Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಸ್ಥಳೀಯರಿಗೆ ಟೋಲ್ ವಿನಾಯಿತಿ...

ಸ್ಥಳೀಯರಿಗೆ ಟೋಲ್ ವಿನಾಯಿತಿ ಮುಂದುವರಿಸಲು ಆಗ್ರಹ: ಹೆಜಮಾಡಿ ಟೋಲ್ ಪ್ಲಾಝಾ ಮುಂಭಾಗದಲ್ಲಿ ಹಕ್ಕೊತ್ತಾಯ ಸಭೆ

ವಾರ್ತಾಭಾರತಿವಾರ್ತಾಭಾರತಿ24 May 2024 2:58 PM IST
share
ಸ್ಥಳೀಯರಿಗೆ ಟೋಲ್ ವಿನಾಯಿತಿ ಮುಂದುವರಿಸಲು ಆಗ್ರಹ: ಹೆಜಮಾಡಿ ಟೋಲ್ ಪ್ಲಾಝಾ ಮುಂಭಾಗದಲ್ಲಿ ಹಕ್ಕೊತ್ತಾಯ ಸಭೆ

ಪಡುಬಿದ್ರೆ, ಮೇ 24: ಹೆಜಮಾಡಿ ಟೋಲ್ ಪ್ಲಾಝಾದಲ್ಲಿ ಸ್ಥಳೀಯರಿಗೆ ನೀಡಿರುವ ಟೋಲ್ ವಿನಾಯಿತಿಯನ್ನು ರದ್ದುಪಡಿಸಿರುವುದನ್ನು ವಿರೋಧಿಸಿ ಹೆಜಮಾಡಿ ಟೋಲ್ ವಿರೋಧಿ ಹೋರಾಟ ಸಮಿತಿ ನೇತೃತ್ವದಲ್ಲಿ ಟೋಲ್ ಮುಂಭಾಗದಲ್ಲಿಂದು ಹಕ್ಕೊತ್ತಾಯ ಸಭೆ ನಡೆಯಿತು.

ನೂರಾರು ಸಂಖ್ಯೆಯಲ್ಲಿ ಸೇರಿದ ಸಾರ್ವಜನಿಕರು ಹೆಜಮಾಡಿ ಟೋಲ್ ಗೇಟ್ ನಲ್ಲಿ ವಿನಾಯಿತಿ ರದ್ದುಗೊಳಿಸಿರುವ ಕ್ರಮವನ್ನು ವಿರೋಧಿಸಿ ಟೋಲ್ ಪ್ರಬಂಧಕರನ್ನು ತರಾಟೆಗೆ ತೆಗೆದುಕೊಂಡು ಆಕ್ರೋಶ ವ್ಯಕ್ತಪಡಿಸಿದರು.

ಉಡುಪಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿ 2016ರಿಂದ ಹೆಜಮಾಡಿ ಟೋಲ್ ಪ್ಲಾಝಾ ಕಾರ್ಯಚರಿಸುತ್ತಿದೆ. ಇಲ್ಲಿ ರಸ್ತೆ ಅಭಿವೃದ್ಧಿಯ ವೇಳೆ ಈ ಭಾಗದ ಜನರು ತಮ್ಮ ಮನೆ, ಮಠ-ಭೂಮಿಯನ್ನು ಕಳೆದುಕೊಂಡಿದ್ದಾರೆ. ಉಡಪಿ ಜಿಲ್ಲಾಧಿಕಾರಿ 2016ರಲ್ಲಿ ನಡೆದ ಸಭೆಯಂತೆ ಹೆಜಮಾಡಿ ಟೋಲ್ ಪ್ಲಾಝಾದಲ್ಲಿ ಪಡುಬಿದ್ರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಗೆ ಹಾಗೂ ಸಾಸ್ತಾನದಲ್ಲಿ ಕೋಟ ಜಿಲ್ಲಾ ಪಂಚಾಯತ್ ವ್ಯಾಪ್ತಿ ವಾಹನಗಳಿಗೆ ಉಚಿತ ಪ್ರಯಾಣಕ್ಕೆ ಆದೇಶ ನೀಡಲಾಗಿತ್ತು. ಆದರೆ ಇದೀಗ ಏಕಾಏಕಿ ಸ್ಥಳೀಯ ವಾಹನಗಳ ಫಾಸ್ಟ್ ಟ್ಯಾಗ್ ನಿಂದ ಹಣ ಕಡಿತಗೊಳಿಸುವ ಮೂಲಕ ಟೋಲ್ ವಿನಾಯಿತಿ ರದ್ದುಪಡಿಸಿರುವುದು ತಿಳಿದುಬಂದಿದೆ. ಕೂಡಲೇ ಈ ವಿನಾಯಿತಿಯನ್ನು ಪಡುಬಿದ್ರೆ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ವಾಹನಗಳಿಗೆ ಮತ್ತೆ ಮುಂದುವರಿಸಬೇಕು ಎಂದು ಮನವಿಯ ಮೂಲಕ ಒತ್ತಾಯಿಸಲಾಯಿತು. ಒಂದು ವೇಳೆ ವಿನಾಯಿತಿ ಮುಂದುವರಿಸದಿದ್ದಲ್ಲಿ ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಲಾಯಿತು.

ಮನವಿ ಸ್ವೀಕರಿಸಿದ ಟೋಲ್ ಪ್ರಬಂಧಕ ತಿಮ್ಮಯ್ಯ ಮಾತನಾಡಿ, ಮುಂದಿನ ವಾರದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಸ್ತಾನ, ಹೆಜಮಾಡಿ ಟೋಲ್ ಸಮಸ್ಯೆಯ ಇತ್ಯರ್ಥಕ್ಕೆ ಸಭೆಯನ್ನು ಜಿಲ್ಲಾಧಿಕಾರಿ ಕರೆಯಲಿದ್ದಾರೆ. ಅದುವರೆಗೂ ಸ್ಥಳೀಯರಿಗಿದ್ದ ವಿನಾಯಿತಿಯನ್ನು ಯಥಾಸ್ಥಿತಿ ಮುಂದುವರಿಸಲಾಗುವುದು ಎಂದರು.

ಸಮಿತಿಯ ಅಧ್ಯಕ್ಷ ಶೇಖರ್ ಹೆಜಮಾಡಿ, ಗೌರವಾಧ್ಯಕ್ಷ ಶೇಖಬ್ಬ ಕೋಟೆ, ಪ್ರಧಾನ ಕಾರ್ಯದರ್ಶಿ ಸಂತೋಷ್ ಕುಮಾರ್ ಪಡುಬಿದ್ರೆ, ಹೆಜಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ರೇಷ್ಮಾ ಎ. ಮೆಂಡನ್, ಪಡುಬಿದ್ರೆ ಗ್ರಾಮ ಪಂಚಾಯತ್ ಅಧ್ಯಕ್ಷ ಶಶಿಕಲಾ, ಪ್ರಮುಖರಾದ ನವೀನ್ಚಂದ್ರ ಜೆ. ಸುವರ್ಣ, ವೈ. ಸುಕುಮಾಅರ್, ಶಶಿಕಾಂತ್ ಪಡುಬಿದ್ರೆ, ಗುಲಾಂ ಮುಹಮ್ಮದ್, ಅಬ್ದುಲ್ ಅಝೀಝ್ ಹೆಜಮಾಡಿ, ವಿಶ್ವಾಸ್ ವಿ. ಅಮೀನ್, ಸುಧಾಕರ ಶೆಟ್ಟಿ, ರಾಲ್ಫಿ ಡಿ ಕೋಸ್ತ, ರವಿ ಎಚ್. ಕುಂದರ್, ನಿರ್ಮಲಾ, ಸೈಯದ್ ನಿಝಾಮ್, ಉಮನಾಥ್ ಪಡುಬಿದ್ರೆ, ದಿನೇಶ್ ಫಲಿಮಾರು, ಜಿತೇಂದ್ರ ಪುರ್ಟಾಡೋ, ಮಧು ಆಚಾರ್ಯ, ಅಬ್ದುಲ್ ರಹ್ಮಾನ್ ಕಣ್ಣಂಗಾರ್ ಮತ್ತಿತರರು ಉಪಸ್ಥಿತರಿದ್ದರು.

ವಾರ್ತಾ ಭಾರತಿ ವಾಟ್ಸ್ ಆ್ಯಪ್ ಚಾನೆಲ್ ಗೆ ಸೇರಲು https://whatsapp.com/channel/0029VaA8ju86LwHn9OQpEq28 ಈ ಲಿಂಕ್ ಕ್ಲಿಕ್ ಮಾಡಿ, Follow ಮಾಡುವ ಮೂಲಕ ಕ್ಷಣಕ್ಷಣದ ಅಪ್ಡೇಟ್ ಪಡೆಯಿರಿ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X