ಕಾಪು ಕಾರ್ಯನಿರತ ಪತ್ರಕರ್ತರ ಸಂಘದ ದಶಮಾನೋತ್ಸವದ ಲಾಂಛನ, ಮಾಹಿತಿ ಕೈಪಿಡಿ ಬಿಡುಗಡೆ

ಕಾಪು: ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ದಶಮಾನೋತ್ಸವದ ಲಾಂಛನ ಹಾಗೂ ಪತ್ರಕರ್ತರ ಮಾಹಿತಿ ಕೈಪಿಡಿಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಕುರ್ಯ ಬುಧವಾರ ಕಾಪು ಪತ್ರಿಕಾಭವನದಲ್ಲಿ ಬಿಡುಗಡೆಗೊಳಿಸಿದರು.
ಈ ಸಂದರ್ಭ ಮಾತನಾಡಿದ ಅವರು, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ದಶಮಾನೋತ್ಸವದ ಅಂಗವಾಗಿ ಹಮ್ಮಿಕೊಂಡಿರುವ ಹತ್ತು ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯಲಿ ಎಂದು ಶುಭ ಹಾರೈಸಿದರು.
ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕಾರ್ಯದರ್ಶಿ ಸುರೇಶ್ ಎರ್ಮಾಳು, ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಹಮೀದ್ ಪಡುಬಿದ್ರೆ, ಕಾರ್ಯದರ್ಶಿ ಪುಂಡಲೀಕ ಮರಾಠೆ, ಕೋಶಾಧಿಕಾರಿ ಸಂತೋಷ್ ನಾಯಕ್, ಜಿಲ್ಲಾ ಸಂಘದ ಪ್ರತಿನಿಧಿಗಳಾದ ಹರೀಶ್ ಹೆಜ್ಮಾಡಿ, ವಿಜಯ ಆಚಾರ್ಯ ಉಚ್ಚಿಲ, ಕಾಪು ತಾಲೂಕು ಪತ್ರಕರ್ತರ ಸಂಘದ ಪೂರ್ವಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
Next Story




