Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್...

ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ: ಎಸ್ಸೈ ಸಹಿತ ಇಬ್ಬರ ಅಮಾನತು

ಸಿಐಡಿಯಿಂದ ತನಿಖೆ ಆರಂಭ

ವಾರ್ತಾಭಾರತಿವಾರ್ತಾಭಾರತಿ11 Nov 2024 9:18 PM IST
share
ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣ: ಎಸ್ಸೈ ಸಹಿತ ಇಬ್ಬರ ಅಮಾನತು

ಬ್ರಹ್ಮಾವರ, ನ.11: ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕರ್ತವ್ಯ ಲೋಪ ಎಸಗಿದ ಆರೋಪದಲ್ಲಿ ಬ್ರಹ್ಮಾವರ ಠಾಣೆ ಎಸ್ಸೈ ಸೇರಿದಂತೆ ಇಬ್ಬರು ಪೊಲೀಸರನ್ನು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ.ಅರುಣ್ ಕೆ. ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.

ಚೇರ್ಕಾಡಿ ಗ್ರಾಮದ ಮಹಿಳೆಗೆ ಶನಿವಾರ ರಾತ್ರಿ ಕಿರುಕುಳ ನೀಡಿದ ಆರೋಪದಲ್ಲಿ ಕೇರಳದ ಕೊಲ್ಲಂ ಮೂಲದ ಆರೋಪಿ ಬಿಜು ಮೋನು(45)ನನ್ನು ಪೊಲೀಸರು ಬ್ರಹ್ಮಾವರ ಠಾಣೆಗೆ ಕರೆದುಕೊಂಡು ಬಂದು, ಆತನ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ, ಆರೋಪಿಯನ್ನು ಬಂಧಿಸುವಾಗ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಪೂರ್ಣವಾಗಿ ಪಾಲಿಸದ ಬ್ರಹ್ಮಾವರ ಪೊಲೀಸ್ ಠಾಣೆಯ ಉಪನಿರೀಕ್ಷಕ ಮಧು ಬಿ.ಇ. ಮತ್ತು ಪ್ರಭಾರ ಠಾಣಾಧಿಕಾರಿಯಾಗಿರುವ ಹೆಡ್‌ಕಾನ್‌ಸ್ಟೇಬಲ್ ಸುಜಾತ ಅವರನ್ನು ಅಮಾನತು ಮಾಡಲಾಗಿದೆ ಎಂದು ಎಸ್ಪಿ ಡಾ.ಅರುಣ್ ಕೆ. ತಿಳಿಸಿದ್ದಾರೆ.

ಸಿಐಡಿ ತನಿಖೆ ಆರಂಭ: ಬ್ರಹ್ಮಾವರ ಪೊಲೀಸ್ ಠಾಣೆಯ ಲಾಕಪ್‌ಡೆತ್ ಪ್ರಕರಣದ ತನಿಖೆಗಾಗಿ ಬೆಂಗಳೂರಿನ ಸಿಐಡಿ ಪೊಲೀಸ್ ಅಧೀಕ್ಷಕರು ಹಾಗೂ ಇವರ ತಂಡ ಸೋಮವಾರ ಉಡುಪಿಗೆ ಆಗಮಿಸಿದ್ದು, ಪ್ರಕರಣದ ತನಿಖೆ ಯನ್ನು ಮುಂದುವರಿಸಲಿದ್ದಾರೆ.

ಈ ಪ್ರಕರಣ ಲಾಕಪ್‌ಡೆತ್ ಆಗಿರುವುದರಿಂದ ಇದರ ತನಿಖೆಯನ್ನು ಸಿಐಡಿ ಕೈಗೆತ್ತಿಕೊಳ್ಳುತ್ತದೆ. ಅದರಂತೆ ಬೆಂಗಳೂರಿ ನಿಂದ ಆಗಮಿಸಿದ ಸಿಐಡಿ ತಂಡ, ಬ್ರಹ್ಮಾವರ ಪೊಲೀಸ್ ಠಾಣೆಗೆ ತೆರಳಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರಿಂದ ಮಾಹಿತಿ ಸಂಗ್ರಹಿಸಿದೆ. ಅದೇ ರೀತಿ ಬ್ರಹ್ಮಾವರ ತಾಲೂಕು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ, ಶವಗಾರದಲ್ಲಿನ ಮೃತದೇಹವನ್ನು ಪರಿಶೀಲನೆ ನಡೆಸಿ, ವೈದ್ಯಾಧಿಕಾರಿಗಳ ಜೊತೆ ಮಾತುಕತೆ ನಡೆಸಿದೆ ಎನ್ನಲಾಗಿದೆ.

ಕುಟುಂಬಸ್ಥರಿಂದ ಪ್ರಕರಣ ದಾಖಲು: ಬಿಜು ಮೋನು ಲಾಕಪ್‌ನಲ್ಲಿ ಮೃತಪಟ್ಟಿರುವ ಮಾಹಿತಿಯನ್ನು ಪೊಲೀಸರು ನ.10ರಂದು ಬೆಳಗ್ಗೆ ಕೊಲ್ಲಂನಲ್ಲಿರುವ ಆತನ ಕುಟುಂಬಸ್ಥರಿಗೆ ನೀಡಿದ್ದರು. ಅದರಂತೆ ಅಲ್ಲಿಂದ ಹೊರಟ ಕುಟುಂಬಸ್ಥರು ಇಂದು ಬೆಳಗ್ಗೆ ಬ್ರಹ್ಮಾವರ ತಲುಪಿದ್ದಾರೆ.

ಬೆಳಗ್ಗೆ ಶವಗಾರಕ್ಕೆ ಆಗಮಿಸಿದ ಕುಟುಂಬಸ್ಥರು ಬಿಜು ಮೋನು ಅವರ ಮೃತ ದೇಹವನ್ನು ಪರಿಶೀಲಿಸಿದ್ದರು. ಬಳಿಕ ಬ್ರಹ್ಮಾವರ ಪೊಲೀಸ್ ಠಾಣೆಗೆ ತೆರಳಿದ ಮೃತ ಬಿಜು ಮೋನು ಅವರ ಚಿಕ್ಕಪ್ಪನ ಮಗ ಅನೀಶ್ ಡೆನಿಲ್ ನೀಡಿದ ದೂರಿ ನಂತೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಮರಣೋತ್ತರ ಪರೀಕ್ಷೆ: ಮೃತದೇಹ ಹಸ್ತಾಂತರ

ಲಾಕಪ್ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಇಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ನೀಡಿರುವ ನಿರ್ದೇಶನಗಳಂತೆ ಮೃತದೇಹದ ಪಂಚನಾಮೆಯನ್ನು ಉಡುಪಿ ಸಿವಿಲ್ ಜಡ್ಜ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರು ನಡೆಸಿದರು.

ಕುಟುಂಬಸ್ಥರ ಆಗಮನ ಬಳಿಕವೇ ಬ್ರಹ್ಮಾವರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇರಿಸಲಾದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಸಂಜೆ ವೇಳೆ ಮೃತದೇಹದ ಮರಣೋತ್ತರ ಪರೀಕ್ಷೆಯನ್ನು ಮಣಿಪಾಲದ ಕೆ.ಎಂ.ಸಿ ಆಸ್ಪತ್ರೆಯಲ್ಲಿ ನಡೆಸಲಾಯಿತು.

ಇದರ ಸಂಪೂರ್ಣ ಚಿತ್ರೀಕರಣ ಮಾಡಲಾಗಿದೆ. ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. ಕುಟುಂಬಸ್ಥರು ಮೃತದೇಹವನ್ನು ಕೇರಳಕ್ಕೆ ತೆಗೆದುಕೊಂಡು ಹೋಗಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

‘ಲಾಕಪ್ ಡೆತ್ ಪ್ರಕರಣ ಸಂಬಂಧ ಕೇರಳದ ಕೊಲ್ಲಂನಿಂದ ಬಿಜು ಮೋನು ಕುಟುಂಬಸ್ಥರು ಆಗಮಿಸಿದ್ದಾರೆ. ಈ ಘಟನೆಯ ಬಗ್ಗೆ ಕೂಲಂಕಷ ತನಿಖೆ ಆಗಬೇಕು. ಆ ಮೂಲಕ ಬಿಜು ಮೋನು ಸಾವಿಗೆ ನಿಖರ ಕಾರಣ ತಿಳಿಯಬೇಕು ಮತ್ತು ಕುಟುಂಬಸ್ಥ ರಿಗೆ ನ್ಯಾಯ ಒದಗಿಸಿಕೊಡುವ ಕೆಲಸ ಆಗಬೇಕು. ಈ ಕುರಿತು ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದ್ದೇವೆ. ಅವರೆಲ್ಲ ನ್ಯಾಯ ಒದಗಿಸಿಕೊಡುವ ಭರವಸೆ ನೀಡಿದ್ದಾರೆ’

-ಸುವರ್ಣ ಕುಮಾರ್, ಅಧ್ಯಕ್ಷರು, ಕೇರಳ ಕಲ್ಚರ್ ಅಂಡ್ ಸೋಷಿಯಲ್ ಸೆಂಟರ್

‘ಈ ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆ ಆಗಬೇಕು. ಮನೆಯವರಿಗೆ ಕೂಡ ನ್ಯಾಯ ಸಿಗಬೇಕು ಮತ್ತು ಇದರ ಹಿಂದಿನ ಸತ್ಯ ಬಹಿರಂಗ ಆಗಬೇಕು. ಮರಣೋತ್ತರ ಪರೀಕ್ಷೆ ನಡೆದ ಮೇಲೆ ನೈಜತೆ ಸತ್ಯಾಸತ್ಯತೆ ತಿಳಿದುಬರುತ್ತದೆ. ಮೃತರ ಕಾಲಿನಲ್ಲಿ ಸಣ್ಣಪುಟ್ಟ ಗಾಯಗಳಿವೆ. ಆದರೆ ದೇಹದಲ್ಲಿ ಎಲ್ಲೂ ಗಾಯ ಕಾಣಲಿಲ್ಲ. ಮರಣೋತ್ತರ ಪರೀಕ್ಷೆ ವರದಿ ಬಂದ ಮೇಲೆ ಪೂರ್ಣ ವಿಚಾರ ಬಯಲಾಗುತ್ತದೆ. ಈ ಬಗ್ಗೆ ನಿಷ್ಪಕ್ಷಪಾತ ತನಿಖೆ ಮಾಡಬೇಕು’

-ಈಶ್ವರ್ ಮಲ್ಪೆ, ಸಮಾಜ ಸೇವಕರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X