್ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X