Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಣಿಪಾಲ ಕೆಎಂಸಿಯಲ್ಲಿ ಯಕೃತ್ತು ಕಸಿ...

ಮಣಿಪಾಲ ಕೆಎಂಸಿಯಲ್ಲಿ ಯಕೃತ್ತು ಕಸಿ ಕ್ಲಿನಿಕ್ ಪ್ರಾರಂಭ: ಯಕೃತ್ತು ಕಸಿಯಲ್ಲಿ ದೇಶಕ್ಕೆ ವಿಶ್ವದಲ್ಲೇ 2ನೇ ಸ್ಥಾನ

ವಾರ್ತಾಭಾರತಿವಾರ್ತಾಭಾರತಿ7 Jan 2026 8:56 PM IST
share
ಮಣಿಪಾಲ ಕೆಎಂಸಿಯಲ್ಲಿ ಯಕೃತ್ತು ಕಸಿ ಕ್ಲಿನಿಕ್ ಪ್ರಾರಂಭ: ಯಕೃತ್ತು ಕಸಿಯಲ್ಲಿ ದೇಶಕ್ಕೆ ವಿಶ್ವದಲ್ಲೇ 2ನೇ ಸ್ಥಾನ

ಉಡುಪಿ, ಜ.7: ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಮಣಿಪಾಲ ಹಾಗೂ ಬೆಂಗಳೂರಿನ ತಜ್ಞ ವೈದ್ಯರ ಮೂಲಕ ಸಮಗ್ರ ಯಕೃತ್ತು ಚಿಕಿತ್ಸೆ ಮತ್ತು ಯಕೃತ್ತು ಕಸಿ ಕ್ಲಿನಿಕ್‌ನ್ನು ಪ್ರಾರಂಭಿಸಲಾಗಿದೆ ಎಂದು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯ ಎಚ್‌ಪಿಬಿ ಯಂಡ್ ಲಿವರ್ ಮತ್ತು ಮೇದೋಜ್ಜೀರಕ ಗ್ರಂಥಿಯ (ಪ್ಯಾಂಕ್ರಿಯಾಟಿಕ್) ಕಸಿತಜ್ಞ ಹಾಗೂ ಸಲಹೆಗಾರ ಡಾ.ಜಯಂತ್ ರೆಡ್ಡಿ ತಿಳಿಸಿದ್ದಾರೆ.

ಈ ಕ್ಲಿನಿಕ್‌ನಲ್ಲಿ ದೇಹದ ಪ್ರಮುಖ ಅಂಗವಾಗಿರುವ ಯಕೃತ್‌ನ (ಲಿವರ್) ತಪಾಸಣೆ, ಆರೈಕೆ ಹಾಗೂ ಅಗತ್ಯ ಬಿದ್ದರೆ ಕಸಿ ಸೇವೆ ದೊರೆಯಲಿದೆ. ಈ ಚಿಕಿತ್ಸಾಲಯ ಪ್ರತಿ ತಿಂಗಳ ಮೊದಲ ಮಂಗಳವಾರ ಬೆಳಿಗ್ಗೆ 10ರಿಂದ ಸಂಜೆ 4 ರವರೆಗೆ ಕಾರ್ಯಾಚರಿಸಲಿದೆ ಎಂದು ಡಾ.ಜಯಂತ್ ರೆಡ್ಡಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಇನ್ನು ಮುಂದೆ ಇದಕ್ಕೆ ಸಂಬಂಧಿಸಿದಂತೆ ರೋಗಿಗಳು ಮತ್ತು ಅವರ ಕುಟುಂಬಗಳಿಗೆ ತಜ್ಞರ ಮೌಲ್ಯಮಾಪನ, ಮಾರ್ಗದರ್ಶನ ಮತ್ತು ಆರೈಕೆ ಬೆಂಗಳೂರಿನಂತ ದೂರ ಪ್ರಯಾಣದ ಒತ್ತಡವಿಲ್ಲದೆ ಮಣಿಪಾಲದಲ್ಲೇ ಲಭ್ಯವಾಗಲಿದೆ ಎಂದರು.

ತೀವ್ರ ಮತ್ತು ದೀರ್ಘಕಾಲದ ಯಕೃತ್ತಿನ ಕಾಯಿಲೆ, ಕೊಬ್ಬಿನ ಲಿವರ್ ಕಾಯಿಲೆ, ಸಿರೋಸಿಸ್ ಮತ್ತು ಅದರ ತೊಡಕು ಗಳು, ಯಕೃತ್ತಿನ ಗೆಡ್ಡೆಗಳು ಮತ್ತು ಕ್ಯಾನ್ಸರ್, ಹೆಪಟೋರೆನಲ್ ಸಿಂಡೋಮ್, ಸಂಕೀರ್ಣ ಯಕೃತ್ತಿನ ಅಸ್ವಸ್ಥತೆಗಳು, ಯಕೃತ್ತಿಗೆ ಸಂಬಂಧಿಸಿದ ಕಾಯಿಲೆಯಿಂದ ಬಳಲುವ ಮಕ್ಕಳು ಇದರ ಪ್ರಯೋಜನ ಪಡೆಯಬಹುದು ಮತ್ತು ಕಸಿ ಮಾಡುವ ಮೊದಲು ಅಥವಾ ನಂತರ ಆರೈಕೆಯ ಅಗತ್ಯವಿರುವ ರೋಗಿಗಳಿಗೆ ಈ ಕ್ಲಿನಿಕ್ ಉಪಯುಕ್ತವಾಗಲಿದೆ ಎಂದರು.

ಯಕೃತ್ತಿನ ಕಾಯಿಲೆಗಳು ಸಾಮಾನ್ಯವಾಗಿ ರೋಗ ಉಲ್ಬಣಾವಸ್ಥೆ ತಲುಪುವವರೆಗೆ ಸದ್ದಿಲ್ಲದೆ ಮುಂದುವರಿಯುತ್ತದೆ. ಈ ಹಂತದಲ್ಲಿ ಪರೀಕ್ಷಿಸಿಕೊಂಡರೆ ಸೂಕ್ತ ಚಿಕಿತ್ಸೆ ಮೂಲಕ ಪರಿಹಾರ ಕಂಡು ರೋಗಮುಕ್ತವಾಗಬಹುದು. ಅಂತಿಮ ಹಂತದಲ್ಲಿ ಬಂದರೆ ಯಕೃತ್ತಿನ ಕಸಿಯೊಂದೇ ಆಯ್ಕೆಯಾಗಿರುತ್ತದೆ. ಆಧುನಿಕ ತಂತ್ರಜ್ಞಾನದಿಂದ ಇದನ್ನು ಸುಲಭವಾಗಿ ಮಾಡಬಹುದು ಎಂದರು.

ಕರ್ನಾಟಕದಲ್ಲಿ ಈಗ ಯಕೃತ್ತಿನ ಕಸಿಗೆ 3000ರಿಂದ 4000 ಮಂದಿ ರೋಗಿಗಳು ಕಾಯುತಿದ್ದಾರೆ. ಕಳೆದ ವರ್ಷ ಕರ್ನಾಟಕದಲ್ಲಿ 198 ಮಂದಿ ಮಾತ್ರ ಯಕೃತ್ ದಾನಿಗಳು ಸಿಕ್ಕಿದ್ದಾರೆ. ಇಲ್ಲಿ ಜೀವಂತ ದಾನಿಗಳು ಯಕೃತ್ ನೀಡಲು ಮುಂದೆ ಬರುತ್ತಿಲ್ಲ. ದೇಶದಲ್ಲಿ 5000 ಯಕೃತ್ತ್ ಕಸಿಯಲ್ಲಿ 3700ರಿಂದ 4000 ಮಂದಿ ಮಾತ್ರ ದಾನಿಗಳಿಂದ ಪಡೆಯಲಾಗಿದೆ. ಯಕೃತ್ ಕಸಿಯಲ್ಲಿ ದೇಶ ವಿಶ್ವದಲ್ಲೇ ಎರಡನೇ ಸ್ಥಾನದಲ್ಲಿದೆ ಎಂದು ಡಾ.ರೆಡ್ಡಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಆಸ್ಪತ್ರೆಯ ತಜ್ಞ ವೈದ್ಯರಾದ ಡಾ.ಶ್ರುತಿ ಎಚ್. ಎಸ್., ಡಾ.ಗಣೇಶ್ ಭಟ್, ಡಾ. ಶಿರನ್ ಶೆಟ್ಟಿ, ಡಾ. ಸುಧಾಕರ್ ಕಂಟಿಪುಡಿ, ಡಾ.ಅವಿನಾಶ್ ಶೆಟ್ಟಿ ಉಪಸ್ಥಿತರಿದ್ದರು.

Tags

Liver transplant
share
ವಾರ್ತಾಭಾರತಿ
ವಾರ್ತಾಭಾರತಿ
Next Story
X