Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ನೆಲದನಿ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ಪುಸ್ತಕ ಸಾಂಗತ್ಯ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಮಾಹಿತಿ ಮಾರ್ಗದರ್ಶನ
    • ಆರೋಗ್ಯ
    • ಓ ಮೆಣಸೇ
    • ಕೃತಿ ಪರಿಚಯ
    • ಝಲಕ್
    • ಬುಡಬುಡಿಕೆ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಹಾಮಸ್ತಕಾಭಿಷೇಕವನ್ನು ಕಾರ್ಕಳದ...

ಮಹಾಮಸ್ತಕಾಭಿಷೇಕವನ್ನು ಕಾರ್ಕಳದ ಹಬ್ಬವಾಗಿ ಆಚರಿಸೋಣ: ಡಾ.ಎಂ.ಎನ್.ರಾಜೇಂದ್ರ ಕುಮಾರ್

ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪೂರ್ವಭಾವಿ ಸಭೆ

ವಾರ್ತಾಭಾರತಿವಾರ್ತಾಭಾರತಿ18 Oct 2026 11:24 AM IST
share
ಮಹಾಮಸ್ತಕಾಭಿಷೇಕವನ್ನು ಕಾರ್ಕಳದ ಹಬ್ಬವಾಗಿ ಆಚರಿಸೋಣ: ಡಾ.ಎಂ.ಎನ್.ರಾಜೇಂದ್ರ ಕುಮಾರ್

ಕಾರ್ಕಳ: ಕಾರ್ಕಳದ ಭಗವಾನ್ ಶ್ರೀ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕವನ್ನು ಕೇವಲ ಒಂದು ಸಮಾಜದ ಹಬ್ಬವಾಗಿ ಸೀಮಿತಗೊಳಿಸದೆ, ಕಾರ್ಕಳದ ಹಬ್ಬವಾಗಿ ಆಚರಿಸಬೇಕು. ಎಲ್ಲರೂ ಒಗ್ಗಟ್ಟಿನಿಂದ ಕೈಜೋಡಿಸಿ ಮಹೋತ್ಸವವನ್ನು ಯಶಸ್ವಿಗೊಳಿಸಬೇಕು ಎಂದು ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್ ಹೇಳಿದರು.

ಫೆಬ್ರವರಿಯಲ್ಲಿ ನಡೆಯಲಿರುವ ಕಾರ್ಕಳ ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ಪೂರ್ವಭಾವಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಫೆ.18ರಿಂದ ಹತ್ತು ದಿನಗಳ ಕಾಲ ಮಹಾಮಸ್ತಕಾಭಿಷೇಕ ನಡೆಯಲಿದೆ. ಈ ಧಾರ್ಮಿಕ ಕಾರ್ಯದಲ್ಲಿ ನಾಲ್ಕನೇ ಬಾರಿಗೆ ಸೇವೆ ಸಲ್ಲಿಸುವ ಅವಕಾಶ ದೊರೆತಿದೆ ಎಂದರು.

ಆಸ್ಪತ್ರೆಯಲ್ಲಿ ಎಷ್ಟು ದಿನ ಇದ್ದೆ ಎಂಬುದೇ ತಿಳಿಯದ ಸ್ಥಿತಿಯಲ್ಲಿದ್ದೆ. ನನ್ನ ಅರಿವಿಗೂ ಬಾರದಂತೆ 19 ದಿನ ಆಸ್ಪತ್ರೆಯಲ್ಲಿದ್ದೆ. ದೇವರ ಆಶೀರ್ವಾದ ಹಾಗೂ ಜನರ ಹಾರೈಕೆಯಿಂದ ಗುಣಮುಖನಾಗಿ ಮರಳಿ ಬಂದಿದ್ದೇನೆ. ಈ ಧಾರ್ಮಿಕ ಕಾರ್ಯದಲ್ಲಿ ಭಾಗವಹಿಸಲು ಸಾಧ್ಯವಾಗಿರುವುದು ಸಂತೋಷ ತಂದಿದೆ ಎಂದು ಹೇಳಿದರು.

ಮಹಾಮಸ್ತಕಾಭಿಷೇಕಕ್ಕೆ ಸರ್ಕಾರದಿಂದ ಅಗತ್ಯ ನೆರವು ದೊರೆಯುವ ಭರವಸೆಯಿದೆ. ಈಗಾಗಲೇ ಅಟ್ಟಳಿಗೆ ನಿರ್ಮಾಣಕ್ಕೆ ಹಣ ಬಿಡುಗಡೆಯಾಗಿದ್ದು, ಕಾಮಗಾರಿಯೂ ಆರಂಭವಾಗಿದೆ. ಹತ್ತು ದಿನಗಳ ಕಾಲ ನಡೆಯುವ ಮಹೋತ್ಸವದಲ್ಲಿ ಬೆಳಕಿನ ವ್ಯವಸ್ಥೆ, ಊಟೋಪಚಾರ ಸೇರಿದಂತೆ ಯಾವುದೇ ಕೊರತೆಯಾಗದಂತೆ ವ್ಯವಸ್ಥೆ ಮಾಡಲಾಗುವುದು. ರಸ್ತೆ ಅಭಿವೃದ್ಧಿಗೂ ಸರ್ಕಾರ ಹಣ ಮಂಜೂರು ಮಾಡಿದೆ. ಇನ್ನೂ ಹೆಚ್ಚಿನ ಅನುದಾನದ ಅಗತ್ಯವಿದ್ದು, ಹೆಚ್ಚುವರಿ ನೆರವು ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ ಎಂದು ತಿಳಿಸಿದರು.

ಯುಗಳ ಮುನಿ ಮಹಾರಾಜರು ಒಂದು ದಿನದ ಮಸ್ತಕಾಭಿಷೇಕದ ಜವಾಬ್ದಾರಿ ವಹಿಸಿಕೊಂಡಿರುವುದು ಈ ಬಾರಿಯ ವಿಶೇಷವಾಗಿದೆ. ಸಮಿತಿಯ ವಿವಿಧ ಜವಾಬ್ದಾರಿಗಳನ್ನು ವಹಿಸಿಕೊಂಡವರು ತಮ್ಮ ಕರ್ತವ್ಯವನ್ನು ಸಮರ್ಪಕವಾಗಿ ನಿರ್ವಹಿಸುವ ವಿಶ್ವಾಸವಿದೆ. ಮಹೋತ್ಸವಕ್ಕೆ ಇನ್ನು 123 ದಿನಗಳು ಮಾತ್ರ ಬಾಕಿಯಿದ್ದು, ಎಲ್ಲರೂ ಒಟ್ಟಾಗಿ ಶ್ರಮಿಸಿದಾಗ ಯಶಸ್ಸು ಸಾಧ್ಯ ಎಂದರು.

ಕಾರ್ಕಳ ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಮಾತನಾಡಿ, ಮಹಾಮಸ್ತಕಾಭಿಷೇಕದಂತಹ ಪುಣ್ಯಕಾರ್ಯವನ್ನು ನೆರವೇರಿಸಲು ಡಾ. ರಾಜೇಂದ್ರ ಕುಮಾರ್ ಅವರಿಗೆ ಅನುಗ್ರಹ ದೊರೆತಿದೆ. ಅನಾರೋಗ್ಯದಿಂದ ಚೇತರಿಸಿಕೊಂಡು ಮತ್ತೆ ಧಾರ್ಮಿಕ ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಸಂತೋಷದ ಸಂಗತಿ. ಪುಣ್ಯಾತ್ಮರು ಹಾಗೂ ಧರ್ಮಾತ್ಮರನ್ನು ದೇವರು ಕಾಪಾಡುತ್ತಾನೆ. ರಾಜೇಂದ್ರ ಕುಮಾರ್ ಅವರಲ್ಲಿ ಉತ್ತಮ ನಾಯಕತ್ವದ ಗುಣವಿದ್ದು, ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಿ ಮಹಾಮಸ್ತಕಾಭಿಷೇಕವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಮಾಜಿ ಸಚಿವ ಅಭಯಚಂದ್ರ ಜೈನ್ ಮಾತನಾಡಿ, ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ನೇತೃತ್ವದಲ್ಲಿ ನಡೆಯಲಿರುವ ಮಹಾಮಸ್ತಕಾಭಿಷೇಕ ಯಶಸ್ವಿಯಾಗಿ, ಮಾದರಿ ಉತ್ಸವವಾಗಿ ಮೂಡಿಬರಬೇಕು. ಇದು ಸಮಸ್ತ ಮನುಕುಲದ ಒಳಿತಿಗಾಗಿ ನಡೆಯುವ ಧಾರ್ಮಿಕ ಮಹೋತ್ಸವವಾಗಿದ್ದು, ಎಲ್ಲರೂ ಸಹಕಾರ ನೀಡಬೇಕು ಎಂದರು.

ಡಾ.ಎಂ.ಎನ್.ರಾಜೇಂದ್ರ ಕುಮಾರ್ ಅವರ ಆರೋಗ್ಯ ಸುಧಾರಣೆಗಾಗಿ ಸಮಸ್ತ ಜೈನ ಸಮಾಜದ ವತಿಯಿಂದ ಶ್ರೀ ಜೈನಮಠದಲ್ಲಿ ಪೂಜೆ ಹಾಗೂ ಪ್ರಾರ್ಥನೆ ನೆರವೇರಿಸಲಾಗಿತ್ತು. ಜೈನಮಠದ ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಹಾಗೂ ಮುನಿ ಮಹಾರಾಜರ ಆಶೀರ್ವಾದದೊಂದಿಗೆ ಸಮಾಜದ ವತಿಯಿಂದ ರಾಜೇಂದ್ರ ಕುಮಾರ್ ಅವರಿಗೆ ಶ್ರೀ ದೇವರ ಪ್ರಸಾದ ನೀಡಲಾಯಿತು. ಅಲ್ಲದೆ, ಅವರು ಶ್ರೀ ಕ್ಷೇತ್ರ ಜೈನಮಠದ ಶ್ರೀ ಕೂಷ್ಮಾಂಡಿನೀ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು.

ಮಹಾಮಸ್ತಕಾಭಿಷೇಕ ಸಮಿತಿಯ ಉಪಾಧ್ಯಕ್ಷರಾದ ರತ್ನಾಕರ್ ರಾಜ್ ಅರಸ್ ಪಡುಬಿದ್ರಿ, ಅನಂತ್‌ರಾಜ್ ಪುವಣಿ ಹಾಗೂ ಕೋಶಾಧಿಕಾರಿ ಮೋಹನ್ ಪಡಿವಾಳ್ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಜೈನ್ ಸ್ವಾಗತಿಸಿ, ಯೋಗರಾಜ್ ಶಾಸ್ತ್ರಿ ನಿರೂಪಿಸಿದರು.




Tags

karkalafestivalMahamastakabhisheka
share
ವಾರ್ತಾಭಾರತಿ
ವಾರ್ತಾಭಾರತಿ
Next Story
X