ಬೈಂದೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಚಿರತೆ ಸಾವು

ಬೈಂದೂರು: ಚಲಿಸುತ್ತಿದ್ದ ರೈಲಿಗೆ ಸಿಲುಕಿ ಚಿರತೆಯೊಂದು ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಖಂಬದಕೋಣೆ ರೈಲ್ವೇ ಗೇಟ್ ಸಮೀಪದ ರೈಲು ಹಳಿಯಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ.
ಘಟನೆ ಬಗ್ಗೆ ಮಾಹಿತಿ ಸಿಗುತ್ತಲೇ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಾಶ್ ಪೂಜಾರಿ, ಬೈಂದೂರು ವಲಯ ಅರಣ್ಯಾಧಿಕಾರಿ ಸಂದೇಶ್ ಕುಮಾರ್ ಹಾಗೂ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಸುಮಾರು 7-8 ವರ್ಷ ಪ್ರಾಯದ ಗಂಡು ಚಿರತೆ ಇದಾಗಿದ್ದು ಆಹಾರವರಸಿ ಬರುವಾಗ ಚಲಿಸುತ್ತಿದ್ದ ರೈಲಿಗೆ ಸಿಲುಕಿ ಮೃತಪಟ್ಟ ಬಗ್ಗೆ ಅಧಿಕಾರಿಗಳು ತಿಳಿಸಿದ್ದಾರೆ. ಬುಧವಾರದಂದು ಮೃತ ಚಿರತೆಯ ಮರಣೋತ್ತರ ಪರೀಕ್ಷೆ ನಡೆಸಿ ಮುಂದಿನ ಕ್ರಮಕೈಗೊಳ್ಳಲಾಯಿತು.
Next Story





