Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಯುವಪೀಳಿಗೆಯಲ್ಲಿ ಓದುವ ಹವ್ಯಾಸ ಬೆಳೆಸೋಣ:...

ಯುವಪೀಳಿಗೆಯಲ್ಲಿ ಓದುವ ಹವ್ಯಾಸ ಬೆಳೆಸೋಣ: ಫಕೀರ್ ಮುಹಮ್ಮದ್

ವಾರ್ತಾಭಾರತಿವಾರ್ತಾಭಾರತಿ16 Nov 2025 11:41 PM IST
share
ಯುವಪೀಳಿಗೆಯಲ್ಲಿ ಓದುವ ಹವ್ಯಾಸ ಬೆಳೆಸೋಣ: ಫಕೀರ್ ಮುಹಮ್ಮದ್
ಕಾಪು ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ಸಮಾರೋಪ

ಪಡುಬಿದ್ರೆ, ನ.16: ನಮ್ಮ ಇಂದಿನ ಯುವ ಪೀಳಿಗೆಯಲ್ಲಿ ಓದುವ ಹವ್ಯಾಸವನ್ನು ಬೆಳೆಸೋಣ, ಕನ್ನಡದ ಸಾರ್ವಭೌಮತ್ವವನ್ನು ಕಾಪಾಡಿಕೊಂಡು ಇಂಗ್ಲಿಷ್‌ನ್ನು ಕಲಿಯೋಣ ಎಂದು ಸಾಹಿತಿ, ಕಥೆೆಗಾರ ಫಕೀರ್ ಮುಹಮ್ಮದ್ ಕಟ್ಪಾಡಿ ಕರೆ ನೀಡಿದ್ದಾರೆ.

ಹೆಜಮಾಡಿಯ ಬಿಲ್ಲವರ ಸಂಘದ ಸಭಾ ಭವನದಲ್ಲಿ ಎರಡು ದಿನಗಳ ಕಾಲ ನಡೆದ ಕಾಪು ತಾಲೂಕು 7ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷೆಯನ್ನು ವಹಿಸಿದ್ದ ಅವರು, ಶನಿವಾರ ಸಮಾರೋಪ ಸಮಾರಂಭದಲ್ಲಿ ಮಾತನಾಡುತ್ತಿದ್ದರು.

ಗ್ರಾಮೀಣ ಪ್ರದೇಶವಾದ ಹೆಜಮಾಡಿಯಲ್ಲಿ ಹಮ್ಮಿಕೊಂಡ ಸಮ್ಮೇಳನದ ಸಂಯೋಜನೆ ಯಶಸ್ವಿಯಾಗಿದೆ. ಸಾಹಿತ್ಯದ ಅಭಿಮಾನ ಇಲ್ಲಿನ ಜನತೆಯಲ್ಲಿ ಇನ್ನೂ ಹಸಿರಾಗಿದೆ. ಸಾಹಿತ್ಯವನ್ನು ಬೆಳೆಸುವಲ್ಲಿ ಜವಾಬ್ದಾರಿಗಳು ಇನ್ನೂ ಇದೆ. ಸಾಹಿತ್ಯ ವೇದಿಕೆಯ ಸ್ಥಾಪನೆಯಾಗಬೇಕು. ಇಂದಿನ ಜನಾಂಗದಲ್ಲಿ ಓದುವ ಹವ್ಯಾಸವನ್ನು ಬೆಳೆಸಬೇಕು ಎಂದವರು ಹೇಳಿದರು.

ಹಿರಿಯ ಸಾಹಿತಿ ಮನೋರಮಾ ಹೆಜಮಾಡಿ ಮಾತನಾಡಿ, ಕನ್ನಡ ಸಾಹಿತ್ಯದಲ್ಲಿ ಪ್ರೀತಿಪ್ರದವಾದ ಸಾಹಿತ್ಯ ದಾಸ ಸಾಹಿತ್ಯವಾಗಿದೆ. ಇಂತಹ ಸಾಹಿತ್ಯ ಸಮ್ಮೇಳನಗಳು ವಿವಿಧ ಗೋಷ್ಠಿಗಳ ಮೂಲಕ ಎಲ್ಲರನ್ನೂ ಸಾಹಿತ್ಯ ರಂಗದಲ್ಲಿ ಜೀವಂತವಾಗಿರಿಸಿವೆ ಎಂದರು.

ಈ ಸಂದರ್ಭ ಅದಾನಿ ಸಮೂಹ ಸಂಸ್ಥೆಯ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ, ಬಿಲ್ಲವರ ಸಂಘದ ಅಧ್ಯಕ್ಷ ಮೋಹನ್‌ದಾಸ್ ಹೆಜಮಾಡಿ, ಸ್ವಾಗತ ಸಮಿತಿಯ ಗೌರವಾಧ್ಯಕ್ಷ ದಯಾನಂದ ಹೆಜಮಾಡಿ, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹರೀಶ್ ಹೆಜಮಾಡಿ, ಮಂಜುಳಾ ಶೆಟ್ಟಿ, ನೀಲಾನಂದ ನಾಯ್ಕ್ ಮತ್ತಿತರರು ಉಪಸ್ಥಿತರಿದ್ದರು.

ಸನ್ಮಾನ :

ಸಾಧಕ ಸಂಸ್ಥೆಯಾದ ಹೆಜಮಾಡಿ ಬಿಲ್ಲವರ ಸಂಘ, ಸಾಧಕರಾದ ಗಣೇಶ್ ರಾವ್ ಎಲ್ಲೂರು (ರಂಗಭೂಮಿ), ಉಚ್ಚಿಲ ಬಾಲಕೃಷ್ಣ ಪೂಜಾರಿ (ಮಾಧ್ಯಮ), ನಿವೃತ್ತ ಮೆಸ್ಕಾಂ ಅಧಿಕಾರಿ ಎಚ್.ಪರಮೇಶ್ವರ, ವಿ.ಕೆ.ಹೆಜಮಾಡಿ (ಶಿಕ್ಷಣ), ಓಂದಾಸ್ ಕಣ್ಣಂಗಾರ್ ಹೆಜಮಾಡಿ (ಹೊರನಾಡು ಕನ್ನಡ ಸೇವೆ) ಹಾಗೂ ಶಾಂತಾ ಸೇರಿಗಾರ್ ಪಡುಬೆಳ್ಳೆ (ತುಳು ಅಧ್ಯಯನ) ಇವರನ್ನು ಸಮ್ಮಾನಿಸಲಾಯಿತು. ಓಂದಾಸ್ ಕಣ್ಣಂಗಾರ್, ಎಚ್.ಪರಮೇಶ್ವರ್ ಸನ್ಮಾನಕ್ಕುತ್ತರಿಸಿ ಮಾತನಾಡಿದರು.

ರಸಪ್ರಶ್ನೆ ಸ್ಪರ್ಧೆಯಲ್ಲಿ ವಿಶ್ವೇಶತೀರ್ಥ ಮಹಾ ವಿದ್ಯಾಲಯ ಪಾಜಕ (ಪ್ರಥಮ), ತೃಷಾ ಕಾಲೇಜು ಕಟಪಾಡಿ (ದ್ವಿತೀಯ), ಸೈಂಟ್ ಮೇರೀಸ್ ಪದವಿ ಕಾಲೇಜು, ಕಾಪು ಪ್ರಥಮ ದರ್ಜೆ ಕಾಲೇಜು, ಎಂಎಸ್‌ಆರ್‌ಎಸ್ ಶಿರ್ವ (ತೃತೀಯ) ಬಹುಮಾನಗಳನ್ನು ಪಡೆದಿದ್ದು, ಬಹುಮಾನ ವಿತರಿಸಲಾ ಯಿತು.

ಸ್ವಾಗತ ಸಮಿತಿಯ ಅಧ್ಯಕ್ಷ ದಯಾನಂದ ಹೆಜಮಾಡಿ, ಪ್ರಧಾನ ಕಾರ್ಯದರ್ಶಿ ಪ್ರಾಣೇಶ್ ಹೆಜಮಾಡಿಯವರನ್ನು ಕಸಾಪ ಕಾಪು ವತಿಯಿಂದ ಗೌರವಿಸಲಾಯಿತು. ಕಸಾಪ ಕಾಪು ತಾಲೂಕು ಅಧ್ಯಕ್ಷ ಪುಂಡಲೀಕ ಮರಾಠೆ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಜತೆ ಕಾರ್ಯದರ್ಶಿ ಕೃಷ್ಣಕುಮಾರ್ ಮಟ್ಟು ಸ್ವಾಗತಿಸಿದರು. ಅನಂತ ಮೂಡಿತ್ತಾಯರು ಮನೋರಮಾ ಹೆಜಮಾಡಿಯವರನ್ನು ಪರಿಚಯಿಸಿದರು. ದೇವದಾಸ್ ಪಾಟ್ಕರ್ ಕಾರ್ಯಕ್ರಮ ನಿರೂಪಿಸಿದರು. ಗೌರವ ಕೋಶಾಧಿಕಾರಿ ವಿದ್ಯಾಧರ ಪುರಾಣಿಕ್ ವಂದಿಸಿದರು.

ವಿಚಾರಗೋಷ್ಠಿಯಲ್ಲಿ ಉಡುಪಿ ಶ್ರೀಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಸಹಾಯಕ ಪ್ರಾಧ್ಯಾಪಕಿ ಡಾ.ಪ್ರಜ್ಞಾ ಮಾರ್ಪಳ್ಳಿ ಕಥಾ ಸ್ವಾರಸ್ಯ ವಿಷಯದಲ್ಲಿ ವಿಚಾರ ಮಂಡಿಸಿದರು.

ವಿಚಾರಗೋಷ್ಠಿ ಕವಿಗೋಷ್ಠಿ :

ಬಹುಭಾಷಾ ಕವಿಗೋಷ್ಠಿಯಲ್ಲಿ ಪ್ರಶಸ್ತಿ ಪುರಸ್ಕೃತ ಕವಯತ್ರಿ ಫಾತಿಮಾ ರಲಿಯಾ ಹೆಜಮಾಡಿ ಅಧ್ಯಕ್ಷತೆ ವಹಿಸಿದ್ದರು. ಕನ್ನಡ ಭಾಷೆಯಲ್ಲಿ ವಸುಂದರಾ ಕೆ.ಟಿ. ಕಾಪು, ಶೃತಿಕಾ ಎರ್ಮಾಳು, ತುಳು ಭಾಷೆಯಲ್ಲಿ ಜೆನೆಟ್ ಜೆ. ಅಮ್ಮಣ್ಣ ಪಾಂಗಾಳಗುಡ್ಡೆ, ಓಂದಾಸ್ ಕಣ್ಣಂಗಾರ್ ಹೆಜಮಾಡಿ, ಬ್ಯಾರಿ ಭಾಷೆಯಲ್ಲಿ ಹಮೀದ್ ಪಡುಬಿದ್ರೆ, ಕೊರಗ ಭಾಷೆಯಲ್ಲಿ ಸತೀಶ್ ಪಡುಬಿದ್ರೆ, ಕೊಂಕಣಿ ಭಾಷೆಯಲ್ಲಿ ಗೀತಾ ವಾಗ್ಲೆ ಬಂಟಕಲ್ಲು ಸ್ವರಚಿತ ಕವನ ವಾಚಿಸಿದರು. ಯಶೋಧಾ ಎಲ್ಲೂರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X